ಬಸ್‌ ನಿರ್ವಾಹಕನಿಗೆ ಅವಾಚ್ಯ ಶಬ್ದದಿಂದ ನಿಂದನೆ: ದಂತ ವೈದ್ಯ ವಿದ್ಯಾರ್ಥಿ ವಿರುದ್ಧ ಎಫ್‌ಐಆರ್‌ ದಾಖಲು

Date:

  • ಕೆಎಲ್‌ಇ ದಂತ ವೈದ್ಯಕೀಯ ಕಾಲೇಜಿನಲ್ಲಿ ಮೌನೇಶ್‌ ವ್ಯಾಸಂಗ
  • ಯೂರೋ ಕ್ಯಾಬ್ಸ್​ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು

ದಂತ ವೈದ್ಯ ವಿದ್ಯಾರ್ಥಿಯೊಬ್ಬ ಕಾರ್ಯನಿರತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್‌ನ ನಿರ್ವಾಹಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅನುಚಿತ ವರ್ತನೆ ತೋರಿದ್ದಾನೆ. ಈ ಹಿನ್ನೆಲೆ, ವಿದ್ಯಾರ್ಥಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಿಎಂಟಿಸಿ ಬಸ್​ ಕಂಡಕ್ಟರ್ ಅಶೋಕ್ ನೀಡಿದ ದೂರಿನ ಮೇರೆಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ದಂತ ವೈದ್ಯ ವಿದ್ಯಾರ್ಥಿ ಮೌನೇಶ್ ವಿರುದ್ಧ ನಗರದ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರಣ್ಯಪುರದ ಕುವೆಂಪುನಗರದ ನಿವಾಸಿ ಮೌನೇಶ್‌ (20) ಖಾಸಗಿ ಕಾಲೇಜಿನ ದಂತ ವೈದ್ಯ ವಿದ್ಯಾರ್ಥಿ. ತುಮಕೂರು ರಸ್ತೆಯ ಗೊರಗುಂಟೆಪಾಳ್ಯದ ಕೆಎಲ್‌ಇ ದಂತ ವೈದ್ಯಕೀಯ ಕಾಲೇಜಿನಲ್ಲಿ ಮೌನೇಶ್‌ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ತೆರಳಲು ಬೆಳಗ್ಗೆ ಗಂಗಮ್ಮನ ಗುಡಿ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ ಹತ್ತಿದ್ದಾನೆ.

ಈ ವೇಳೆ, ಬಿಎಂಟಿಸಿ ಬಸ್‌ ನಿರ್ವಾಹಕ ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಾರೆ. ವಿದ್ಯಾರ್ಥಿಯೂ ತನ್ನ ಬಳಿ ಪಾಸ್‌ ಇದೆ ಎಂದಿದ್ದಾನೆ. ಬಳಿಕ ನಿರ್ವಾಹಕ ಪಾಸ್ ತೋರಿಸಲು ಕೇಳಿದ್ದಾರೆ. ವಿದ್ಯಾರ್ಥಿ ಪಾಸ್ ತೋರಿಸಿದ ಬಳಿಕ ನಿರ್ವಾಹಕ ಕಾಲೇಜಿನ ಗುರುತಿನ ಚೀಟಿ ತೋರಿಸುವಂತೆ ಸೂಚಿಸಿದ್ದಾರೆ.

ಈ ವೇಳೆ, ಮೌನೇಶ್ ಜೆರಾಕ್ಸ್‌ ಪ್ರತಿಯನ್ನು ತೋರಿಸಿದ್ದು, ನಿರ್ವಾಹಕ ಅಸಲಿ ಗುರುತಿನ ಚೀಟಿ ತೋರಿಸುವಂತೆ ಕೇಳಿದ್ದಾನೆ. ಇದಕ್ಕೆ ವಿದ್ಯಾರ್ಥಿ ಮೌನೇಶ್ ‘ಮಹಿಳೆಯರು ಜೆರಾಕ್ಸ್‌ ಪ್ರತಿ ತೋರಿಸಿದರೆ ಸಾಕು ಸುಮ್ಮನೇ ಇರ್ತೀರಾ’ ಎಂದು ಏರು ದನಿಯಲ್ಲಿ ಗಲಾಟೆ ಆರಂಭಿಸಿದ್ದಾನೆ.

ನಿರ್ವಾಹಕ ಮತ್ತು ಮೌನೇಶ್‌ನ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ. ಇದೇ ವೇಳೆ, ಚಾಲಕ ಬಸ್‌ ನಿಲ್ಲಿಸಿ, ನಿರ್ವಾಹಕನ ನೆರವಿಗೆ ಬಂದಿದ್ದಾನೆ. ಚಾಲಕನಿಗೂ ಕೂಡ ಮೌನೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ಮೌನೇಶ್​ನನ್ನು ಪೀಣ್ಯ ಪೊಲೀಸ್​ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋದಾಗಲೂ ಸಬ್‌ ಇನ್‌ಸ್ಪೆಕ್ಟರ್‌ ಮೇಲೆ ಮೌನೇಶ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪವಿದೆ. ಈ ಆರೋಪದ ಮೇರೆಗೆ ಮೌನೇಶ್​ ಮೇಲೆ ಮತ್ತೊಂದು ಎಫ್​ಐಆರ್ ದಾಖಲಾಗುವ ಸಾಧ್ಯತೆಯಿದೆ.

ಮೌನೇಶ್ ತಂದೆ ರಾಜ ಈ ಬಗ್ಗೆ ಮಾತನಾಡಿ, “ನನ್ನ ಮಗ ಮೌನೇಶ್ ತುಂಬಾ ಮೃದುಸ್ವಭಾವದವನು. ಈತ ಯಾವುದೇ ಜಗಳಕ್ಕೆ ಹೋಗುವವನಲ್ಲ. ಪೊಲೀಸರು ನನ್ನ ಮಗನ ಮೇಲೆ ಮನಬಂದಂತೆ ಹೊಡೆದಿದ್ದಾರೆ. ಈಗ ಆತನ ಮೇಲೆ ಪೊಲೀಸರು ಹಲ್ಲೆ ಆರೋಪ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಇಟಿ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಾಲಕಿಯರು

ಬೆಂಗಳೂರು | ಯುರೋ ಕ್ಯಾಬ್‌ಗಳಿಂದ ಸಂಚಾರ ನಿಯಮ ಉಲ್ಲಂಘನೆ ; 1.16 ಲಕ್ಷ ದಂಡ

ರಾಜಧಾನಿ ಬೆಂಗಳೂರಿನಲ್ಲಿ 82 ಯೂರೋ ಕ್ಯಾಬ್ಸ್​ ಮೇಲೆ ಸಂಚಾರ ನಿಯಮ ಉಲ್ಲಂಘನೆಯಡಿ ಪ್ರಕರಣ ದಾಖಲಾಗಿತ್ತು. ಬರೊಬ್ಬರಿ 1.16 ಲಕ್ಷ ದಂಡ ವಿಧಿಸಲಾಗಿತ್ತು.

ಸಂಚಾರ ನಿಯಮ ಉಲ್ಲಂಘನೆಯಡಿ ಯೂರೋ ಕ್ಯಾಬ್ಸ್​ ಸಂಸ್ಥೆಯಿಂದ ಹೆಣ್ಣೂರು ಠಾಣೆ ಪೊಲೀಸರು 1.16 ಲಕ್ಷ ದಂಡವನ್ನ ಸಂಗ್ರಹಿಸಿದ್ದಾರೆ.

ಈ ಕುರಿತು ಸಂಚಾರಿ ಪೊಲೀಸರು ಕಂಪನಿಗೆ ನೋಟಿಸ್ ನೀಡಿದ್ದು, ಕ್ಯಾಬ್ ಸಂಸ್ಥೆ ಅಧಿಕಾರಿಗಳು ಠಾಣೆಗೆ ಆಗಮಿಸಿ 1.16 ಲಕ್ಷ ದಂಡ ಪಾವತಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...