ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಬಿಬಿಎಂಪಿ ಪ್ರತಿ ವಾರ್ಡ್‌ನಲ್ಲಿ ಸಹಾಯ ಕೇಂದ್ರ

Date:

  • ವಾರ್ಡ್ ಕಚೇರಿ ಮುಂಭಾಗ ಗೃಹಲಕ್ಷ್ಮೀ ನೋಂದಣಿ ಕೇಂದ್ರ ಎಂಬ ಬ್ಯಾನರ್ ಹಾಕಬೇಕು
  • ಪಾಲಿಕೆಯ ವೆಬ್‌ಸೈಟ್‌ನಲ್ಲಿ ವಿವರ ಸಹಿತ ಮಾಹಿತಿ ನೀಡಬೇಕು: ತುಷಾರ್ ಗಿರಿನಾಥ್

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರತಿ ವಾರ್ಡ್‌ನಲ್ಲಿ ಸಹಾಯ ಕೇಂದ್ರ ಸ್ಥಾಪಿಸಲು ಮುಂದಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಸಮನ್ವಯದಿಂದ ಬಿಬಿಎಂಪಿ ಕೆಲಸಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿ (ಕಂದಾಯ) ಲಕ್ಷ್ಮೀದೇವಿ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಚೇರಿಗಳಲ್ಲಿ ನೋಂದಣಿಗೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಲಿಕೆಯ ಎಲ್ಲ ವಾರ್ಡ್ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪಾಲಿಕೆಯ 198 ವಾರ್ಡ್‌ಗಳಲ್ಲಿ ಸ್ಥಾಪಿಸುವ ಸಹಾಯ ಕೇಂದ್ರಗಳಲ್ಲಿ ಅರ್ಹ ಫಲಾನುಭವಿಗಳು ತೆರಳಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ” ಎಂದರು.

“ಈ ನಿಟ್ಟಿನಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಸಂಬಂಧ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಗೃಹಲಕ್ಷ್ಮೀ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ನೋಂದಾಯಿಸಿ ಫಲಾನುಭವಿಗಳಿಗೆ ಮಂಜುರಾತಿ ಪತ್ರವನ್ನು ನೀಡುವ ಸಲುವಾಗಿ ಸಿಬ್ಬಂದಿಗೆ ಸರಿಯಾದ ತರಬೇತಿ ನೀಡಬೇಕು. ಜತೆಗೆ ಅದಕ್ಕೆ ಬೇಕಾದಂತಹ ಸೌಲಭ್ಯಗಳನ್ನು ಕಲ್ಪಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಚಾಲಾಕಿ ಕಳ್ಳಿಯ ಬಂಧನ

“ಪ್ರತಿ ವಾರ್ಡ್ ಕಚೇರಿ ಮುಂಭಾಗವೂ ಗೃಹ ಲಕ್ಷ್ಮೀ ನೋಂದಣಿ ಕೇಂದ್ರ ಎಂಬ ಬ್ಯಾನರ್ ಅನ್ನು ಅಳವಡಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಡಿಯೋ, ವೀಡಿಯೋ ಕ್ಲಿಪ್ಸ್ ಪಡೆದು ನಗರದ ಜನದಟ್ಟಣೆ/ಜನನಿಬಿಡ ಪ್ರದೇಶ, ಕೊಳಗೇರಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ನೀಡಿ ಎಲ್ಲ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳುವಂತೆ ಕ್ರಮವಹಿಸಬೇಕು” ಎಂದು ತಿಳಿಸಿದರು.

“ಪಾಲಿಕೆಯ ವಾರ್ಡ್ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದಿರುವ ಸಂಬಂಧ ವಾರ್ಡ್ ಕಚೇರಿಗಳ ವಿಳಾಸ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಪಾಲಿಕೆಯ ವೆಬ್‌ಸೈಟ್‌ನಲ್ಲಿ ವಿವರ ಸಹಿತ ಮಾಹಿತಿಯನ್ನು ಹಾಕಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಎಲ್ಲ ವಲಯ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು, ಕಂದಾಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...