ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಅಬ್ಬರ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Date:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಕರೆ, ಕಟ್ಟೆ, ತೊರೆಗಳು ತುಂಬಿಹರಿಯುತ್ತಿವೆ. ಕೃಷಿ ಭೂಮಿಯೂ ಜಲಾವೃತವಾಗಿದ್ದು, ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಒಂದು ವಾರದ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಲೆನಾಡು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳ ನಾನಾ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮತ್ತು ದಾವಣಗೆರೆ – ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಬೆಂಗಳೂರು ನಗರದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಜೈರಾಮ್ ಜಂಕ್ಷನ್, ಮೈಸೂರು ರಸ್ತೆಯ ಜಯರಾಮದಾಸ್ ಜಂಕ್ಷನ್, ಕೆಂಗೇರಿ, ಮಡಿವಾಳ, ರೂಪೇನ ಅಗ್ರಹಾರದಲ್ಲಿ ಸಂಚಾರ ಬಿಗಡಾಯಿಸಿದೆ. ಸಿಲ್ಕ್‌ಬೋರ್ಡ್‌ ಸೇರಿದಂತೆ, ಹಲವು ಪ್ರದೇಶಗಳು ಜಲಾವೃತಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗದಲ್ಲಿಯೂ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ನಗರದ ಆಲ್ಕೊಳದಲ್ಲಿರುವ ಎಸ್.ಹೆಚ್ ಲೇಔಟ್‌ನ ಕೆರೆ ಸಂಪೂರ್ಣವಾಗಿ ತುಂಬಿದೆ. ಕೆರೆ ನೀರು ಕೋಡಿ ಬಿದ್ದು, ಲೇಔಟ್‌ಗೆ ನೀರು ನುಗ್ಗಿದೆ. ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೂ ನೀರು ನುಗ್ಗಿದೆ. ಬಸ್ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಕೆಲಸಕ್ಕೆ ಹೋಗುವರು ತೊಂದರೆ ಅನುಭವಿಸುವಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...