ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಸಾಧ್ಯತೆ | ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ ಎಸ್ಕಾಂಗಳು

Date:

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ಇನ್ನಿತರ ಕಂಪನಿಗಳು ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸದ್ಯ ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ ಚಿಂತನೆ ನಡೆಸಿದೆ.

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ), ಕಲಬುರಗಿ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ), ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್-ಮೈಸೂರು) ಸಹ ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ.

ಕಲ್ಲಿದ್ದಲು ಖರೀದಿ, ವಿದ್ಯುತ್ ಖರೀದಿ ಹಾಗೂ ವಿದ್ಯುತ್ ಸರಬರಾಜು ವೆಚ್ಚ ಸೇರಿದಂತೆ ಹಲವು ಕಾರಣಗಳಿಂದ ನಿರ್ವಹಣೆಗೆ ಹೊರೆಯಾಗುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು 2024-25ನೇ ಸಾಲಿಗೆ ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಕೆಇಆರ್‌ಸಿಗೆ ಮನವಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ್ದ ಎಸ್ಕಾಂಗಳು ಈ ಬಾರಿಯೂ ವಿದ್ಯುತ್ ದರ ಪರಿಷ್ಕರಣೆ ಮಾಡಲು ಸಿದ್ಧತೆ ನಡೆಸುತ್ತಿದೆ. ಪ್ರತಿ ಯೂನಿಟ್‌ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಯೂನಿಟ್‌ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್‌ಸಿ ಮುಂದಾಗಿದೆ.

ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ಬೆಸ್ಕಾಂ ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ. ಬೆಸ್ಕಾಂ ಮಾತ್ರವಲ್ಲದೇ ಉಳಿದ ನಾಲ್ಕು ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ನಾಲ್ಕು ಎಸ್ಕಾಂಗಳಿಂದ 50-60 ಪೈಸೆ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಎಲ್ಲಾ ಪರಿಷ್ಕೃತ ದರಗಳು ಏಪ್ರಿಲ್ 1 ರಿಂದಲೇ ಜಾರಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.

ಬೆಸ್ಕಾಂ ಸೇರಿ ಇತರೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ 49 ರಿಂದ 60 ಪೈಸೆಯವರಿಗೂ ವಿದ್ಯುತ್ ದರ ಏರಿಸುವಂತೆ ಬೇಡಿಕೆ ಇಟ್ಟಿವೆ. ಈ ಬಾರಿ ಜನರಿಗೆ ಸಮಸ್ಯೆ ಆಗದಂತೆ ವಿದ್ಯುತ್ ದರ ಏರಿಕೆ ಮಾಡುತ್ತೇವೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂದಿನ 2 ದಿನ ರಾಜ್ಯದ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಎಸ್ಕಾಂಗಳು ಪ್ರತಿ ವರ್ಷದಂತೆ ಈ ವರ್ಷವೂ ದರ ಪರಿಷ್ಕರಣೆ ಪ್ರಸ್ತಾವನೆ ಸಲ್ಲಿಸಿವೆ. ಗೃಹ ಜ್ಯೋತಿ ಯೋಜನೆ ಜಾರಿ ಬಳಿಕ ಮೊದಲ ಬಾರಿಗೆ ಎಸ್ಕಾಂಗಳು ಬೆಲೆ ಏರಿಕೆ ಪ್ರಸ್ತಾಪ ಮಾಡಿವೆ. ದರ ಪರಿಷ್ಕರಣೆಯಿಂದ ಗೃಹ ಜ್ಯೋತಿ ಗ್ರಾಹಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ, ಗೃಹಜ್ಯೋತಿ ಯೋಜನೆಗೆ ಅರ್ಹತೆ ಪಡೆಯದ ಗೃಹ ಬಳಕೆದಾರರು ಹಾಗೂ ವಾಣಿಜ್ಯ ಗ್ರಾಹಕರಿಗೆ ಹೊರೆಯಾಗಲಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್ ಕಾದಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...