ಹಿಟ್ ಆ್ಯಂಡ್ ರನ್ ಪ್ರಕರಣ | ಜ.17 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ಸಂಘ ಕರೆ

Date:

ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ 10 ವರ್ಷ ಜೈಲು ಹಾಗೂ ₹7 ಲಕ್ಷ ದಂಡ ವಿಧಿಸುವ ಕೇಂದ್ರ ಸರ್ಕಾರದ ಕಾನೂನು ವಿರೋಧಿಸಿ ಲಾರಿ ಮಾಲೀಕರ ಸಂಘ ಜನವರಿ 17ರಿಂದ ರಾಜ್ಯದಲ್ಲಿ ಮುಷ್ಕರ ಕೈಗೊಂಡಿದೆ.

ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಲಾರಿ ಚಾಲಕರಿಗೆ ಶಿಕ್ಷೆ ಹಾಗೂ ದಂಡ ವಿಧಿಸುವ ಕಾನೂನು ಜಾರಿಯ ಜತೆಗೆ, ಸಾರಿಗೆ ಇಲಾಖೆಯಿಂದ ಲಾರಿ ಮಾಲೀಕರಿಗೆ ಆಗುತ್ತಿರುವ ಕಿರುಕುಳದ ವಿರುದ್ಧ ಕರ್ನಾಟಕ ಲಾರಿ ಮಾಲೀಕರ ಸಂಘ ಮುಷ್ಕರ ನಡೆಸಲು ತೀರ್ಮಾನಿಸಿದೆ. ಲಾರಿ ಮುಷ್ಕರದಿಂದ ರಾಜ್ಯದಲ್ಲಿ ಅಗತ್ಯವಸ್ತುಗಳ ಸಾಗಾಟದ ಮೇಲೆ ಪರಿಣಾಮವಾಗುವ ಸಾಧ್ಯತೆ ಇದೆ.

ಈ ಕಾನೂನು ವಿರೋಧಿಸಿ ಉತ್ತರದ ಭಾರತದ ನಾನಾ ರಾಜ್ಯಗಳಲ್ಲಿ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ. ಈ ಹಿನ್ನೆಲೆ ಕಾನೂನು ಜಾರಿ ಮಾಡುವುದರಿಂದ ಹಿಂದೆ ಸರಿದಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಣೆ ಮಾಡಿದೆ. ಆದರೆ, ಈ ಬಗ್ಗೆ ಸ್ಪಷ್ಟ ಆದೇಶ ಪ್ರಕಟಿಸಬೇಕು ಎಂದು ಸಂಘ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರವೇ ಟಿ.ಎ.ನಾರಾಯಣಗೌಡ ಸೇರಿ 29 ಕಾರ್ಯಕರ್ತರ ಬಿಡುಗಡೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

“ಅಫಘಾತಗಳು ಸಂಭವಿಸಿದಾಗ ಅಥವಾ ಲಾರಿಯ ಹಿಂದಿನ ಚಕ್ರಕ್ಕೆ ಬೈಕ್ ಸಿಕ್ಕಿದಾಗ ಕೂಡಲೇ ಭಾರಿ ಪ್ರಮಾಣದ ವಾಹನ ನಿಲ್ಲಿಸುವುದು ಸುಲಭವಿಲ್ಲ. ಒಂದು ವೇಳೆ, ಲಾರಿ ನಿಲ್ಲಿಸಿದರೂ ಕೂಡ ಚಾಲಕರ ಮೇಲೆ ಜನರಿಂದ ಹಲ್ಲೆಯಾಗುತ್ತದೆ. ಹಾಗಾಗಿ, ಲಾರಿ ಚಾಲಕರು ಆತ್ಮರಕ್ಷಣೆಗಾಗಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ತೆರಳುತ್ತಾರೆ. ಈ ತರಹದ ಪ್ರಕರಣಗಳಿಗೆ ಹಿಟ್‌ ಆಂಡ್ ರನ್ ದಾಖಲು ಮಾಡುವುದು ಎಷ್ಟು ಸರಿ. ಹಾಗಾಗಿ ಸರ್ಕಾರ ಈ ಕೂಡಲೇ ಈ ಕಾನೂನನ್ನು ರದ್ದು ಮಾಡಬೇಕು” ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ನವೀನ್​ ರೆಡ್ಡಿ ಹೇಳಿದರು.

ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನಗಳಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...