ದೆಹಲಿ, ಪಂಜಾಬ್ ಮಾದರಿಯಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ: ಸಿದ್ದರಾಮಯ್ಯಗೆ ಎಎಪಿ ಪತ್ರ

Date:

ದೆಹಲಿ ಮತ್ತು ಪಂಜಾಬ್ ಮಾದರಿಯಲ್ಲಿ ರಾಜ್ಯದ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಳೆದ ಒಂದು ವಾರದಿಂದ ರಾಜ್ಯದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ, ತುಮಕೂರು ಸಿದ್ಧಗಂಗಾ ಮಠದಿಂದ ಬೆಂಗಳೂರಿಗೆ ಬೃಹತ್ ಪಾದಯಾತ್ರೆ ಮೂಲಕ ಆಗಮಿಸಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಮತ್ತು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದೆ.

“ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 10 ಸಾವಿರಕ್ಕಿಂತ ಹೆಚ್ಚಿನ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇವರಿಗೆ ಸರಿಯಾದ ವೇತನ ಸಿಗುತ್ತಿಲ್ಲ. ಸಾವಿರಾರು ಉಪನ್ಯಾಸಕರ ವಯೋಮಿತಿ ಮೀರುತ್ತಿದ್ದು, ಕೆಲಸ ಕಾಯಂ ಆಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಅತಿಥಿ ಉಪನ್ಯಾಸಕರ ವೇತನ ಕಡಿಮೆ ಇದ್ದು, ಅದೂ ಕೂಡ ಸಮಯಕ್ಕೆ ಸರಿಯಾಗಿ ಪಾವತಿಯಾಗುತ್ತಿಲ್ಲ. ಅತಿಥಿ ಉಪನ್ಯಾಸಕ ಎನ್ನುವ ಅವೈಜ್ಞಾನಿಕ ಪದ್ಧತಿಯಿಂದ ಶಿಕ್ಷಣದ ಗುಣಮಟ್ಟ ಕೂಡ ಹಾಳಾಗುತ್ತಿದೆ” ಎಂದು ಮುಖ್ಯಮಂತ್ರಿ ಚಂದ್ರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಂಪಿ ಕನ್ನಡ ವಿವಿ | ಮೂವರು ಸಾಧಕರಿಗೆ ನಾಡೋಜ ಗೌರವ, ಜ. 10ರಂದು ಪ್ರದಾನ

ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವುದಾಗಿ ಕಾಂಗ್ರೆಸ್ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಭರವಸೆ ನೀಡಿತ್ತು. ಈಗ ಕೊಟ್ಟ ಮಾತಿನಂತೆ ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರದ ಮಾದರಿಯಲ್ಲಿ ವಿಶೇಷ ನಿಯಮಾವಳಿ ರೂಪಿಸಿ ಸೇವೆ ಕಾಯಂ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...