ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

Date:

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಎಸ್‌.ಜೆ ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ಮೂವರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)-2023ರ ಸೆಕ್ಷನ್ 352, 251(2), 351(3), 3(5)ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಮೂವರ ವಿರುದ್ಧವೂ ಕರ್ನಾಟಕ ರಣಧೀರ ಪಡೆಯ ಹರೀಶ್ ಭೈರಪ್ಪ ಅವರು ಅಕ್ಟೋಬರ್ ತಿಂಗಳಿನಲ್ಲಿಯೇ ದೂರು ದಾಖಲಿಸಿದ್ದರು. ಇದೀಗ, ಎಫ್‌ಐಆರ್ ದಾಖಲಾಗಿದೆ.

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು 13 ವರ್ಷಗಳಾಗಿದ್ದ ಹಿನ್ನೆಲೆ ಅಕ್ಟೋಬರ್ 9ರಂದು ‘ರಿಪಬ್ಲಿಕ್ ಟಿವಿ’ ಕನ್ನಡ (ಆರ್‌ ಕನ್ನಡ)ದಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕರ್ನಾಟಕ ರಣಧೀರ ಪಡೆಯ ಹರೀಶ್ ಭೈರಪ್ಪ ಮತ್ತು ವಸಂತ್ ಗಿಳಿಯಾರ್ ಭಾಗವಹಿಸಿದ್ದರು. ಈ ವೇಳೆ, ಒಬ್ಬರ ನಡುವೆ ವಾಗ್ವಾದ ನಡೆದಿತ್ತು. ಕಾರ್ಯಕ್ರಮ ಮುಗಿದು ಮನೆಗೆ ತೆರಳುವ ವೇಳೆ, ಧರ್ಮಸ್ಥಳದ ಪ್ರತಿಷ್ಠಿತ ಕುಟುಂಬದ ಸಮರ್ಥಕನಾಗಿರುವ ವಸಂತ್‌ ಗಿಳಿಯಾರ್ ತಮ್ಮ ಪುಢಾರಿಗಳನ್ನು ನ್ಯೂಸ್‌ ಚಾನೆಲ್‌ನ ಕಚೇರಿಗೆ ಕರೆಸಿಕೊಂಡು ಹರೀಶ್‌ ಮತ್ತು ಇತರರೊಂದಿಗೆ ದಾಂಧಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಿಳಿಯಾರ್ ಅವರ ಸಹವರ್ತಿ ಪುನೀತ್ ಕೆರೆಹಳ್ಳಿಯ ಹಿಂಬಾಲಕರು ಮತ್ತು ಇನ್ನಿತರ ಪುಡಿರೌಡಿಗಳು ಆರ್‌ ಕನ್ನಡ ಕಚೇರಿಗೆ ಬಂದು ಹರೀಶ್ ಮತ್ತು ಮತ್ತೊಬ್ಬ ಅತಿಥಿ ಅಬ್ದುಲ್ ರಜಾ‍ಕ್ ಅವರೊಂದಿಗೆ ಗಲಾಟೆ ನಡೆಸಿದ್ದರು. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಧಾವಿಸಿ, ಪುಂಡರನ್ನು ಪೊಲೀಸ್‌ ಠಾಣೆಗೆ ಒಯ್ದಿದ್ದರು.

ಆ ಸಮಯದಲ್ಲಿ, “ಒಂದು ಚರ್ಚಾ ಕಾರ್ಯಕ್ರಮವನ್ನು ಆಯೋಜಿಸಿ, ಚರ್ಚೆಗೆ ಆಹ್ವಾನಿಸುವ ವಾಹಿನಿಯು ತನ್ನ ಕಚೇರಿಗೆ ಬರುವ ಅತಿಥಿಗಳ ರಕ್ಷಣೆ ಮತ್ತು ಆತ್ಮಗೌರವವನ್ನು ಕಾಪಾಡುವ ಜವಾಬ್ದಾರಿಯನ್ನೂ ಹೊತ್ತಿರುತ್ತದೆ. ಆದರೆ, ಗಲಾಟೆ ನಡೆಯುವ ಸಮಯದಲ್ಲಿ ವಸಂತ್ ಗಿಳಿಯಾರ್ ಬೆಂಬಲಿತ ಪುಡಾರಿಗಳನ್ನು ತನ್ನ ಕಚೇರಿಯ ಆವರಣಕ್ಕೆ ಬಿಟ್ಟುಕೊಂಡ ‘ರಿಪಬ್ಲಿಕ್ ಟಿವಿ’ಯ ಉದ್ದೇಶವೇನಿತ್ತು” ಎಂದು ಸಾರ್ವಜನಿಕ ಆಕ್ರೋಶವೂ ವ್ಯಕ್ತವಾಗಿತ್ತು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...