ಮೇ 11ರ ಮಧ್ಯರಾತ್ರಿಯವರೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ: ಬಿಎಂಆರ್‌ಸಿಎಲ್

Date:

  • ಮೇ 10ರಂದು ವಿಧಾನಸಭಾ ಚುನಾವಣೆಯ ಮತದಾನ
  • ಮೇ 11 ರಂದು ರಾತ್ರಿ 12.05ಕ್ಕೆ ಹೊರಡಲಿದೆ ಕೊನೆಯ ರೈಲು

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನೆಲೆ, ಮೇ 11ರ ಮಧ್ಯರಾತ್ರಿಯವರೆಗೆ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.

ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ)ಗಳಿಂದ ಕೊನೆಯ ರೈಲು ಸೇವೆಯು ಮೇ 11 ರಂದು 12.05 ಗಂಟೆಗೆ ಹೊರಡಲಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಕೊನೆಯ ರೈಲು ಸೇವೆಯು ಮೇ 11 ರಂದು 12.35 ಗಂಟೆಗೆ ಎಲ್ಲ ನಾಲ್ಕು ದಿಕ್ಕುಗಳ ಕಡೆಗೆ ಅಂದರೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆಯೆಡೆಗೆ ಹೊರಡಲಿದೆ. ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ಬಿಎಂಆರ್‌ಸಿಎಲ್ ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಮಾಧ್ಯಮಗಳಲ್ಲಿ ಚುನಾವಣಾ ಪ್ರಚಾರಕ್ಕೆ ತೆರೆ: ತುಷಾರ್ ಗಿರಿನಾಥ್

ಮೇ 8ರ ಸಂಜೆಯಿಂದ ಪಬ್‌ ಬಾರ್ ಬಂದ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಮೇ 8ರ ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಸಂಜೆ ಐದು ಗಂಟೆ ನಂತರ ಯಾವುದೇ ಸಭೆ, ಸಮಾರಂಭಗಳಿಗೆ ಅವಕಾಶ ಇಲ್ಲ. ಇಂದಿನಿಂದ ಮತದಾನ ಪ್ರಕ್ರಿಯೆ ಮುಗಿಯುವವರೆಗೂ ಮದ್ಯದಂಗಡಿಗಳಿಗೆ ಬೀಗ ಹಾಕಬೇಕೆಂದು ಎಲ್ಲ ಬಾರ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.

ಚುನಾವಣಾ ನೀತಿ ಸಂಹಿತೆಯಂತೆ ಮೇ 8ರ ಸಂಜೆ ಐದು ಗಂಟೆಯಿಂದ ಪಬ್, ಬಾರ್ ಹಾಗೂ ಎಂಆರ್‌ಪಿ ಮಳಿಗೆಗಳು ಬಂದ್ ಇರಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...