‘ಹೆಚ್‌ಎಸ್‌ಆರ್‌ಪಿ’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17ರವರೆಗೂ ಅವಕಾಶ; ಸಾರಿಗೆ ಇಲಾಖೆ

Date:

ಹಳೆಯ ವಾಹನಗಳಿಗೆ ‘ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌’ (ಹೆಚ್​ಎಸ್​ಆರ್​ಪಿ) ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿತ್ತು. ಇದೀಗ, ಈ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ವಾಹನ ಮಾಲೀಕರು ಯಾವುದೇ ತರಾತುರಿಯಿಲ್ಲದೇ ಎಚ್‌ಎಸ್‌ಆರ್‌ಪಿ ಫಲಕವನ್ನು ತಮ್ಮ ವಾಹನಗಳಿಗೆ ಅಳವಡಿಸಿಕೊಳ್ಳಬಹುದಾಗಿದೆ.

2019ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾಗಿರುವ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (ಹೆಚ್​ಎಸ್​ಆರ್​ಪಿ) ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿದೆ ಎಂದು ವಾಹನ ಮಾಲೀಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಇದೀಗ, ಫಲಕ ಅಳವಡಿಸಿಕೊಳ್ಳಲು ವಾಹನ ಮಾಲೀಕರಿಗೆ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ. 2023ರ ನವೆಂಬರ್ 17 ಬದಲಾಗಿ 2024ರ ಫೆಬ್ರವರಿ 17ಕ್ಕೆ ಡೆಡ್ ಲೈನ್ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, “ಹೆಚ್​ಎಸ್​ಆರ್​ಪಿ ಅಳವಡಿಕೆ ಕಾರ್ಯ ರಾಜ್ಯದಲ್ಲಿ ನಡೆಯುತ್ತಿದೆ. ಕೆಲವರು ಕೋರ್ಟ್‌ಗೆ ತೆರಳಿದ ಕಾರಣ ವಿಳಂಬವಾಗಿದೆ. ಈ ಪ್ರಕರಣ ಇನ್ನೂ ಕೋರ್ಟ್‌ನಲ್ಲಿದೆ. ವಾಹನ ಮಾಲೀಕರ ಹಿತದೃಷ್ಟಿಯಿಂದ ಗಡುವನ್ನು ಮೂರು ತಿಂಗಳ ಕಾಲ ದಂಡ ಶುಲ್ಕವಿಲ್ಲದೆ ವಾಹನ ಮಾಲೀಕರು ಫಲಕ ಅಳವಡಿಸಿಕೊಳ್ಳಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಲಸದಿಂದ ತೆಗೆದಿದ್ದ ಕಂಪನಿ; ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ಯುವತಿ

ಏನಿದು ಹೆಚ್​ಎಸ್​ಆರ್​ಪಿ ಫಲಕ?

ಹೆಚ್​ಎಸ್​ಆರ್​ಪಿ ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...