ಮೀಲಾದುನ್ನಬಿ ಸಂಭ್ರಮ | ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ

Date:

ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನಲ್ಲಿ ಮುಸ್ಲಿಂ ಬಾಂಧವರು ಮೀಲಾದುನ್ನಬಿಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರ್ಗಗಳಲ್ಲಿ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ನಗರ ಪೊಲೀಸರು ಹಲವೆಡೆ ಸಂಚಾರ ಬದಲಾವಣೆ ಮಾಡಿದ್ದಾರೆ.

ಕೆ.ಜಿ.ಹಳ್ಳಿ, ಪುಲಿಕೇಶಿನಗರ, ಶಿವಾಜಿನಗರ ಭಾಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆ.ಜಿ.ಹಳ್ಳಿ, ಪುಲಿಕೇಶಿನಗರ ಮತ್ತು ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಮಾರ್ಗಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ಸಂಚಾರ ನಿಲ್ಲಿಸಲಾಗುವುದು.
  • ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆಗೆ ಹೋಗುವ ಮಾರ್ಗ ಮುಚ್ಚಲಾಗುವುದು.
  • ಎಂ.ಎಂ. ರಸ್ತೆಯಲ್ಲಿ ಮಾಸ್ಕ್ ಜಂಕ್ಷನ್‌ನಿಂದ ನೇತಾಜಿ ಜಂಕ್ಷನ್ ಕಡೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೆ ಬರಲಿದೆ.
  • ನೇತಾಜಿ ಜಂಕ್ಷನ್‌ನಿಂದ ಹೇನ್ಸ್ ಜಂಕ್ಷನ್‌ವರೆಗೆ ಹೇನ್ಸ್ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು

  • ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರಕ್ಕೆ: ಹೆಣ್ಣೂರು – ಕಾಚರಕನಹಳ್ಳಿ – ಲಿಂಗರಾಜಪುರಂ ಪ್ರೈಓವರ್ – ರಾಬರ್ಟ್‌ನ್ ರಸ್ತೆ – ಹೇನ್ಸ್ ರಸ್ತೆ ಮೂಲಕ.
  • ಶಿವಾಜಿನಗರದಿಂದ ನಾಗವಾರಕ್ಕೆ: ಸ್ಪೆನ್ಸರ್ ರಸ್ತೆ – ಕೋಲ್ಸ್ ರಸ್ತೆ – ವೀಲರ್ಸ್ ರಸ್ತೆ ಮುಖಾಂತರ.
  • ಆರ್.ಟಿ.ನಗರದಿಂದ ನಾಗವಾರಕ್ಕೆ: ಕಾವಲ್ ಬೈರಸಂದ್ರ – ಪುಷ್ಪಾಂಜಲಿ ಟಾಕೀಸ್ – ವೀರಣ್ಣ ಪಾಳ್ಯ ಮೂಲಕ.
  • ಟ್ಯಾನರಿ ರಸ್ತೆ ಬಳಿಯಿಂದ ನಾಗವಾರ ಕಡೆಗೆ: ನೇತಾಜಿ ಜಂಕ್ಷನ್ – ಮಾಸ್ಕ್ ಜಂಕ್ಷನ್ – ಕ್ಲಾರೆನ್ಸ್ ರೈಲ್ವೆ ಓವರ್‌ಬ್ರಿಜ್ – ಹೆಣ್ಣೂರು ರಸ್ತೆ – ಲಿಂಗರಾಜಪುರಂ ಪ್ರೈಓವರ್ ಮೂಲಕ.
  • ಮಾಸ್ಕ್ ಜಂಕ್ಷನ್‌ನಿಂದ ನೇತಾಜಿ ಜಂಕ್ಷನ್ ಕಡೆಗೆ: ಕೋಲ್ಸ್ ರಸ್ತೆ – ಸೌಂಡರ್ಸ್ ರಸ್ತೆ – ಸೆಂಟ್ ಜಾನ್ಸ್ ಚರ್ಚ್ ರಸ್ತೆ – ಕೋಲ್ಸ್ ಪಾರ್ಕ್ ಜಂಕ್ಷನ್ – ಹೇನ್ಸ್ ಜಂಕ್ಷನ್ ಮೂಲಕ.
  • ನೇತಾಜಿ ಜಂಕ್ಷನ್‌ನಿಂದ ಹೇನ್ಸ್ ಜಂಕ್ಷನ್ ಕಡೆಗೆ: ಎಂ.ಎಂ ರಸ್ತೆ – ಮಾಸ್ಕ್ ರಸ್ತೆ – ಕೋಲ್ಸ್ ರಸ್ತೆ – ಸೌಂಡರ್ಸ್ ರಸ್ತೆ – ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ.

ಪಾರ್ಕಿಂಗ್ ನಿಷೇಧ

  • ಪಾಟರಿ ಸರ್ಕಲ್‌ನಿಂದ ನಾಗವಾರ ಸಿಗ್ನಲ್,
  • ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಪುರ ಕಾ&ಸು ಪೊಲೀಸ್ ಠಾಣೆವರೆಗೆ,
  • ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ ಟೆಂಟ್ ಜಂಕ್ಷನ್‌ವರೆಗೆ,
  • ನೇತಾಜಿ ರಸ್ತೆ, ಹೇನ್ಸ್ ರಸ್ತೆ, ಎಂ.ಎಂ ರಸ್ತೆ, ಮಾಸ್ಕ್ ರಸ್ತೆ, ಕೋಲ್ಸ್ ರಸ್ತೆ, ಸೌಂಡರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮತ್ತು ಮಿಲ್ಲರ್ಸ್ ರಸ್ತೆಗಳ ಎರಡೂ ಬದಿಗಳಲ್ಲಿ ವಾಹನ ನಿಲ್ಲಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...