ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ : ರಾಘವೇಂದ್ರ ಶೆಟ್ಟಿಗಾರ್

Date:

ಬೆಂಗಳೂರಿನಲ್ಲಿ ಧೂಮಪಾನ ಮಾಡದ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಮಂಡಳಿ ಉಪ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್ ಅವರು ತಿಳಿಸಿದರು.

ನಗರದ ದಕ್ಷಿಣ ವಲಯ ಕಚೇರಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, “ನಗರದಲ್ಲಿ ಕೋಟ್ಪಾ ಕಾಯ್ದೆ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ, ಕಾಯ್ದೆ ಉಲ್ಲಂಘಿಸುವವರ ವಿರುದ್ದ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ಪೀಳಿಗೆಗೆ ಉತ್ತಮ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೈಜೋಡಿಸಬೇಕು” ಎಂದು ಹೇಳಿದರು.

ಹಿರಿಯ ಪೋಲಿಸ್ ಅಧಿಕಾರಿ ಬದ್ರಿನಾಥ್ ಮಾತನಾಡಿ, “ರಸ್ತೆ ಬದಿಯ ಸಣ್ಣ ಸಣ್ಣ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದರ ಮೇಲೆ ನಿಗಾವಹಿಸಿ ತಡೆಯಬೇಕು. ಹುಕ್ಕಾಬಾರ್, ಬಾರ್ ಮತ್ತು ರೆಸ್ಟೊರೆಂಟ್, ತಂಬಾಕು ಉತ್ಪನ್ನ ಮಾರಾಟಗಾರರು ಕಾಯ್ದೆ ಉಲ್ಲಂಘಿಸಿರುವ ವಿರುದ್ದ ಕ್ರಮ ಜರುಗಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರ್ ಮಾತನಾಡಿ, “ಶಾಲಾ-ಕಾಲೇಜು ಪಕ್ಕದಲ್ಲಿ ತಂಬಾಕು ಮಾರಾಟ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಯ್ದೆ ಉಲ್ಲಂಘನೆ ಮಾಡುವ ಕಡೆ ಪಾಲಿಕೆ ಆರೋಗ್ಯಾಧಿಕಾರಿಗಳು ಪೊಲೀಸ್ ಸಹಯೋಗದೊಂದಿಗೆ ಭೇಟಿ ನೀಡಿ ತಪಾಸಣೆ ನಡೆಸಿ ದಂಡ ವಿಧಿಸಲಾಗುವುದು” ಎಂದು ಹೇಳಿದರು.

ಕಾರ್ಯಾಗಾರದಲ್ಲಿ ದಕ್ಷಿಣ ವಲಯ ಆರೋಗ್ಯಾಧಿಕಾರಿ ಡಾ. ಕಲ್ಪನಾ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರ್, ಆರೋಗ್ಯಾಧಿಕಾರಿಗಳು, ಪೋಲಿಸ್, ಅಬಕಾರಿ, ಶಿಕ್ಷಣ ಇಲಾಖೆ, ಆಹಾರ ಮತ್ತು ಸುರಕ್ಷತಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...