ಸಚಿವರ ಆಪ್ತ ಎಂದು ಹೇಳಿ, ಜನರಿಂದ ಹಣ ಪಡೆದು ವಂಚಿಸುತ್ತಿದ್ದವನ ಬಂಧನ

Date:

  • ಕಡಿಮೆ ಹಣ ನೀಡಿದರೆ ನಿಗಮ, ಮಂಡಳಿಗಳಲ್ಲಿ ಮರ್ಯಾದೆ ಇರಲ್ಲ
  • ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಸಚಿವರ ಆಪ್ತ

ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಿಎ ಎಂದು ಹೇಳಿಕೊಂಡು ವ್ಯಕ್ತಿಯೊರ್ವ ಕೆಲಸ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸಿದ್ದಾನೆ.

ಸದ್ಯ ಆ ವ್ಯಕ್ತಿಯನ್ನು ಸದಾಶಿವನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಘುನಾಥ್ ಬಂಧಿತ ವ್ಯಕ್ತಿ. ಇತನು ಅನೇಕರ ಬಳಿ ತಾನು ಸಚಿವರ ಜತೆಗೆ 10 ವರ್ಷದಿಂದ ಆಪ್ತ ಸಹಾಯಕನಾಗಿದ್ದೇನೆ ಎಂದು ಹೇಳಿಕೊಂಡಿದ್ದನು. ಹಲವು ನಿಗಮ ಹಾಗೂ ಮಂಡಳಿಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿ ಜನರಲ್ಲಿ ನಂಬಿಕೆ ಹುಟ್ಟಿಸಿ, ಅವರಿಂದ ಹಣವನ್ನು ಪಡೆಯುತ್ತಿದ್ದನು.

ಕೇಳಿದಷ್ಟು ಹಣ ಹಾಕಿದರೇ ಮಾತ್ರ ಹುದ್ದೆ ದೊರೆಯುತ್ತದೆ. ಕೇಳಿದಕ್ಕೂ ಕಡಿಮೆ ಹಣ ನೀಡಿದರೆ ನಿಗಮ, ಮಂಡಳಿಗಳಲ್ಲಿ ಮರ್ಯಾದೆ ಇರಲ್ಲ. ಹಾಗಾಗಿ ಕೇಳಿದಷ್ಟು ಹಣ ಕೊಡಿ ಎಂದು ಜನರಿಗೆ ಹೇಳುತ್ತಿದ್ದನು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಬೇಕಾದವರೂ ಹಣವನ್ನು 9980823165 ಈ ನಂಬರ್​ಗೆ ಗೂಗಲ್ ಪೇ ಮಾಡಿ ಎಂದು ಹೇಳುತ್ತಿದ್ದನು. ಕೆಲವೊಂದು ಬಾರಿ 6361231868 ಮೊಬೈಲ್ ಸಂಖ್ಯೆಯಿಂದ ಕೆಲ ಮುಖಂಡರಿಗೆ ಕರೆ ಕೂಡ ಮಾಡಿದ್ದನು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ತಡರಾತ್ರಿ ಲಕ್ಷ್ಮಣ ಸವದಿ ಭೇಟಿ ಮಾಡಿದ ಡಿಸಿಎಂ; ಕುತೂಹಲ ಕೆರಳಿಸಿದ ಬೆಳವಣಿಗೆ

ಕಾಂಗ್ರೆಸ್​ನ ಗೀತಾ ಶಿವರಾಮ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರಿಗೆ ರಘುನಾಥ್ ಎಂಬ ವ್ಯಕ್ತಿ ಸಚಿವರ ಹೆಸರು ಹೇಳಿಕೊಂಡು ಈ ರೀತಿ ಜನರಿಗೆ ಮೋಸ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ನಂತರ ಈ ಬಗ್ಗೆ ಪ್ರಿಯಾಂಕ್ ಖರ್ಗೆಯವರ ಆಪ್ತ ಸಹಾಯಕ ಕೇಶವ್ ಮೂರ್ತಿಯವರಿಗೆ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ ಮುಖಂಡರ ಮಾಹಿತಿ ಆಧಾರದ ಮೇಲೆ ಕೇಶವ್ ಮೂರ್ತಿ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಈಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ವೇಳೆ ಆರೋಪಿ ಅನೇಕರ ಬಳಿ ಸುಳ್ಳು ಆಸೆ ತೋರಿಸಿ ಹಣ ಪಡೆದಿರುವ ಬಗ್ಗೆ ಮಾಹಿತಿ ದೊರಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...