ವರದಕ್ಷಿಣೆ ಕಿರುಕುಳ | ಮಗು ಕೊಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಆತ್ಮಹತ್ಯೆ

Date:

ವರದಕ್ಷಿಣೆ ಕಿರುಕುಳ ಮತ್ತು ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಶೃತಿ ಎಂದು ಗುರುತಿಸಲಾಗಿದೆ. ಆಕೆ ತನ್ನ ಮಗಳು ರೋಷಿಣಿಯನ್ನು ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಅವರು ಪಾವಗಡ ತಾಲೂಕಿನ ಗ್ರಾಮವೊಂದರ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ್ದರು ಎಂದು ತಿಳಿದುಬಂದಿದೆ.

ಶೃತಿ ಅವರು 10 ವರ್ಷಗಳ ಹಿಂದೆ, ಚಾರ್ಟರ್ಡ್‌ ಅಕೌಂಟೆಂಟ್‌ ಗೋಪಾಲಕೃಷ್ಣ ಎಂಬಾತನನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು (1ಗಂಡು – 1 ಹೆಣ್ಣು) ಮಕ್ಕಳಿದ್ದರು. ಶೃತಿ ಅವರಿಗೆ ಗೋಪಾಲಕೃಷ್ಣ ವರದಕ್ಷಿಣೆ ವಿಚಾರದಲ್ಲಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಅಲ್ಲದೆ, ಬೇರೊಬ್ಬ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತನ ಕಿರುಕುಳಕ್ಕೆ ಬೇಸತ್ತ ಶೃತಿ ತನ್ನ ಮಗಳನ್ನು ಕೊಂದು, ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ಅನ್ನೂ ಬರೆದಿಟ್ಟಿದ್ದು, ಗಂಡನ ವರದಕ್ಷಿಣೆ ಕಿರುಕುಳ ಮತ್ತು ವಿವಾಹೇತರ ಸಂಬಂಧದ ಬಗ್ಗೆ ಆರೋಪಗಳನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್‌ನೋಟ್ಅನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಶೃತಿ ಅವರ ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...