ನೂರಾರು ಗೂಂಡಾಗಳಿಂದ ರಾತ್ರೋರಾತ್ರಿ ದಲಿತರ ಮನೆ-ದೇವಸ್ಥಾನ ಧ್ವಂಸ, ಪ್ರೆಸ್ಟೀಜ್ ಕಂಪನಿ ಮೇಲೆ ಕೃತ್ಯದ ಆರೋಪ

Date:

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿನ ಬೇಗೂರಲ್ಲಿ ನೂರಾರು ಗೂಂಡಾಗಳು ಬುಧವಾರ ರಾತ್ರೋರಾತ್ರಿ ಏಕಕಾಲಕ್ಕೆ ನುಗ್ಗಿ, ಪೊಲೀಸರೇ ಎದುರಲ್ಲೇ ದಲಿತರ ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.

ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಸುಮಾರು ಒಂದು ಎಕರೆ ಜಮೀನಿನಲ್ಲಿ ಮುನಿಸ್ವಾಮಿ ಎಂಬುವರು 1970ರಿಂದಲೂ ಜಮೀನನ್ನು ಉಳಿಮೆ ಮಾಡಿಕೊಂಡು, ಅದೇ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದರು ಎನ್ನುವ ಮಾಹಿತಿ ಇದೆ.

ಜಮೀನಿನ ಮುಂಭಾಗದಲ್ಲಿರುವ ಪ್ರೆಸ್ಟೀಜ್ ಕಂಪನಿ ಈ ಭೂಮಿಯನ್ನು ತನ್ನ ವಶಕ್ಕೆ ಪಡೆಯಲು ಸಾಕಷ್ಟು ಸಲ ಪ್ರಯತ್ನಿಸಿದ್ದು ಎನ್ನುವ ಆರೋಪವವನ್ನು ಮುನಿಸ್ವಾಮಿ ಕುಟುಂಬ ಸದಸ್ಯರು ಮಾಡುತ್ತಿದ್ದು, ಬುಧವಾರ ರಾತ್ರೋರಾತ್ರಿ ನೂರಾರು ಗೂಂಡಾಗಳು ಧಾವಿಸಿ, ತಾವು ವಾಸವಿದ್ದ ಮನೆ ಮತ್ತು ಪಕ್ಕದ ದೇವಸ್ಥಾನವನ್ನು ನೆಲಸಮಗೊಳಿಸಿದ್ದಾರೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿರಿ: Ground Report | ಗೂಂಡಾಗಳಿಂದ ದಲಿತರ ಮನೆ, ದೇವಾಲಯ ಧ್ವಂಸವಾದರೂ ಬೇಗೂರು ಪೊಲೀಸರು ನಿರ್ಲಕ್ಷ್ಯ ತಾಳಿದ್ದೇಕೆ?

ಮುನಿಸ್ವಾಮಿ ಕುಟುಂಬದಲ್ಲಿ 12 ಜನ ಸದಸ್ಯರಿದ್ದು, ರಾತ್ರಿ ಮಲಗಿದ ವೇಳೆ ಆಗಮಿಸಿದ ಗೂಂಡಾಗಳು ಎಲ್ಲರನ್ನು ಎಚ್ಚರಿಸಿ, ಏಕಾಏಕಿ ಮನೆಯನ್ನು ಧ್ವಂಸ ಮಾಡಿದ್ದಾರೆ. ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದ ಇಬ್ಬರು ಕುಟುಂಬದ ಯುವಕರನ್ನು ಗೂಂಡಾಗಳು ರಾತ್ರಿ ಅಪಹರಿಸಿದ್ದು, ಪೊಲೀಸರಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಪೊಲೀಸ್ಟ್‌ ಸ್ಟೇಷನ್‌ ಹತ್ರ ಅವರನ್ನು ಬಿಟ್ಟು ಹೋಗಿದ್ದಾರೆ ಎಂದು ಸಂತ್ರಸ್ತರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಒಳಮೀಸಲಾತಿ ಸಮೀಕ್ಷೆ; ಜಾತಿ ಹೇಳಿಕೊಳ್ಳುವ ಸಂಕಟದಲ್ಲಿ ದಲಿತರು

ಮನೆ ಧ್ವಂಸ ಮಾಡುತ್ತಿರುವ ಬಗ್ಗೆ ಬೇಗೂರು ಪೊಲೀಸ್‌ ಠಾಣೆಗೆ ಹೋಗಿ ಮಾಹಿತಿ ನೀಡಿದರೂ ಪೊಲೀಸರು ಸ್ಪಂದಿಸಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಠಾಣಾ ಅಧಿಕಾರಿಗಳು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ದಿನ.ಕಾಮ್‌ ಜೊತೆ ಮಾತನಾಡಿದ ಮನೆ ಕಳೆದುಕೊಂಡ ಸಂತ್ರಸ್ತರು, “ಪೊಲೀಸರ್‌ ಸಮ್ಮುಖದಲ್ಲೇ ಗೂಂಡಾಗಳು ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿದ್ದಾರೆ. ಪೊಲೀಸ್‌ ಕೃತ್ಯ ಎಸಗಿದವರ ಜೊತೆ ಶ್ಯಾಮೀಲಾಗಿದ್ದು, ಅವರ ನಿರ್ಲಕ್ಷ್ಯವೇ ಗೂಂಡಾಗಳಿಗೆ ಬಲಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

    ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

    ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

    ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

    ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

    ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

    ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

    ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...