ಬೆಂಗಳೂರು| ರೋಸಿದ್ದ ಸಾರ್ವಜನಿಕರಿಂದ ವ್ಹೀಲಿಂಗ್‌ ಮಾಡುತ್ತಿದ್ದ ಪುಂಡರಿಗೆ ಪಾಠ

Date:

ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಸ್ಕೂಟರ್‌ಗಳನ್ನು ಫ್ಲೈಓವರ್ ಮೇಲಿಂದ ಸಾರ್ವಜನಿಕರು ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಡಿಯೋ ಸ್ಕೂಟರ್​ಗಳನ್ನ ಎಸೆಯಲಾಗಿದೆ.

ಎರಡು ಸ್ಕೂಟರ್​ಗಳನ್ನು ಎಸೆಯಲಾಗಿದೆ. ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸುವ ರೀತಿ ವ್ಹೀಲಿಂಗ್ ಮಾಡುತ್ತಿದ್ದರು. ಅಷ್ಟಲ್ಲದೇ ಒಂದು ವಾಹನಕ್ಕೆ ಡಿಕ್ಕಿ ಕೂಡ ಹೊಡೆದಿದ್ದಾರೆ. ಈ ವೇಳೆ ಬೈಕ್ ತಡೆದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಬೈಕ್‌ ಅನ್ನು ಎತ್ತಿ ಬಿಸಾಡಿದ್ದಾರೆ. ವ್ಹೀಲಿಂಗ್ ಮಾಡಿದ ಪುಂಡನ ಬೈಕ್​ಅನ್ನು ಫ್ಲೈಓವರ್​​ ಮೇಲಿಂದ ಬಿಸಾಡಿರುವ ವಿಡಿಯೋ ವೈರಲ್ ಆಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಕಚೇರಿಯು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನವನ್ನು ಈ ರಾಜ್ಯ ಸಹಿಸಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತಿಚೆಗೆ ಬೆಂಗಳೂರು ನಗರ ಪೊಲೀಸರು ವಿಡಿಯೋವೊಂದನ್ನು ಹಂಚಿಕೊಂಡಿದ್ದು ವ್ಹೀಲಿಂಗ್ ಮಾಡುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದರು. ನಗರದ ಜನನಿಬಿಡ ರಸ್ತೆಯಲ್ಲಿ ಅಪಾಯಕಾರಿ ಬೈಕ್ ಸ್ಟಂಟ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಈಗ ಆ ರೀತಿ ಸ್ಟಂಟ್ ಮಾಡಿದ್ದ ಪುಂಡರ ಗುಂಪನ್ನು ಪೊಲೀಸರು ಬಂಧಿಸಿದ್ದರು.

“ನಗರದ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತೀರಾ? ನಿಮ್ಮ ಸಾಹಸವನ್ನು ನಿಲ್ಲಿಸಲು ನಮ್ಮ ಅಧಿಕಾರಿಗಳು ಯಾವಾಗಲೂ ಸಿದ್ಧರಾಗಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸರು ಸ್ಟಂಟ್ ಮಾಡುವ ವ್ಯಕ್ತಿಗಳ ವಿಡಿಯೋವನ್ನು ಹಂಚಿಕೊಂಡಿದ್ದು, ವ್ಹೀಲಿಂಗ್ ಮಾಡಿದ ಪುಂಡರನ್ನು ಬಂಧಿಸಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.

ಕೆಲವು ದಿನಗಳ ಹಿಂದೆ ಬೆಂಗಳೂರು ಪೊಲೀಸರು ವ್ಹೀಲಿಂಗ್ ಮಾಡುತ್ತಿದ್ದ ಒಟ್ಟು 44 ಮಂದಿಯನ್ನು ಬಂಧಿಸಿದ್ದು, ಎಲ್ಲ ಸ್ಕೂಟರ್, ಬೈಕ್‌ಗಳನ್ನು ಜಪ್ತಿ ಮಾಡಿದ್ದರು. ಪೊಲೀಸರ ಮಾಹಿತಿ ಪ್ರಕಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ರೀತಿ ವ್ಹೀಲಿಂಗ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ 33 ಪ್ರಕರಣಗಳು ದಾಖಲಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...