ಬೆಂಗಳೂರು | ವಿದೇಶಿ ಯೂಟ್ಯೂಬರ್ ಮೇಲೆ ಸ್ಥಳೀಯ ವ್ಯಾಪಾರಿ ಹಲ್ಲೆ; ಬಂಧನ

Date:

  • ನವಾಬ್ ವಿರುದ್ಧ ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 92 ರ ಅಡಿ ಪ್ರಕರಣ ದಾಖಲು
  • ‘ಭಾರತದ ಕಳ್ಳರ ಮಾರುಕಟ್ಟೆಯಲ್ಲಿ ದಾಳಿ’ ಎಂಬ ಶಿರ್ಷಿಕೆಯಡಿ ವಿಡಿಯೊ ಪೋಸ್ಟ್

ರಾಜಧಾನಿ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವಿದೇಶಿ ಪ್ರವಾಸಿಗರೊಬ್ಬರ ಮೇಲೆ ಸ್ಥಳೀಯ ವ್ಯಾಪಾರಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪುಂಡನ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ನೆದರ್‌ಲ್ಯಾಂಡ್ ಪ್ರಜೆ ಪೆಡ್ರೋ ಮೊಟಾ ಹಲ್ಲೆಗೊಳಗಾದವರು. ಇವರು ಯೂಟ್ಯೂಬರ್ ಆಗಿದ್ದು, ಚಿಕ್ಕಪೇಟೆಯಲ್ಲಿ ವಿಡಿಯೋ ಶೂಟ್‌ ಮಾಡುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಾಪಾರಿಯೊಬ್ಬ ಇವರನ್ನು ಎಳೆದಾಡಿ ವಿಡಿಯೊ ಮಾಡಲು ಅಡ್ಡಿಪಡಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಗೊಳಗಾದ ವ್ಯಕ್ತಿ ಯುಟ್ಯೂಬರ್ ಪೆಡ್ರೊ ಮೋಟಾ ತನ್ನ ಯೂಟ್ಯೂಬ್ ಚಾನೆಲ್ ‘ಮ್ಯಾಡ್ಲಿ ರೋವರ್’ ನಿಂದ ಭಾರತದ ಕಳ್ಳರ ಮಾರುಕಟ್ಟೆಯಲ್ಲಿ ದಾಳಿ ಎಂಬ ಶಿರ್ಷಿಕೆಯಡಿ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

“ಭಾರತದಲ್ಲಿ ಪ್ರಯಾಣಿಸುವ ವಿದೇಶಿಗರು ಬೆಂಗಳೂರಿನಲ್ಲಿ ಕಳ್ಳರ ಮಾರುಕಟ್ಟೆಯನ್ನು ಅನುಭವಿಸುತ್ತಾರೆ. ಇದನ್ನು ‘ಸಂಡೇ ಮಾರ್ಕೆಟ್’ ಅಥವಾ ‘ಕಳ್ಳರ ಮಾರುಕಟ್ಟೆ’ ಎಂದು ಕರೆಯುತ್ತಾರೆ. ಆ ಪ್ರದೇಶವನ್ನು ಅನ್ವೇಷಿಸಲು ಪ್ರಾರಂಭಿಸಿದೆ. ಈ ವೇಳೆ ಕೋಪಗೊಂಡ ಓರ್ವ ವ್ಯಕ್ತಿ ನನ್ನ ಕೈ ಮತ್ತು ತೋಳನ್ನು ಹಿಡಿದು ತಿರುಚುವ ಮೂಲಕ ನನ್ನ ಮೇಲೆ ದಾಳಿ ಮಾಡಿದನು. ನಾನು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಅವರು ನನ್ನ ಹಿಂದೆ ಬರುತ್ತಿದ್ದರು. ನನ್ನ ಕೈ ಬಿಡಲು ಅವರಲ್ಲಿ ಮನವಿ ಮಾಡಿದೆ” ಎಂದು ಮೋಟಾ ಬರೆದುಕೊಂಡಿದ್ದಾರೆ.

ಮಾರ್ಚ ತಿಂಗಳಿನಲ್ಲಿ ನಡೆದ ಘಟನೆಯ ವಿಡಿಯೊ ಅನ್ನು ಮೋಟಾ ಸೋಮವಾರ ಯೂಟ್ಯೂಬ್‌ಗೆ ಅಪ್ಲೋಡ್‌ ಮಾಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಂಗಡಿಯವನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸರನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸುರಕ್ಷಿತ ಮಟ್ಟಕ್ಕಿಂತ ಕೆಟ್ಟದಾದ ಬೆಂಗಳೂರಿನ ವಾಯು ಗುಣಮಟ್ಟ: ವರದಿ

“ವಿದೇಶಿ ಪೆಡ್ರೊ ಮೋಟಾ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ದೂರಿಗೆ ಸಂಬಂಧಿಸಿದಂತೆ, ನವಾಬ್ ಹಯಾತ್ ಷರೀಫ್ ವಿರುದ್ಧ ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 92 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ಬಿ ನಿಂಬರಗಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...