ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Date:

  • ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ
  • ಉತ್ತರ ಒಳನಾಡಿನಲ್ಲಿ ಗಾಳಿಯ ವೇಗ ಗಂಟೆಗೆ 30-40ಕಿ.ಮೀ ತಲುಪುವ ಸಾಧ್ಯತೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನದಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಮಂಗಳವಾರ ಬೆಳಗ್ಗೆಯಿಂದಲೇ ಮಳೆ ಶುರುವಾಗಿದ್ದು, 1 ಸೆಂಟಿ ಮೀಟರ್‌ನಷ್ಟು ಮಳೆಯಾಗಿದೆ.

ರಾಜ್ಯದಲ್ಲಿ ಇನ್ನೂ ಐದು ದಿನ ಭಾರೀ ಮಳೆಯಾಗುವ ಹಿನ್ನೆಲೆ, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ದಾವಣಗೆರೆ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮಂಡ್ಯದಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಹಿನ್ನೆಲೆ, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ.

ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟ, ವಿಜಯನಗರ ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗಿನಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹೇಳಿದೆ.

ಉತ್ತರ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿರುಗಾಳಿ ವೇಗವು 40-45 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಬುಧವಾರ ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇದ್ದರೆ, ಗರಿಷ್ಠ ಉಷ್ಣಾಂಶ 24 ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.

“ಮುಂಗಾರು ಜೂನ್ 10 ರಂದು ಕರ್ನಾಟಕವನ್ನು ಪ್ರವೇಶಿಸಿದೆ. ಬಿಪೊರ್‌ಜಾಯ್ ಚಂಡಮಾರುತದ ಕಾರಣದಿಂದಾಗಿ, ಮಾನ್ಸೂನ್ ಚಲನೆಯು ಬದಲಾಗಿದೆ. ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ತೀವ್ರತೆಯ ಪರಿಣಾಮವಾಗಿ ಬೆಂಗಳೂರು ಮಾತ್ರವಲ್ಲದೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಭಾರಿ ಮಳೆಯಾಗಿದೆ. ಮುಂದಿನ ವಾರಗಳಲ್ಲಿ ‌ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಾಲ್ಕು ವರ್ಷಗಳ ಬಳಿಕ ಬೀದಿನಾಯಿ ಗಣತಿ ಮಾಡಲು ಮುಂದಾದ ಪಾಲಿಕೆ

“ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರುತ್ತದೆ. ಮುಂದಿನ ಎರಡು ವಾರಗಳಲ್ಲಿ ನಗರವು ಸರಾಸರಿಗಿಂತ ಹೆಚ್ಚಿನ ಮಳೆಯನ್ನು ಪಡೆಯಬಹುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...