ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ; ಶೀಘ್ರ ಜಾರಿ ಸಾಧ್ಯತೆ

Date:

ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌ವೇನಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯ ಪ್ರಾಯೋಗಿಕ ಕಾರ್ಯಾಚರಣೆಗೆ ಸದ್ಯದಲ್ಲೇ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ. ಈ ವ್ಯವಸ್ಥೆ ಸಂಪೂರ್ಣವಾಗಿ ಜಾರಿಗೆ ಬಂದರೆ, ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ವಾಹನ ಸವಾರರು ತಮ್ಮ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್‌ ಅಳವಡಿಸಿಕೊಳ್ಳಬೇಕಾಗುತ್ತದೆ.

”ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜಿಪಿಎಸ್‌ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಉಪಗ್ರಹದೊಂದಿಗೆ ಸಂಪರ್ಕ ಹೊಂದಿರುವ ಜಿಪಿಎಸ್ ಸಾಧನದ ಮೂಲಕ ಟೋಲ್‌ ಸಂಗ್ರಹವಾಗಲಿದೆ” ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

“ವಾಹನಗಳು ಎಕ್ಸ್‌ಪ್ರೆಸ್‌ವೇ ಪ್ರವೇಶಿಸುವ ಮತ್ತು ನಿರ್ಗಮಿಸುವ ಸ್ಥಳಗಳ ಮಾಹಿತಿ ಜಿಪಿಎಸ್‌ ಸಾಧನದಿಂದ ದಾಖಲಾಗುತ್ತದೆ. ವಾಹನಗಳ ಸಂಚಾರದ ಅಂತರದ ಅನುಗುಣವಾಗಿ ಟೋಲ್‌ ಕಡಿತವಾಗುತ್ತದೆ. ಇದರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ಕಡಿಮೆ ದೂರ ಕ್ರಮಿಸುವ ವಾಹನಗಳಿಗೆ ಹೆಚ್ಚು ಟೋಲ್ ನೀಡುವುದು ತಪ್ಪುತ್ತದೆ” ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...