ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ರೂಪಿಸಿ: ಸಮಾನ ಮನಸ್ಕರ ಆಗ್ರಹ

Date:

ನಾಗರಿಕ ಸಮಾಜಕ್ಕೆ ಮರ್ಯಾದೆಗೇಡು ಹತ್ಯೆ ಮಾರಕವಾಗಿದೆ‌. ತನ್ನದೇ ಸ್ವಂತ ಮಗಳನ್ನು ತಂದೆಯೊಬ್ಬ ಮೃಗೀಯವಾಗಿ ಕೊಂದಿದ್ದಾರೆ. ಇಂತಹ ಹೇಯ ಕೃತ್ಯವನ್ನ ಜಾತಿವಾದಿ ಸಮಾಜ ಸಮರ್ಥಿಸುತ್ತಿದೆ. ಜನಪ್ರತಿನಿಧಿಗಳು ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ. ಜಾತಿ ದೌರ್ಜನ್ಯ, ಮರ್ಯಾದೆಗೇಡು ಹತ್ಯೆ ಹಾಗೂ ಜಾತೀಯತೆಯನ್ನು ತೊಡೆದು ಹಾಕಲು ಸರ್ಕಾರಗಳು ಬದ್ದತೆಯಿಂದ ಕೆಲಸ ಮಾಡಬೇಕು. ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹಗಳು ಮುಖ್ಯ. ಕುಟುಂಬಗಳನ್ನು ಎದುರು ಹಾಕಿಕೊಂಡು ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಸರ್ಕಾರ ರಕ್ಷಣೆ ಒದಗಿಸಬೇಕು. ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ರೂಪಿಸಬೇಕು ಎಂದು ಜಾತ್ಯತೀತ ಸಮಾನ ಮನಸ್ಕರು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದಿರುವ ಮರ್ಯಾದೆಗೇಡು ಹತ್ಯೆಯನ್ನು ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾನ ಮನಸ್ಕರು ‘ಖಂಡನಾ ಸಭೆ’ ನಡೆಸಿದ್ದಾರೆ. ಅಂತರ್ಜಾತಿ ವಿವಾಹವಾಗಿದ್ದ ಕಾರಣಕ್ಕೆ ಹುಬ್ಬಳ್ಳಿಯ 6 ತಿಂಗಳ ಗರ್ಭಿಣಿ ಮಾನ್ಯ ಅವರನ್ನು ಆಕೆಯ ತಂದೆ ಮತ್ತು ಸಂಬಂಧಿಗಳು ಭೀಕರವಾಗಿ ಕೊಂದಿದ್ದಾರೆ. ಆಕೆಯ ಪತಿ, ದಲಿತ ಸಮುದಾಯದ ವಿವೇಕಾನಂದ ಮತ್ತು ಅವರ ಪೋಷಕರ ಮೇಲೂ ಹಲ್ಲೆ ನಡೆಸಿದ್ದಾರೆ. ಈ ಭೀಕರ ಕೃತ್ಯವು ಸಮಾಜ ಆತ್ಮಸಾಕ್ಷಿಯನ್ನು ಪ್ರಶ್ನಿಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವ ಗೌರವದ ವಿಚಾರವೂ ಇಲ್ಲ. ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಈ ಹತ್ಯೆಗಳು ಜಾತಿ ಮತ್ತು ಪಿತೃಪ್ರಭುತ್ವ ಸಮಾಜದ ಸಾಧನಗಳಾಗಿವೆ. ಭಯ ಮತ್ತು ಭಯೋತ್ಪಾದನೆಯ ಮೂಲಕ ಜಾತಿ ವ್ಯವಸ್ಥೆಯನ್ನು ಹೇರುವ, ಮಹಿಳೆಯರ ದೇಹ ಮತ್ತು ಸ್ವಾತಂತ್ರ್ಯವನ್ನು ನಿಯಂತ್ರಿಸಲು ನಿರಂತರವಾಗಿ ಯತ್ನಿಸಲಾಗುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯ. ಇಂತಹ ಕೃತ್ಯಗಳು ಸಂವಿಧಾನದ ಆಶಯವಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೂಲಭೂತ ಮೌಲ್ಯಗಳಿಗೆ ಹೊಡೆತ ನೀಡುತ್ತವೆ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮರ್ಯಾದೆಗೇಡು ಹತ್ಯೆಗಳು ಕಠಿಣ ಶಿಕ್ಷೆಗೆ ಅರ್ಹವಾದ ಅನಾಗರಿಕ ಮತ್ತು ನಾಚಿಕೆಗೇಡಿನ ಕೊಲೆ ಕೃತ್ಯಗಳು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಜಾತಿ ವ್ಯವಸ್ಥೆಯು ಭಾರತಕ್ಕೆ ಎದುರಾಗಿರುವ ಶಾಪವಾಗಿದೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಂವಿಧಾನದ ಆಶಯವನ್ನು ಬಲಪಡಿಸುತ್ತವೆ ಎಂಬುದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಮರ್ಯಾದೆಗೇಡು ಹತ್ಯೆಗಳು ಮತ್ತು ಜಾತಿ ದೌರ್ಜನ್ಯಗಳನ್ನು ತಡೆಗಟ್ಟಲು, ಪರಿಹಾರ ಕ್ರಮಗಳನ್ನು ರೂಪಿಸಲು ಹಾಗೂ ಶಿಕ್ಷಾರ್ಹ ಕ್ರಮಗಳನ್ನು ಜಾರಿಗೊಳಿಸಲು ನ್ಯಾಯಾಲಯವು ಸರ್ಕಾರಗಳಿಗೆ ಸೂಚನೆ ನೀಡಿದೆ. ಆದರೆ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಪರಿಣಾಮ, ಇಂತಹ ಹೇಯ ಕೃತ್ಯಗಳು ನಡೆಯುತ್ತಿವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  1. ಮಾನ್ಯ ಅವರ ಪತಿಯ ಕುಟುಂಬಕ್ಕೆ ಸರ್ಕಾರವು ರಕ್ಷಣೆ ಮತ್ತು ಪರಿಹಾರ ನೀಡಬೇಕು.
  2. ವಿವೇಕಾನಂದ ಅವರ ಬದುಕಿನ ಖಾತ್ರಿಗಾಗಿ ಅವರಿಗೆ ಸರ್ಕಾರಿ ಉದ್ಯೋಗ ಒದಗಿಸಬೇಕು.
  3. ಪ್ರಕರಣದಲ್ಲಿ ಸರ್ಕಾರವು ನ್ಯಾಯಯುತ, ತ್ವರಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕೃತ್ಯ ಎಸಗಿದ ಮತ್ತು ಕೃತ್ಯಕ್ಕೆ ಪ್ರೋತ್ಸಾಹ ನೀಡಿದ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  4. ರಾಜ್ಯ ಸರ್ಕಾರವು ಸಾರ್ವಜನಿಕ ಸಮಾಲೋಚನೆ ಸೇರಿದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರಲ್ಲಿ ಮರ್ಯಾದೆಗೇಡು ಅಪರಾಧಗಳನ್ನು ತಡೆಗಟ್ಟುವಿಕೆ, ಸಂತ್ರಸ್ತರ ರಕ್ಷಣೆ, ಸಾಕ್ಷಿಗಳ ರಕ್ಷಣೆ, ಪರಿಹಾರ ಕ್ರಮಗಳು ಹಾಗೂ ವಿವಾಹ ಆಯ್ಕೆಯ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕನ್ನು ದೃಢೀಕರಿಸಲು ಮತ್ತು ರಕ್ಷಿಸಲು ಅಗತ್ಯ ಕ್ರಮಗಳನ್ನು ಒಳಗೊಂಡಿರಬೇಕು.
  5. ಮರ್ಯಾದೆಗೇಡು ಹತ್ಯೆಗಳ ತಡೆಗೆ ಸಂಬಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.
  6. ಜಾತಿ ಆಧಾರಿತ ಹಿಂಸೆ ಮತ್ತು ಪಿತೃಪ್ರಧಾನ ಧೋರಣೆಗಳು ಎದುರಿಸಲು ಮತ್ತು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಾಂವಿಧಾನಿಕ ಮೌಲ್ಯಗಳನ್ನು ಉತ್ತೇಜಿಸಲು ಪೊಲೀಸ್, ಸ್ಥಳೀಯ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಒಳಗೊಂಡ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು.
  7. ಸಂವಿಧಾನದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವದ ಆಶಯಗಳನ್ನು ಖಾತ್ರಿಪಡಿಸಲು ಸರ್ಕಾರಗಳು ಜಾತಿಯ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ದಲಿತ ಸಂಘರ್ಷ ಸಮಿತಿ, ಡಿಎಸ್‌ಎಸ್‌ ಒಕ್ಕೂಟ, ತಮಟೆ ಮಾಧ್ಯಮ, ಎಐಎಸ್‌ಎ, ಸ್ಲಂ ಜನಾಂದೋಲನ ಕರ್ನಾಟಕ, ಸ್ಲಂ ಜನರ ಸಂಘಟನೆ ಕರ್ನಾಟಕ, ಜನವಾದಿ ಮಹಿಳಾ ಸಂಘಟನೆ, ಬಯಲು ಬಳಗ, ಎಐಸಿಸಿಟಿಯು, ಎಐಎಂಎಸ್‌ಎಸ್, ಎಐಪಿಡಬ್ಲ್ಯುಎ, ಎನ್‌ಎಫ್‌ಐಡಬ್ಲ್ಯೂ, ಡಿಎಚ್‌ಎಸ್‌, ಸಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ, PUCL – ಕರ್ನಾಟಕ, ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಹಲವು ಪದಾಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...