ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಯಲ್ಲಿ ಅಕ್ರಮ ಕ್ಲಿನಿಕಲ್‌ ಟ್ರಯಲ್: ತನಿಖೆಗೆ ಡಿಜಿಸಿಐಗೆ ಆರೋಗ್ಯ ಇಲಾಖೆ ಪತ್ರ

Date:

ರಾಜ್ಯದ ಪ್ರತಿಷ್ಠಿತ ಕ್ಯಾನ್ಸರ್ ಆಸ್ಪತ್ರೆ ಎಚ್‌ಸಿಜಿ ವಿರುದ್ಧ ಅಕ್ರಮ ಕ್ಲಿನಿಕಲ್‌ ಟ್ರಯಲ್‌ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಭಾರತದ ಡ್ರಗ್‌ ಕಂಟ್ರೋಲರ್‌ ಜನರಲ್‌ ಆಫ್ ಇಂಡಿಯಾ ಹಾಗೂ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ ಸಿಒ)ಗೆ ಅವರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಕೋರಿದೆ.

ಎಚ್‌ಸಿಜಿಯ ನೈತಿಕ ಸಮಿತಿ ಮಾಜಿ ಮುಖ್ಯಸ್ಥರಾದ ನ್ಯಾಯಮೂರ್ತಿ ಪಿ ಕೃಷ್ಣಭಟ್‌ ಅವರು ಕ್ಲಿನಿಕಲ್ ಟ್ರಯಲ್ ಚಟುವಟಿಕೆಗಳಲ್ಲಿ ನ್ಯಾಯೋಚಿತವಲ್ಲದ ನಿಯಮ ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಪಿ ಕೃಷ್ಣಭಟ್‌ ಅವರು ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಟ್ರಯಲ್​ ಚಟುವಟಿಕೆಗಳ ಕುರಿತು ಆಡಳಿತ ಮಂಡಳಿಯ ಗಮನಕ್ಕೆ ​ತಂದು ಸರಿಪಡಿಸುವ ಕೆಲಸವನ್ನು ಪ್ರಯತ್ನಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಆ ವಿಚಾರವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದ ಕಾರಣ ಇದರಿಂದ ಬೇಸತ್ತ ಕೃಷ್ಣಭಟ್ ನೈತಿಕ ಸಮಿತಿ ಮುಖ್ಯಸ್ಥ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಮೋದಿ ಕೃಷಿಕರ ಕತ್ತು ಹಿಸುಕಿದ್ದಾರೆ, ಇತ್ತ ಸಿದ್ದು ಕೈ ಜೋಡಿಸಿದ್ದಾರೆ!

ಗಂಭೀರ ಆರೋಪಗಳ ಬೆನ್ನಲ್ಲೇ ಆಸ್ಪತ್ರೆಯ ಸಿಇಓ, ನಿರ್ದೇಶಕರು ಪದತ್ಯಾಗ ಮಾಡಿದ್ದಾರೆ. ಸಾಲು ಸಾಲಾಗಿ ವೈದ್ಯರು ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಆಗದ ಬಡ ರೋಗಿಗಳನ್ನೇ ಕ್ಲಿನಿಕಲ್ ಟ್ರಯಲ್​​ಗೆ ಗುರಿ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇಂತಹ ರೋಗಿಗಳನ್ನು ಟ್ರಯಲ್​ಗೆ ಶಿಫಾರಸು ಮಾಡಿ ಎಂದು ಕ್ಲಿನಿಕಲ್ ಟ್ರಯಲ್ ನಿರ್ದೇಶಕ ಡಾ.ಸತೀಶ್ ಕೆಲವು ತಿಂಗಳ ಹಿಂದೆ ಬೆಂಗಳೂರು ಆಂಕಾಲಜಿ ಗ್ರೂಪ್ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ಕಳುಹಿಸಿದ್ದರು. ಇದಕ್ಕೆ ಅದೇ ಗ್ರೂಪ್​ನಲ್ಲಿದ್ದ ಕೆಲವು ವೈದ್ಯರು ತೀಕ್ಷ್ಣ ತಿರುಗೇಟು ಕೊಟ್ಟಿದ್ದರು ಎನ್ನಲಾಗಿದೆ.

ಕ್ಲಿನಿಕಲ್ ಟ್ರಯಲ್​​ ಮಾಡುವುದರಿಂದ ಆಸ್ಪತ್ರೆಗೆ ಹೆಚ್ಚಿನ ಪ್ರಮಾಣದಲ್ಲಿ ಹಣ ಹರಿದು ಬರಲಿದೆ. ಇದೇ ಉದ್ದೇಶದಿಂದ ಆಘಾತಕಾರಿ ಕ್ಲಿನಿಕಲ್ ಟ್ರಯಲ್​ಗಳನ್ನು ಆಸ್ಪತ್ರೆ ನಡೆಸುತ್ತಿತ್ತು. ಹೆಚ್ಚಿನ ಲಾಭದ ಉದ್ದೇಶಕ್ಕಾಗಿ ಕ್ಲಿನಿಕಲ್ ಟ್ರಯಲ್​​ಗೆ ರೋಗಿಗಳ ಸೇರ್ಪಡೆ ವಿಚಾರದಲ್ಲಿ ಹೆಚ್ಚು ವಿನಾಯತಿ ನೀಡುತ್ತಿತ್ತು ಎಂದು ಆಸ್ಪತ್ರೆ ವಿರುದ್ಧ ಆರೋಪಿಸಲಾಗಿದೆ.

2023ರಲ್ಲಿ ಅಮೆರಿಕ ಮೂಲದ ಔಷಧೀಯ ದಿಗ್ಗಜ ಎಲಿ ಲಿಲ್ಲಿ ಸಂಸ್ಥೆ, ಕ್ಲಿನಿಕಲ್‌ ಟ್ರಯಲ್‌ಗೆ ಆರ್ಥಿಕವಾಗಿ ಹಿಂದುಳಿದಿರುವ ಬಡ ರೋಗಿಗಳನ್ನು ಬಳಸುತ್ತಿರುವ ಕುರಿತು ಶಿಷ್ಟಾಚಾರ ಉಲ್ಲಂಘನೆ ಉಲ್ಲೇಖಿಸಿ, ಎಚ್‌ಸಿಜಿಯೊಂದಿಗಿನ ಕ್ಲಿನಿಕಲ್‌ ಅಧ್ಯಯನ ಸ್ಥಗಿತಗೊಳಿಸಿತ್ತು. ಈ ಬೆಳವಣಿಗೆ ನಂತರ, ಎಚ್‌ಸಿಜಿಯಲ್ಲಿ ನಡೆಸಲಾಗುತ್ತಿರುವ ಪ್ರಯೋಗಗಳ ಸ್ಥಿತಿಗತಿ, ನಿಯಮಾನುಸಾರ ಪ್ರಕ್ರಿಯೆಗಳ ಪ್ರಾಮಾಣಿಕತೆ ಹಾಗೂ ರೋಗಿಗಳ ಸುರಕ್ಷತೆ ಕುರಿತು ಕಳವಳಗಳು ಹೆಚ್ಚಾಗಿವೆ.

ಕ್ಲಿನಿಕಲ್‌ ಟ್ರಯಲ್‌ ವೇಳೆ ಸಂಭವಿಸುವ ರೋಗಿಗಳ ಸಾವಿಗೆ ಸಂಬಂಧಿಸಿದ ವರದಿ ಮಾಡುವ ವಿಚಾರದಲ್ಲಿ ಮಾರ್ಗಸೂಚಿಗಳಿಗೆ ಆಸ್ಪತ್ರೆ ಬದ್ಧವಾಗಿಲ್ಲ. ಇದು ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆಗೆ ವಿರುದ್ಧ ಎಂದು ನ್ಯಾ. ಕೃಷ್ಣ ಭಟ್‌ ಎತ್ತಿ ತೋರಿಸಿದ್ದರು. ಇಂತಹ ನಿಯಮ ಉಲ್ಲಂಘನೆಗಳು ಆಸ್ಪತ್ರೆಯ ಪ್ರತಿಷ್ಠೆಗೆ ಕುಂದು ತರುತ್ತವೆ. ಔಷಧ ಕಂಪನಿಗಳು ಸಹಯೋಗದಿಂದ ಹಿಂದೆ ಸರಿಯಬಹುದು ಎಂದು ಎಚ್ಚರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...