ಡ್ರೋನ್ ಕ್ಯಾಮೆರಾ ಬಳಕೆ: ವಿಶ್ವೇಶ್ವರ ಭಟ್‌ಗೆ ಆರ್‌ಏಫ್‌ಒ ನೋಟಿಸ್

Date:

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅನುಮತಿ ಇಲ್ಲದೆ ಡ್ರೋನ್ ಕ್ಯಾಮೆರಾ ಬಳಕೆ ಮಾಡಿ ಚಿತ್ರೀಕರಣ ಮಾಡಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯ ಅಧಿಕಾರಿ(ಆರ್‌ಎಫ್‌ಒ) ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರು ಡ್ರೋನ್ ಕ್ಯಾಮರಾ ಬಳಕೆ ಮಾಡಿ ಚಿತ್ರೀಕರಣ ಮಾಡಿದ್ದಾರೆ. ಈ ಬಗ್ಗೆ ಕಾರಣ ಕೇಳಿ ಅರಣ್ಯಾಧಿಕಾರಿಗಳು ಭಟ್‌ ಅವರಿಗೆ ಜನವರಿ 10ರಂದು ನೋಟೀಸ್‌ ನೀಡಿದ್ದಾರೆ.

“ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ದೇವಸ್ಥಾನದ ಬಳಿ ಅನುಮತಿ ಇಲ್ಲದೆ ಡೋನ್ ಮೂಲಕ ಚಿತ್ರಿಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದೀರಿ. ಇದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972 ಸೆಕ್ಷನ್ 28,1(ಬಿ) ಉಲ್ಲಂಘನೆಯಾಗಿದೆ. ಅಲ್ಲದೆ, ನೀವು ನಿಮ್ಮ ಸಾಮಾಜಿಕ ಜಾಲತಾಣದಲ್ಲಿ ನಾನಾ ಚಿತ್ರಗಳನ್ನು ಹಾಗೂ ಪೋಸ್ಟ್ಗಳನ್ನು ಮಾಡಿ ಸಂಜೆ 6 ಗಂಟೆ ಎಂದು ನಮೂದಿಸಿದ್ದೀರಿ ಇದು ವ್ಯಾಪಕ ಚರ್ಚೆಯಾಗುತ್ತಿದ್ದು, ದೇವಾಲಯಕ್ಕೆ ತೆರಳಲು ತಪ್ಪಲಿನಿಂದ ಸಂಜೆ 4 ಗಂಟೆಯ ವರೆಗೆ ಅವಕಾಶವಿದೆ. ಆದ್ದರಿಂದ ಎರಡು ವಿಷಯಗಳ ಸ್ಪಷ್ಟಿಕರಣವನ್ನು ಪತ್ರ ತಲುಪಿದ ಕೂಡಲೇ ತಾವು ಖುದ್ದಾಗಿ ಹಾಜರಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಬಂಡೀಪುರ ಉಪ ವಿಭಾಗ, ಬಂಡೀಪುರ ರವರ ಕಛೇರಿಗೆ ಹಾಜರಾಗಿ ಸದರಿ ಕಾರಣ ಕೇಳಿ ನೋಟಿಸ್ಗೆ ಉತ್ತರಿಸಬೇಕು” ಎಂದು ನೋಟಿಸ್ನಲ್ಲಿ ಆರ್ಎಫ್ ಮಂಜುನಾಥ್ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆಟವಾಡುತ್ತಿದ್ದ ಬಾಲಕ ನೀರಿನ ಸಂಪ್‌ಗೆ ಬಿದ್ದು ಸಾವು

ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಡ್ರೋನ್ ಕ್ಯಾಮರಾದಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ವರದಿ ನೀಡುವಂತೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿಗೆ ಬಂಡೀಪುರ ಸಹಾಯಕ ಅರಣ್ಯ ಸಂರಣ್ಯಾಧಿಕಾರಿ ಸೂಚಿಸಿದ್ದಾರೆ. ಹಿನ್ನೆಲೆಯಲ್ಲಿ ವಿಶ್ವೇಶ್ವರ ಭಟ್‌ರಿಗೆ ನೋಟಿಸ್ ಜಾರಿಯಾಗಿದೆ.

WhatsApp Image 2024 01 14 at 2.07.58 PM

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...