ನೀರಿನ ಮಾಲಿನ್ಯದಿಂದ ಅಂಬಲಿಪುರ ಕೆರೆಯಲ್ಲಿ ಮೀನುಗಳ ಮಾರಣಹೋಮ

Date:

  • ಕಳೆದ ಆರು ದಿನಗಳಿಂದ 20,000 ಕ್ಕೂ ಹೆಚ್ಚು ಮೀನುಗಳು ಸಾವು
  • ಅಂಬಲಿಪುರ ಕೆರೆಯಲ್ಲಿ ಇಂತಹ ಪ್ರಮಾಣದ ಘಟನೆ ವರದಿಯಾಗಿರುವುದು ಇದೇ ಮೊದಲು

ಬೆಂಗಳೂರಿನ ಮಹದೇವಪುರ ವಲಯದ ಅಂಬಲಿಪುರ ಕೆರೆಯಲ್ಲಿ ಈ ವರ್ಷ ನೀರಿನ ಮಾಲಿನ್ಯದ ಕಾರಣದಿಂದ ಅತಿ ಹೆಚ್ಚು ಮೀನುಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಮೀನು ಗುತ್ತಿಗೆದಾರ ಕೆ ನಾರಾಯಣ್ ಮಾತನಾಡಿ, “ಕಳೆದ ಆರು ದಿನಗಳಿಂದ 20,000 ಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿವೆ. ಬಿಬಿಎಂಪಿ ಕೆರೆಯಲ್ಲಿ ಮೀನುಗಾರಿಕೆಗಾಗಿ ಹೂಡಿಕೆ ಮಾಡಿದ್ದು ಇದು ನಾಲ್ಕನೇ ಬಾರಿ. ಇದೇ ಮೊದಲ ಬಾರಿಗೆ ಭಾರಿ ನಷ್ಟ ಅನುಭವಿಸಿದ್ದೇನೆ. ₹3.60 ಲಕ್ಷ ಹೂಡಿಕೆ ಮಾಡಿದ್ದೇನೆ. ಒಂದು ರೂಪಾಯಿಯೂ ಸಿಗುವುದಿಲ್ಲ. ಏಕೆಂದರೆ, ಬಹುತೇಕ ಎಲ್ಲ ಮೀನುಗಳು ಸತ್ತಿವೆ. ಅಧಿಕಾರಿಗಳು ಕೆರೆಯ ನೀರಿನ ಮಾಲಿನ್ಯದ ಸಮಸ್ಯೆಯನ್ನು ಪರಿಹರಿಸಬೇಕು. ಸಮಸ್ಯೆ ಪರಿಹಾರವಾದ ಬಗ್ಗೆ ಖಚಿತ ಮಾಹಿತಿ ಪಡೆಯಬೇಕು” ಎಂದರು.

“ಬಿಬಿಎಂಪಿ ಅಧಿಕಾರಿಗಳು ನೀರಿನ ಗುಣಮಟ್ಟ ಮತ್ತು ಮಳೆ ನೀರು ಚರಂಡಿಗಳ ಬಗ್ಗೆ ಸರಿಯಾಗಿ ಪರಿಶೀಲನೆ ಮಾಡಿದ್ದರೆ, ಈಗಾಗಿರುವ ಹಾನಿ ಕಡಿಮೆ ಮಾಡಬಹುದಿತ್ತು. ದಶಕದ ಹಿಂದೆ ಬಿಬಿಎಂಪಿ ವತಿಯಿಂದ ಕೆರೆಗೆ ಕಾಯಕಲ್ಪ ನೀಡಲಾಗಿದೆ. ಸ್ಥಳೀಯರು ಕೆರೆಯನ್ನು ಕಾಪಾಡಿಕೊಂಡು ಬಂದಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬಲಿಪುರ ಕೆರೆಯಲ್ಲಿ ಇಂತಹ ಪ್ರಮಾಣದ ಘಟನೆ ವರದಿಯಾಗಿರುವುದು ಇದೇ ಮೊದಲು. 7 ಎಕರೆ ವಿಸ್ತೀರ್ಣದ ಕೆರೆಯು ಐದು ದೊಡ್ಡ ಅಪಾರ್ಟ್‌ಮೆಂಟ್ ಸಂಕೀರ್ಣಗಳಿಂದ ಸುತ್ತುವರಿದಿದೆ. ಎಲ್ಲ ಒಳಚರಂಡಿ ಸಂಸ್ಕರಣಾ ಘಟಕಗಳನ್ನು ಹೊಂದಿರುವುದರಿಂದ ಕೊಳಚೆ ನೀರನ್ನು ಒಮ್ಮೆಯೂ ಹೊರಹಾಕಲಾಗಿಲ್ಲ. ಮಳೆನೀರು ಚರಂಡಿ, ರಾತ್ರಿಯ ಸಮಯದಲ್ಲಿ ಚರಂಡಿ ಒಳಹರಿವು ಕಾಣುತ್ತದೆ. ಅಂಬಲಿಪುರ ಕೆರೆಗೆ ಕೊಳಚೆ ನೀರು ಬರುತ್ತಿದೆ ಮೀನುಗಳ ಸಾವಿಗೆ ಇದು ಕೂಡ ಒಂದು ಕಾರಣವಾಗಿರಬಹುದು. ಬಿಬಿಎಂಪಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಕೆರೆಯ ಸಂರಕ್ಷಣಾ ಗುಂಪು ಕೆರೆಯ ನೀರಿನ ಮಾದರಿ ಸಂಗ್ರಹಿಸಿದ್ದು, ಪರೀಕ್ಷಿಸಲಾಗುತ್ತಿದೆ. ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ” ಎಂದು ಕೆರೆ ಹೋರಾಟಗಾರ್ತಿ ಕವಿತಾ ಕಿಶೋರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಂಕಿತ ಉಗ್ರನ ಪತ್ತೆಗೆ ಲುಕ್‌ ಔಟ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆಸಿದ ಬೆಂಗಳೂರು ಪೊಲೀಸರು

“ಕಳೆದ ಎರಡು ವರ್ಷಗಳಿಂದ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಈ ಪ್ರದೇಶದ ಸುತ್ತಲೂ ಹೋಟೆಲ್‌ಗಳು ಮತ್ತು ಅಂಗಡಿಗಳು ನಾಯಿ ಕೊಡೆಗಳಂತೆ ಹುಟ್ಟಿಕೊಂಡಿವೆ. ಈ ಸಂಸ್ಥೆಗಳು ತಮ್ಮ ಕೊಳಚೆ ನೀರನ್ನು ಎಲ್ಲಿಗೆ ಬಿಡುತ್ತಿವೆ ಎಂಬುದು ಅಸ್ಪಷ್ಟವಾಗಿದೆ. ಬಹುಶಃ ಹೋಟೆಲ್ ಮತ್ತು ಅಂಗಡಿ ಮಾಲೀಕರು ರಾತ್ರಿಯಲ್ಲಿ ಚರಂಡಿ ನೀರನ್ನು ಕೆರೆಗೆ ಬಿಡುತ್ತಿರಬಹುದು. ಇದು ಮಾಲಿನ್ಯಕ್ಕೆ ಕಾರಣವಾಗಿರಬಹುದು” ಎಂದು ಕೆರೆ ಹೋರಾಟಗಾರರೊಬ್ಬರು ಹೇಳಿದರು

ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ವಿಜಯಕುಮಾರ್ ಹರಿದಾಸ್ ಮಾತನಾಡಿ, “ಘಟನೆಯ ಬಗ್ಗೆ ನಮಗೆ ಮಾಹಿತಿ ಇಲ್ಲ. ಕಳೆದ ತಿಂಗಳು ಕೆರೆಗೆ ಒಳಚರಂಡಿ ನೀರಿನ ಪ್ರವೇಶವಾಗುವುದರ ಬಗ್ಗೆ ತನಿಖೆ ನಡೆಸಲಾಗಿತ್ತು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...