ಬೆಂಗಳೂರಿನ ಕೆ.ಆರ್ ಪುರಂ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದೆ. ಯುವತಿಯನ್ನು ಬಿಎಂಟಿಸಿ ಬಸ್ ಬಲಿ ಪಡೆದಿದ್ದು, ಆಕೆಯ ತಲೆ ಮೇಲೆ ಬಸ್ ಹರಿದಿದೆ.
ಮೃತ ಯುವತಿಯು ಮಣಿಪುರ ಮೂಲದ ಹನ್ನಾ ಇನಕಾ ಎಂದು ಗುರುತಿಸಲಾಗಿದೆ. ಆಕೆ ತನ್ನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಕೆ.ಆರ್. ಪುರಂ ಮೆಟ್ರೋ ನಿಲ್ದಾಣದ ಬಳಿ ಅವರಿಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ, ಬೈಕ್‌ನಲ್ಲಿದ್ದ ಇಬ್ಬರೂ ಕೆಳಗೆ ಬಿದಿದ್ದಾರೆ. ಯುವತಿ ಹನ್ನಾ ಅವರು ಬಸ್‌ನ ಮುಂಭಾಗದ ಚಕ್ರಕ್ಕೆ ಸಿಲುಕಿ, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಯುವತಿಯ ಸಾವಿಗೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.





