ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿ ಕೆ ಸುರೇಶ್‌ ದೂರು

Date:

ತಮ್ಮ ಹೆಸರು ದುರುಪಯೋಗಪಡಿಸಿಕೊಂಡು ಹಲವು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ ಕೆ ಸುರೇಶ್‌ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಡಿ ಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ.

ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯದ ಉದ್ಯಮಿಗೂ ಮೋಸ

ಆರೋಪಿ ಸ್ಥಾನದಲ್ಲಿರುವ ಐಶ್ವರ್ಯಗೌಡ ಬಿಲ್ಡರ್, ಚಿನ್ನದ ವ್ಯಾಪಾರಿ ಕಮ್ ಕಾಂಗ್ರೆಸ್ ಮುಖಂಡನಿಗೂ ಸಹ ಕೋಟ್ಯಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಆ ಉದ್ಯಮಿ ತನ್ನ ಹೆಸರು ಬಹಿರಂಗಪಡಿಸಬೇಡಿ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ವಾಸವಿರುವ ಆತ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಾ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾನೆ. ಐಶ್ವರ್ಯ ಗೌಡ ಈ ವ್ಯಕ್ತಿಯಿಂದ 6.5 ಕೋಟಿ ಹಣ ಹಾಗೂ ಒಂದಷ್ಟು ಚಿನ್ನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

ಒಂದೂವರೆ ವರ್ಷದ ಹಿಂದೆ ಈ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ಐಶ್ವರ್ಯ ಗೌಡ ಪರಿಚಯವಾಗಿದ್ದಾರೆ. ಐಷಾರಾಮಿ ಕಾರು, ಬೌನ್ಸರ್, ಗನ್‌ಮ್ಯಾನ್ ಜೊತೆಗೆ ಬಂದು ಆ ಉದ್ಯಮಿಯನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ ಇವರಿಬ್ಬರು ಸೇರಿ ರಿಯಲ್ ಎಸ್ಟೇಟ್ ವ್ಯವಹಾರವನ್ನು ಮಾಡಿದ್ದಾರೆ. ಆರಂಭದಲ್ಲಿ ಎಲ್ಲ ವ್ಯವಹಾರ ಸರಿಯಾಗುವಂತೆ ಈ ವಂಚಕಿ ಐಶ್ವರ್ಯ ಗೌಡ ಮಾಡಿದ್ದಾರೆ.

ಇದಾದ ಬಳಿಕ ಆ ವ್ಯಕ್ತಿಯಿಂದ ಚಿನ್ನ ಹಾಗೂ ನಗದು ರೂಪದಲ್ಲಿ 6.5 ಕೋಟಿ ರೂ. ಹಣವನ್ನು ಪಡೆದಿದ್ದಾರೆ. ಬಳಿಕ ಹಣವನ್ನು ಆತ ವಾಪಸ್‌ ಕೇಳಿದರೆ ಇಂದು, ನಾಳೆ ಎಂದು ಕಥೆ ಹೇಳುತ್ತಾ ಬಂದಿದ್ದಾರೆ ಆಗ ರಾಜ್ಯದ ಪ್ರಭಾವಿ ರಾಜಕಾರಣಿ ಮಧ್ಯಸ್ಥಿಕೆ ವಹಿಸಿ ಸಮಯ ನೀಡುವಂತೆ ಹೇಳಿದ್ದಾರೆ. ಇದೀಗ ಈಕೆಯ 9 ಕೋಟಿ ಗೋಲ್ಡ್ ಮೋಸದ ಕತೆ ಹೊರಬಂದ ಬಳಿಕ ಕಾಂಗ್ರೆಸ್ ಮುಖಂಡನಿಗೆ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಹೀಗಾಗಿ ಆತ ಐಶ್ವರ್ಯ ಗೌಡ ಮೇಲೆ ಮಂಡ್ಯ ಅಥವಾ ಬೆಂಗಳೂರಿನಲ್ಲಿ ದೂರು ದಾಖಲಿಸಲು ದಾಖಲೆ ಸಮೇತ ಸಿದ್ಧರಾಗಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...