ಬೆಂಗಳೂರು | ಕೆಐಎ ರಸ್ತೆಯಲ್ಲಿ ಭೀಕರ ಅಪಘಾತ: ಪೊಲೀಸ್ ಸೇರಿದಂತೆ 2 ಸಾವು

Date:

  • ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
  • ವಾಹನಗಳಿಗೆ ಎಚ್ಚರಿಕೆ ನೀಡಲು ಪಾರ್ಕಿಂಗ್ ಲೈಟ್ ಆನ್ ಮಾಡಿದ್ದ ಎಸ್‌ಯುವಿ ಚಾಲಕ

ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಚಿಕ್ಕಜಾಲ ಬಳಿ ಕಾರು ಡಿಕ್ಕಿಯಾಗಿ ರಾತ್ರಿವೇಳೆ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ದೇವನಹಳ್ಳಿ ಠಾಣೆಯ 40 ವರ್ಷದ ಪೊಲೀಸ್ ಪೇದೆ ಎನ್ ಸುರೇಶ್ ಮೃತಪಟ್ಟ ವ್ಯಕ್ತಿ. ಇವರು ಮೂಲತಃ ದೇವನಹಳ್ಳಿಯವರು. ರಾತ್ರಿ ವೇಳೆ, ದೇವನಹಳ್ಳಿ ಇನ್ಸ್‌ಪೆಕ್ಟರ್‌ ಜತೆಗೆ ಸುರೇಶ್ ಕರ್ತವ್ಯದಲ್ಲಿದ್ದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸೋಮವಾರ ಬೆಳಗಿನ ಜಾವ 1.50ರ ವೇಳೆಗೆ ಪೊಲೀಸ್ ಪೇದೆ ಹಾಗೂ ಇನ್ನೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತ ಮತ್ತೋರ್ವ ವ್ಯಕ್ತಿಯನ್ನು 28 ವರ್ಷದ ಶರತ್ ಎಂದು ಗುರುತಿಸಲಾಗಿದೆ. ಎಸ್‌ಯುವಿ ಚಾಲಕ ಭೈರೇಗೌಡ ಅವರ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದು, ಅವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾನ್‌ಸ್ಟೆಬಲ್, ದೇವನಹಳ್ಳಿ ಇನ್‌ಸ್ಪೆಕ್ಟರ್ ಜತೆಗೆ ಭಾನುವಾರ ದೇವನಹಳ್ಳಿ ಉಪವಿಭಾಗದಲ್ಲಿ ರಾತ್ರಿ ರೌಂಡ್ಸ್‌ನಲ್ಲಿದ್ದರು. ಈ ವೇಳೆ, ಇನ್ಸ್‌ಪೆಕ್ಟರ್ ಸೂಚನೆಯಂತೆ ರಸ್ತೆ ಮಧ್ಯೆ ನಿಲ್ಲಿಸಿದ್ದ ಎಸ್‌ಯುವಿ ಕಾರನ್ನು ಪರಿಶೀಲಿಸುತ್ತಿದ್ದರು.

ಹಿಂದಿನಿಂದ ಬರುವ ಇತರ ವಾಹನಗಳಿಗೆ ಎಚ್ಚರಿಕೆ ನೀಡಲು ಎಸ್‌ಯುವಿ ಚಾಲಕ ಪಾರ್ಕಿಂಗ್ ಲೈಟ್ ಆನ್ ಮಾಡಿದ್ದನು. ಇನ್ಸ್ ಪೆಕ್ಟರ್ ಫೋನ್ ಬಂದ ಮೇಲೆ ಪಕ್ಕಕ್ಕೆ ತೆರಳಿದ್ದರು. ಈ ವೇಳೆ, ನಗರದಿಂದ ಬಂದ ಮತ್ತೊಂದು ಕಾರು ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಪೊಲೀಸ್‌ ಪೇದೆ ಮತ್ತು ವಾಹನದಲ್ಲಿದ್ದ ಪ್ರಯಾಣಿಕರೊಬ್ಬರು ಸಾವನ್ನಪ್ಪಿದ್ದಾರೆ.

ಮದ್ಯದ ಅಮಲಿನಲ್ಲಿ ಕಾರಿನಲ್ಲಿದ್ದ ಆರು ಜನರು ಜಾಲಿ ಡ್ರೈವ್‌ನಲ್ಲಿದ್ದರು. ಹೆದ್ದಾರಿಯಲ್ಲಿ ಚಹಾ ಕುಡಿಯಲು ಹೋಗುತ್ತಿದ್ದರು ಎನ್ನಲಾಗಿದೆ.

“ಮೀನಕುಂಟೆ ಹೊಸೂರು ಬಳಿಯ ದೊಡ್ಡಜಾಲ ಮೇಲ್ಸೇತುವೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಸ್ತೆಯ ಮಧ್ಯದಲ್ಲಿ ಎಸ್‌ಯುವಿ ಕಾರ್‌ ನಿಲ್ಲಿಸಿರುವುದನ್ನು ನೋಡಿ, ಪರಿಶೀಲನೆ ಮಾಡಲು ಹೋದೆವು. ಈ ವೇಳೆ, ನನಗೆ ಕರೆ ಬಂದ ಕಾರಣ ಮಾತನಾಡಲು ಪಕ್ಕಕ್ಕೆ ಬಂದೆ, ಸುರೇಶ್ ಎಸ್‌ಯುವಿ ಚಾಲಕನೊಂದಿಗೆ ಮಾತನಾಡುತ್ತಿದ್ದರು. ಹೆಬ್ಬಾಳ ಕಡೆಯಿಂದ ವಿಮಾನ ನಿಲ್ದಾಣದ ಕಡೆಗೆ ಬರುತ್ತಿದ್ದ ಕಾರು ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ” ಎಂದು ಅಪಘಾತದ ಪ್ರತ್ಯಕ್ಷದರ್ಶಿ ದೇವನಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಧರ್ಮೇಗೌಡ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 4 ತಿಂಗಳ ಬಳಿಕ ಶುದ್ಧ ಕುಡಿಯುವ ನೀರಿನ ನಿರೀಕ್ಷೆಯಲ್ಲಿ ಮೈಕಲ್ ಪಾಳ್ಯದ ನಿವಾಸಿಗಳು

“ಕಾರು ಚಾಲಕ ಮದ್ಯದ ಅಮಲಿನಲ್ಲಿದ್ದು, ನಿಲ್ಲಿಸಿದ್ದ ಎಸ್‌ಯುವಿಯನ್ನು ಗಮನಿಸಿರಲಿಲ್ಲ. ಸುರೇಶ್ ಮತ್ತು ಕಾರಿನಲ್ಲಿದ್ದ ಶರತ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಾನಮತ್ತರಾಗಿ ಚಾಲನೆ ಮಾಡುತ್ತಿದ್ದ ಶಂಕಿತ ಕಾರಿನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ಐವರು ಬದುಕುಳಿದವರಿಗೆ ಗಾಯಗಳಾಗಿದ್ದು, ಎಲ್ಲರೂ ಮದ್ಯದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ” ಎಂದರು.

ಗಾಯಗೊಂಡವರನ್ನು ಕಾರು ಚಾಲಕ ಚಂದ್ರಪ್ರಕಾಶ್(30), ಇಮ್ಯಾನುಯೆಲ್(29), ಪ್ರಿಯದರ್ಶಿನಿ(26), ಕೇಜಿಯಾ(24) ಮತ್ತು ಶೆರಿನ್(25) ಎಂದು ಗುರುತಿಸಲಾಗಿದೆ

ಸದ್ಯ ಈ ಘಟನೆ ಸಂಬಂಧ ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...