ಇನ್ಮುಂದೆ ಬೆಂಗಳೂರಿನ ಆಟೋಗಳಲ್ಲಿ ‘ಸೀಟ್‌ ಬೆಲ್ಟ್‌’: ಪ್ರಯಾಣಿಕರ ಸುರಕ್ಷತೆ ಮೊದಲ ಆದ್ಯತೆ ಎಂದ ರ‍್ಯಾಪಿಡೋ

Date:

  • ಅಪಘಾತಗಳನ್ನು ಕಡಿಮೆ ಮಾಡಿ, ಅತ್ಯಮೂಲ್ಯವಾದ ಜೀವ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರ‍್ಯಾಪಿಡೋ
  • ರ‍್ಯಾಪಿಡೋ ತನ್ನ ಅಭಿಯಾನದ ಭಾಗವಾಗಿ, ಬೆಂಗಳೂರಿನಲ್ಲಿ ಆಟೋಗಳನ್ನು ಸೀಟ್‌ ಬೆಲ್ಟ್‌ಗಳೊಂದಿಗೆ ಸಜ್ಜುಗೊಳಿಸುತ್ತಿದೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೆ ದಿನೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ ಮೂರು ತಿಂಗಳಿನಲ್ಲಿ 205 ಮಂದಿ ರಸ್ತೆ ಅಪಘಾತದಿಂದ ಸಾವನ್ನಪ್ಪಿದ್ದಾರೆ. ನಗರದಲ್ಲಿರುವ ಕೆಟ್ಟ ರಸ್ತೆಗಳು, ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದು ಹಾಗೂ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಪಾಲನೆ ಮಾಡದಿರುವುದು ಅಪಘಾತಗಳಿಗೆ ಕಾರಣವಾಗಿದೆ.

ಈ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಭಾರತದ ಪ್ರಮುಖ ಆಟೋ-ಟೆಕ್ ಅಗ್ರಿಗೇಟರ್ ಆಗಿರುವ ರ‍್ಯಾಪಿಡೋ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ #RapidoSafetyFirst ಎಂಬ ರಾಷ್ಟ್ರವ್ಯಾಪಿ ಸುರಕ್ಷತಾ ಅಭಿಯಾನವನ್ನು ಆರಂಭಿಸಿದೆ. ಈ ಮೂಲಕ ರ‍್ಯಾಪಿಡೋದ ದೈನಂದಿನ ರೈಡ್ ಸುರಕ್ಷತಾ ವೈಶಿಷ್ಟ್ಯಗಳನ್ನು ರಾಷ್ಟ್ರವ್ಯಾಪಿ ಪ್ರಚಾರ ಮಾಡುವುದಾಗಿ ಹೇಳಿಕೊಂಡಿದೆ ಹಾಗೂ ಬೆಂಗಳೂರಿನ ಆಟೋ ರಿಕ್ಷಾಗಳಿಗೆ ಸೀಟ್ ಬೆಲ್ಟ್‌ಗಳನ್ನು ಅಳವಡಿಸುವುದಾಗಿ ಹೇಳಿದೆ.

ಅಪಘಾತಗಳನ್ನು ಕಡಿಮೆ ಮಾಡಿ, ಅತ್ಯಮೂಲ್ಯವಾದ ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರ‍್ಯಾಪಿಡೋ ಈ ಹೆಜ್ಜೆ ಇಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರ‍್ಯಾಪಿಡೋ ತನ್ನ ಅಭಿಯಾನದ ಭಾಗವಾಗಿ, ಬೆಂಗಳೂರಿನಲ್ಲಿ ಆಟೋಗಳನ್ನು ಸೀಟ್‌ ಬೆಲ್ಟ್‌ಗಳೊಂದಿಗೆ ಸಜ್ಜುಗೊಳಿಸುತ್ತಿದೆ. ನಗರದಲ್ಲಿ ಅಧಿಕ ಜನದಟ್ಟಣೆ, ವಾಹನದಟ್ಟಣೆ ಇರುವಂತಹ ಪ್ರದೇಶಗಳಲ್ಲಿ ಹಠಾತ್ ನಿಲುಗಡೆಗಳು ಅಥವಾ ಘರ್ಷಣೆಯ ಸಮಯದಲ್ಲಿ ಅಪಘಾತಗಳು, ಸಾವುಗಳು ಮತ್ತು ಗಾಯಗಳ ಅಪಾಯದಿಂದ ಪ್ರಯಾಣಿಕರನ್ನು ಸೀಟ್‌ಬೆಲ್ಟ್‌ ರಕ್ಷಿಸುತ್ತದೆ ಎಂದು ರ‍್ಯಾಪಿಡೋ ಕಂಪನಿ ತಿಳಿಸಿದೆ.

“ಪ್ರಯಾಣಿಕರ ಸುರಕ್ಷತೆಗಾಗಿ ರ‍್ಯಾಪಿಡೋ ತನ್ನ ಚಾಲಕರನ್ನು ಆಯ್ಕೆ ಮಾಡುವಾಗ 4 ಹಂತಗಳಲ್ಲಿ ಚಾಲಕರ ಹಿನ್ನೆಲೆ, ನಿಯಮಿತ ವಾಹನ ತಪಾಸಣೆ ಪರಿಶೀಲಿಸಿ ಆಯ್ಕೆ ಮಾಡಲಾಗುವುದು. ಮಹಿಳಾ ಪ್ರಯಾಣಿಕರ ವಿಳಾಸಗಳ ಬಗ್ಗೆ ಗೌಪ್ಯತೆಯನ್ನು ಕಾಪಾಡಲಾಗುತ್ತದೆ. ಲೈವ್ ರೈಡ್ ಟ್ರ್ಯಾಕಿಂಗ್ ಹಾಗೂ ರೈಡ್‌ಗಳಿಗೆ 24/7 ಆನ್-ಗ್ರೌಂಡ್ ಬೆಂಬಲವನ್ನು ನೀಡುವುದಾಗಿ” ರ‍್ಯಾಪಿಡೋ ಕಂಪನಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ರಸ್ತೆ ಅಪಘಾತ | ಮೂರು ತಿಂಗಳಿನಲ್ಲಿ 205 ಮಂದಿ ಸಾವು

“ಸುರಕ್ಷತಾ ಅಭಿಯಾನಕ್ಕೆ ಸಾರ್ವಜನಿಕರ ಬೆಂಬಲ ಅಗತ್ಯ. ಆಟೋಗಳಲ್ಲಿ ನೀಡಿರುವ ಸೀಟ್ ಬೆಲ್ಟ್‌ಗಳನ್ನು ಧರಿಸಿ ನಮ್ಮ ಅಭಿಯಾನಕ್ಕೆ ಬೆಂಬಲ ನೀಡಿ” ಎಂದು ರ‍್ಯಾಪಿಡೋ ಸಂಸ್ಥೆ ಮನವಿ ಮಾಡಿದೆ.

ರಾಪಿಡೋ ಆಟೋ ಸಹ-ಸಂಸ್ಥಾಪಕ ಪವನ್ ಗುಂಟುಪಲ್ಲಿ ಮಾತನಾಡಿ, “ಭಾರತದಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ರಸ್ತೆ ಸುರಕ್ಷತೆ ನಮ್ಮ ಪ್ರಮುಖ ಕಾಳಜಿಯಾಗಿದೆ. ರಸ್ತೆ ಸುರಕ್ಷತೆಯ ಮಹತ್ವ ಮತ್ತು ಜಾಗೃತಿಯನ್ನು ಉತ್ತೇಜಿಸಲು, ಅಪಘಾತಗಳು, ಸಾವು-ನೋವು ಕಡಿಮೆ ಮಾಡಲು ರ‍್ಯಾಪಿಡೋ ಈ ಅಭಿಯಾನವನ್ನು ಪರಿಚಯಿಸುತ್ತಿದೆ. ಮುಖ್ಯವಾಗಿ #RapidoSafetyFirst ಅಭಿಯಾನವು ಗ್ರಾಹಕರ ಡೇಟಾ ಮತ್ತು ಸುರಕ್ಷತೆಗಾಗಿ ಸೀಟ್‌ ಬೆಲ್ಟ್‌ ಜೊತೆಗೆ 360 ಡಿಗ್ರಿ ಪರಿಹಾರಗಳನ್ನು ಒಳಗೊಂಡಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...