ಬಾಲಬ್ರೂಯಿ ಅತಿಥಿ ಗೃಹ ಕಾನ್ಸ್‌ಟಿಟ್ಯೂಷನಲ್‌ ಕ್ಲಬ್‌ : ಸರ್ಕಾರದ ನಿರ್ಧಾರಕ್ಕೆ ಬ್ರಿಜೇಶ್ ಕಾಳಪ್ಪ ಕಿಡಿ

Date:

“ಬೆಂಗಳೂರಿನ ಹೃದಯಭಾಗದಲ್ಲಿರುವ ಬಾಲಬ್ರೂಯಿ ಪಾರಂಪರಿಕ ಅತಿಥಿ ಗೃಹವನ್ನು ‘ಕಾನ್ಸ್‌ಟಿಟ್ಯೂಷನಲ್‌ ಕ್ಲಬ್‌’ ಆಗಿ ಪರಿವರ್ತಿಸುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ರಾಷ್ಟ್ರದ ಮಹಾತ್ಮರು ನೆಲೆಸಿದ್ದ ಐತಿಹಾಸಿಕ ಅತಿಥಿಗೃಹವನ್ನು ಮೋಜು, ಮಸ್ತಿಗೆ ಬಳಕೆ ಮಾಡುವುದು ನಾಚಿಕೆಗೇಡಿನ ಸಂಗತಿ” ಎಂದು ಎಎಪಿ ಸಂವಹನ ವಿಭಾಗದ ಮುಖ್ಯಸ್ಥ ಬ್ರಿಜೇಶ್ ಕಾಳಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಖು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್‌ ಆಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್, ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ, ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ ಇದೆ. ಸಭೆಯಲ್ಲಿದ್ದ ಎಚ್‌.ಕೆ.ಪಾಟೀಲ್‌, ಸಭಾಪತಿ ಬಸವರಾಜ ಹೊರಟ್ಟಿ, ಶಿವಲಿಂಗೇಗೌಡ ಸೇರಿದಂತೆ ಹಲವು ಹಿರಿಯ ಸಚಿವರು ಹಾಗೂ ಶಾಸಕರುಗಳಿಗೆ ಕ್ಲಬ್‌ ಮಾಡುವ ವಿಚಾರವಾಗಿ ಇಷ್ಟವಿಲ್ಲ ಎಂಬುದು ಗೊತ್ತಾಗಿದೆ. ಸಭೆಯಲ್ಲಿ ಒಮ್ಮತದ ಅಭಿಪ್ರಾಯವಿಲ್ಲದಿದ್ದರೂ ಮನರಂಜನೆ ಕ್ಲಬ್‌ ಮಾಡುವ ದುಸ್ಸಾಹಸವೇಕೆ? ಇದರ ಹಿಂದೆ ಯಾರ ಒತ್ತಡವಿದೆ?” ಎಂದು ಬ್ರಿಜೇಶ್ ಕಾಳಪ್ಪ ಪ್ರಶ್ನೆ ಮಾಡಿದರು.

“ರಾಷ್ಟ್ರಗೀತೆಯನ್ನು ಬರೆದ ರವೀಂದ್ರನಾಥ ಠಾಗೂರ್‌, ರಾಷ್ಟ್ರಪಿತ ಮಹಾತ್ಮ ಗಾಂಧಿ, ಮೊದಲ ಪ್ರಧಾನಿ, ಕಾಂಗ್ರೆಸ್‌ನ ಐಕಾನ್‌ ಜವಾಹರಲಾಲ್‌ ನೆಹರೂ ಸೇರಿದಂತೆ ಅನೇಕ ಮಹಾತ್ಮರು ಉಳಿದುಕೊಂಡಿದ್ದ ಐತಿಹಾಸಿಕ ಕಟ್ಟಡವಿದು. ಮಾರ್ಕ್‌ ಕಬ್ಬನ್‌ ಉಳಿದುಕೊಂಡಿದ್ದ ಅತಿಥಿ ಗೃಹವಿದು. ದೇವರಾಜ ಅರಸು ತುಂಬಾ ವರ್ಷಗಳ ಕಾಲ ಇಲ್ಲಿ ನೆಲೆಸಿದ್ದರು. ಇಂತಹ ಪ್ರಮುಖ ವ್ಯಕ್ತಿಗಳು ಆಗಮಿಸಿ, ನೆಲೆಸಿದ್ದ ಇತಿಹಾಸವಿರುವ ಅತಿಥಿ ಗೃಹವನ್ನು ಮೋಜು, ಮಸ್ತಿಗೆ ಬಳಕೆ ಮಾಡುವುದು ಸರಿಯಲ್ಲ. ಐತಿಹಾಸಿಕ ಪಾರಂಪರಿಕ ಕಟ್ಟಡವನ್ನು ಮನರಂಜನೆಯ ಕ್ಲಬ್‌ ಆಗಿ ಪರಿವರ್ತಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ತಕ್ಷಣ ಕೈಬಿಡಬೇಕು. ಬಾಲಬ್ರೂಯಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಬ್ರಿಜೇಶ್ ಕಾಳಪ್ಪ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಭಾಗವತ್‌ ಟೀಕಿಸಿದ ಸ್ವಾಮಿ ಪ್ರಸಾದ್ ಮೌರ್ಯ

ಕಾಂಗ್ರೆಸ್ಸಿಗರಿಗೆ ಬ್ರಿಜೇಶ್ ಕಾಳಪ್ಪ ಪ್ರಶ್ನೆ

“ಬಿಜೆಪಿಯ ಹಿರಿಯರಾದ ಶ್ಯಾಮ್‌ ಪ್ರಸಾದ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯರಂತಹ ಮೇರು ನಾಯಕರು ಕೆಲವು ದಿನಗಳ ವರೆಗೆ ಈ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದರೆ ಅವರು ಬಾಲಬ್ರೂಯಿಯನ್ನು ದೇವಸ್ಥಾನ ಮಾಡುತ್ತಿರಲಿಲ್ವಾ? ನಿಮ್ಮದೇ ಪಕ್ಷದ ಯುಗಪುರುಷರು ನೆಲೆಸಿದ್ದ ಅತಿಥಿ ಗೃಹವನ್ನು ಮೋಜು-ಮಸ್ತಿಯ ಕೇಂದ್ರವನ್ನಾಗಿಸಲು ನಿಮಗೆ ಹೇಗೆ ಮನಸ್ಸು ಬರುತ್ತದೆ” ಎಂದು ಪ್ರಶ್ನಿಸಿದರು.

“ಸಣ್ಣ ಜಾಗದಲ್ಲಿ ದೊಡ್ಡ ಕ್ಲಬ್ ನಿರ್ಮಿಸಲು ಹೊರಟಿರುವುದು ಅವೈಜ್ಞಾನಿಕವಾಗಿದೆ. ಇದಕ್ಕಾಗಿ ಸಾಕಷ್ಟು ಮರಗಳನ್ನು ಕಡಿಯಬೇಕಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಹಿರಿಯ ಮುಖಂಡ ಡಾ.ವೆಂಕಟೇಶ್, “ಐತಿಹಾಸಿಕ ಸ್ಥಳಗಳನ್ನು ಗೌರವಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. ಪಾರಂಪರಿಕ ಮನ್ನಣೆಯನ್ನು ನೀಡಬೇಕು. ಮನರಂಜನೆ ಕ್ಲಬ್‌ ಮಾಡುವ ಮೂಲಕ ಮೋಜು-ಮಸ್ತಿಗೆ ಅವಕಾಶ ನೀಡುವುದು ಸರಿಯಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...