ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

Date:

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

2025ನೇ ಸಾಲಿನ ಗೌರಿ-ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿ ತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸುವ ನಿಮಿತ್ತ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ಕರೆದು ಚರ್ಚಿಸಲಾದೆ.

ಅಗತ್ಯ ಕ್ರಮವಹಿಸಲು ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಗಣೇಶ ಹಬ್ಬದ ನಿಮಿತ್ತ ಸಾರ್ವಜನಿಕವಾಗಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವ ಸಲುವಾಗಿ ಅನುಮತಿ ಪಡೆಯಲು ಉಪ ವಿಭಾಗದ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾದ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳ ಕಾರ್ಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಏಕಗವಾಕ್ಷಿಯಲ್ಲಿ ತ್ವರಿತವಾಗಿ ಅನುಮತಿ ನೀಡಲು ಕ್ರಮಕೈಗೊಳ್ಳುವುದು.
  2. ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್… ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ಸಂಬಂಧಪಟ್ಟ ಬಿಬಿಎಂಪಿಯ ಉಪ ವಿಭಾಗದ ನೋಡೆಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಖುದ್ದಾಗಿ ಪರಿಶೀಲಿಸಿ ನೋಟೀಸ್ ನೀಡಬೇಕು, ಸ್ಥಳ ತನಿಖೆ ಕೈಗೊಂಡು ರಾಸಾಯನಿಕ ಬಣ್ಣಗಳು ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ನಡೆಸುತ್ತಿದ್ದಲ್ಲಿ ಹಾಗೂ ಮಾರಾಟ ಮಾಡುತ್ತಿದ್ದಲ್ಲಿ ದಂಡ ವಿಧಿಸಿ ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಿ ನಿಷೇಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮವಹಿಸುವುದು. ಸದರಿ ಕಾರ್ಯವನ್ನು ವಲಯ ಆಯುಕ್ತರು, ವಲಯ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸುವುದು.
  3. ವಶಪಡಿಸಿಕೊಳ್ಳಲಾದ ಮೇಲ್ಕಂಡ ವಸ್ತುಗಳನ್ನು ನಿಯಮಾನುಸಾರ ವಿಲೇವಾರಿಗೊಳಿಸಲು ಕ್ರಮವಹಿಸುವುದು.
  4. ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ/ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು ನೀಡುವುದು.
  5. ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೇಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಬರುವ ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಲು ಅರಿವು ಮೂಡಿಸುವುದು.
  6. ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ಗಳಲ್ಲಿ ವಿಸರ್ಜನೆ/ನಿಮಜ್ಜನ ಸ್ಥಳಗಳನ್ನು ಗುರುತಿಸಿ, ಸದರಿ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸುವುದು. ಅವಶ್ಯವಿದ್ದಲ್ಲಿ ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆ ಅಗತ್ಯ ವ್ಯವಸ್ಥೆ ಕೈಗೊಳ್ಳುವುದು.
  7. ಪಾಲಿಕೆಯ ವ್ಯಾಪ್ತಿಯ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಸದರಿ ಸ್ಥಳಗಳ ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸುವುದು. ಸದರಿ ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಿ ಹಸಿತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಹಾಗೂ ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸುವುದು, ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ತಂಡಗಳನ್ನು ನೇಮಿಸುವುದು ಹಾಗೂ ಕಿಯಾಸ್, ಆಂಬ್ಯುಲೆನ್ಸ್ ವ್ಯವಸ್ಥೆ, ವೈದ್ಯರು ಮತ್ತು ಶುಶೂಷಕಿಯರನ್ನು ಪ್ರಾಥಮಿಕ ಚಿಕಿತ್ಸೆ ನೀಡಲು ನೇಮಿಸಿ, ಎಲ್ಲಾ ಪಿ.ಹೆಚ್.ಸಿ ಗಳ ಬಳಿಯಲ್ಲಿ ಹೆಚ್ಚುವರಿ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸಿದ್ದವಿರುವಂತೆ ಕ್ರಮವಹಿಸುವುದು ಹಾಗೂ ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ನುರಿತ ಈಜುಗಾರರನ್ನು ಒಳಗೊಂಡಂತೆ ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ಹಾಜರಿರುವಂತೆ ಕ್ರಮವಹಿಸುವುದು.
  8. ಪರಿಸರ ಸ್ನೇಹಿ ಗಣೇಶ ಆಚರಣೆಯ ನಿಮಿತ್ತ ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಅಗತ್ಯ ಕ್ರಮವಹಿಸುವುದು.
  9. ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲಿದ್ದು, ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳುವುದು.
  10. ಪರಿಸರ ಸ್ನೇಹಿ ಗಣೇಶ ಆಚರಣೆಗೆ ಪ್ರೋತ್ಸಾಹ ನೀಡುವುದು ಹಾಗೂ ಬಿ.ಬಿ.ಎಂ.ಪಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ ಹಾಗೂ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರಡಿಸುವ ಷರತ್ತುಗೊಳಪಡಿಸಿ, ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲು ಕ್ರಮವಹಿಸುವುದು.

75 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 75 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ. ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳು ಒಂದೇ ಸ್ಥಳದಲ್ಲಿದ್ದು, ಅನುಮತಿ ಪತ್ರವನ್ನು ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ಆದೇಶದ ಪ್ರತಿ ಹಾಗೂ 75 ಏಕ‌ಗವಾಕ್ಷಿ ಕೇಂದ್ರಗಳ‌ ಮಾಹಿತಿಯನ್ನು ಲಗತ್ತಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...