ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಾಜಿ ಸಿಎಂ ವಿಶೇಷ ಅಧಿಕಾರಿ

Date:

  • ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
  • ಪದೇಪದೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು

ಹನಿಟ್ರ್ಯಾಪ್‌ ಜಾಲಕ್ಕೆ ಸಿಲುಕಿ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ ₹6.8 ಲಕ್ಷ ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಣ ಕಳೆದುಕೊಂಡ 58 ವರ್ಷದ ಅಧಿಕಾರಿ ಮೂಲತಃ ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಯಾಗಿದ್ದು, ಅವರು ಜೂ.12 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಅತಿಥಿ ಗೃಹದಲ್ಲಿದ್ದರು. ಅಲ್ಲಿ, ಸ್ನಾನ ಮುಗಿಸಿ ಹೊರ ಬಂದಾಗ ಅವರಿಗೆ ವಿಡಿಯೋ ಕಾಲ್ ಬಂದಿದೆ. ಕರೆಗೆ ಅವರು ಉತ್ತರಿಸಿದ್ದು, ಕರೆ ಮಾಡಿದ್ದ ಮಹಿಳೆ ಕರೆಯ ಸಂಭಾಷಣೆ ಮತ್ತು ವಿಡಿಯೋವನನ್ನು ರೆಕಾರ್ಡ್‌ ಮಾಡಿಕೊಂಡಿದ್ದಾಳೆ.

ಮರುದಿನ ಓರ್ವ ಅಪರಿಚಿತ ವ್ಯಕ್ತಿ ಅಧಿಕಾರಿಗೆ ಕರೆ ಮಾಡಿದ್ದಾನೆ. ಆದರೆ, ಅಧಿಕಾರಿ ಕರೆ ಸ್ವೀಕರಿಸಿಲ್ಲ. ಪದೇಪದೆ ಕರೆ ಬಂದ ಕಾರಣ ಕರೆಯನ್ನು ಸ್ವೀಕರಿಸಿದ್ದಾರೆ. ಈ ವೇಳೆ, ಆ ಅಪರಿಚಿತ ವ್ಯಕ್ತಿ ತಾನೂ ಮಹೇಂದ್ರ ಸಿಂಗ್ ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ವರದಿಗಾರ ಎಂದು ಹೇಳಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಓರ್ವ ಮಹಿಳೆ ನಿಮ್ಮ ಬಗ್ಗೆ ದೂರು ನೀಡಿದ್ದಾರೆ. ನೀವು ಮಹಿಳೆಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಅನುಚಿತವಾಗಿ ವರ್ತಿಸಿದ್ದೀರಿ. ನಿಮ್ಮ ವಿಡಿಯೋ ನಮ್ಮ ಬಳಿ ಇದೆ ಎಂದು ಹೇಳಿದ್ದಾರೆ. ಬಳಿಕ ನಾವು ಕೇಳಿದಷ್ಟು ಹಣ ನೀಡಿ, ಇಲ್ಲದಿದ್ದರೆ, ನಿಮ್ಮ ವಿಡಿಯೋ ಅನ್ನು ಯೂಟ್ಯೂಬ್ ಹಾಗೂ ಫೇಸ್ ಬುಕ್‌ನಲ್ಲಿ ಹರಿಬಿಡುವುದಾಗಿ ಹೆದರಿಸಿದ್ದಾನೆ. ಹಣ ನೀಡಿದರೆ ವಿಡಿಯೋ ಡಿಲಿಟ್‌ ಮಾಡುವುದಾಗಿ ಹೇಳಿದ್ದನು ಎಂದು ಅಧಿಕಾರಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯುತ್ ಬಿಲ್ ಜಾಸ್ತಿ ಬಂತೆಂದು ಮೀಟರ್ ರೀಡರ್ ಮೇಲೆ ಹಲ್ಲೆ; ದೂರು ದಾಖಲು

ಬಳಿಕ ಹೆದರಿದ ಅಧಿಕಾರಿ ಮೊದಲಿಗೆ ₹1.5 ಲಕ್ಷ ಹಣ ನೀಡಿದ್ದಾರೆ. ನಂತರ ₹50 ಸಾವಿರ ಆರೋಪಿ ಹೇಳಿದ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಬಳಿಕ ಜು.14ರಂದು ಕರೆ ಮಾಡಿ ಮತ್ತೆ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಟ್ಟು ₹2 ಲಕ್ಷ ಹಾಗೂ ₹2.8 ಲಕ್ಷ ವರ್ಗಾಯಿಸುವಂತೆ ಒತ್ತಾಯಿಸಿದ್ದಾನೆ. ಒಟ್ಟು ₹6.8 ಲಕ್ಷ ಹಣವನ್ನು ಅಧಿಕಾರಿಯಿಂದ ವಂಚಕರು ಸುಲಿಗೆ ಮಾಡಿದ್ದಾರೆ.

ಮತ್ತೆ ಅದೇ ದಿನ ಕರೆ ಮಾಡಿ ₹7.2 ಲಕ್ಷ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಅಧಿಕಾರಿ ನಗರ ಪೊಲೀಸ್ ಕಮಿಷನರ್‌ ಅವರಿಗೆ ತಿಳಿಸಿ, ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...