ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆ; ಚಳಿ ಅಬ್ಬರ

Date:

ಮಳೆಗಾಲ ಮತ್ತು ಚಳಿಗಾಲ ಜನಜೀವನದ ಮೇಲೆ ಅತ್ಯಂತ ಆಳವಾದ ಪ್ರಭಾವ ಬೀರುವ ಋತುಗಳು. ಈ ಎರಡೂ ಋತುಗಳು ದೇಶದ ಆರ್ಥಿಕತೆ, ಕೃಷಿ ಮತ್ತು ದೈನಂದಿನ ಬದುಕಿನ ಮೇಲೆ ನಿರ್ಣಾಯಕ ಪಾತ್ರ ವಹಿಸುತ್ತವೆ. ದೇಶದಲ್ಲಿ ಮಳೆಯ ಆರ್ಭಟ ಜೋರಾಗಿರುವ ಜತೆಗೆ ಚಳಿಯೂ ಕೂಡ ವಿಪರೀತವಾಗಿದೆ.

ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಸೆನ್ಯಾರ್ ಚಂಡಮಾರುತ ಅಪ್ಪಳಿಸುತ್ತಿದೆ. ಚಂಡಮಾರುತದ ಪ್ರಭಾವದಿಂದ ಅಂಡಮಾನ್, ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ದಿನ ಅಂದರೆ, ನವೆಂಬರ್ 27, 28, 29ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ ಈ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 27ರಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಂಜು ಆವರಿಸಿಕೊಂಡಿದೆ. ಹೀಗಾಗಿ, ನಗರದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ 16 ಕಿ.ಮೀ ಇರಲಿದೆ.

ಇನ್ನು ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಿದೆ. ಆದರೆ, ಚಳಿ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದೆ.

ಚಂಡಮಾರುತದ ಹಿನ್ನೆಲೆ, ಮಳೆಯ ಜತೆಗೆ ಚಳಿಯೂ ಕೂಡ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಹಾಂಗ್‌ಕಾಂಗ್ | ಬಹುಮಹಡಿ ಕಟ್ಟಡಗಳು ಬೆಂಕಿಗಾಹುತಿ: 44 ಮಂದಿ ಸಾವು, ನೂರಾರು ಮಂದಿ ನಾಪತ್ತೆ

ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಈ ದಿನ.ಕಾಮ್ ಜತೆಗೆ ಮಾತನಾಡಿದ ಹವಾಮಾನ ತಜ್ಞೆ ಲತಾ, “ವಾಯುಭಾರ ಕುಸಿತ ಉಂಟಾಗಿರುವ ಕಾರಣ ಉತ್ತರ ಒಳನಾಡಿನ ಬೀದರ್‌ ನಲ್ಲಿ ಎರಡು ದಿನ ಕನಿಷ್ಠ 10 ಡಿಗ್ರಿ ತಾಪಮಾನ ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಹೆಚ್ಚಾಗಿರುವುದಿಲ್ಲ. ಸಾಮಾನ್ಯವಾಗಿರುತ್ತದೆ” ಎಂದು ತಿಳಿಸಿದ್ದಾರೆ.

“ನವೆಂಬರ್‌ ನಲ್ಲಿ ತಾಪಮಾನ ಸ್ಥಿರವಾಗಿರಲಿದ್ದು, ಡಿಸೆಂಬರ್ ವೇಲೆಗೆ ವಿಪರೀತ ಕುಸಿತ ಕಾಣಲಿದೆ. ಮುಂದಿನ ಮೂರು ದಿನ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ದಕ್ಷಿಣ ಭಾಗದ ಹಲವೆಡೆಡ ಸಾಧಾರಣ ಮಳೆಯಿರಲಿದೆ” ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಈ ದಿನ.ಕಾಮ್‌ಗೆ ಹೇಳಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗುತ್ತಿದೆ. ಆದರೆ, ದಿನಕಳೆದಂತೆ ಚಳಿ ಪ್ರಮಾಣ ಏರಿಕೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ಈ ಚಳಿಯ ಪ್ರಮಾಣ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...