ಬಿಎಂಟಿಸಿ ನಕಲು ಸಹಿ ಅಕ್ರಮ | 7 ಜನರ ವಿರುದ್ಧ ಎಫ್‌ಐಆರ್‌ ದಾಖಲು; ಓರ್ವನ ಬಂಧನ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಒಬ್ಬರನ್ನು ವಿಲ್ಸನ್ ಗಾರ್ಡನ್‌ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಶ್ರೀರಾಮ್ ಮುಲ್ಕಾವನ್ ಬಂಧಿತ. ಅಸಿಸ್ಟೆಂಟ್ ಸೆಕ್ಯುರಿಟಿ ಅಂಡ್ ವಿಜಿಲೆನ್ಸ್ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೋಲಿಸ್ ಠಾಣೆಯಲ್ಲಿ ಏಳು ಜನ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ವಿಲ್ಸನ್‌ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮ್ ಮುಲ್ಕಾವನ್(ಅಂದಿನ ಮುಖ್ಯ ಸಂಚಾರ ವ್ಯವಸ್ಥಾಪಕರು), ಶ್ಯಾಮಲಾ ಎಸ್. ಮದ್ದೋಡಿ(ವಿಭಾಗೀಯ ಸಂಚಾರ ಅಧಿಕಾರಿ), ಮಮತಾ ಬಿ.ಕೆ, ಸಹಾಯಕ(ಸಹಾಯಕ ಸಂಚಾರ ವ್ಯವಸ್ಥಾಪಕರು), ಅನಿತಾ ಟಿ(ಸಹಾಯಕ ಸಂಚಾರ ಅಧೀಕ್ಷಕಿ), ಗುಣಶೀಲ(ಸಹಾಯಕ ಸಂಚಾರ ನಿರೀಕ್ಷಕಿ), ವೆಂಕಟೇಶ್ ಆರ್(ಕಿರಿಯ ಸಹಾಯಕ), ಪ್ರಕಾಶ್ ಕೊಪ್ಪಳ(ಕಿರಿಯ ಸಹಾಯಕ) ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು.

ಈ ಹಿಂದೆ ಬಿಎಂಟಿಸಿಯಲ್ಲಿ ಎಂಡಿಗಳಾಗಿದ್ದ ಶಿಖಾ, ರೇಜು ಹಾಗೂ ಭದ್ರತಾ ಮತ್ತು ‌ಜಾಗೃತದಳದ ನಿರ್ದೇಶಕ ಅರುಣ್ ಕೆ ಸಹಿಯನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಕೋಟ್ಯಂತರ ಹಣವನ್ನು ವಂಚನೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಕೋಟ್ಯಂತರ ಹಣವನ್ನು ವಂಚನೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆ, ಏಳು ಜನರನ್ನು ಕಮರ್ಷಿಯಲ್ ವಿಭಾಗದಿಂದ ನಾನಾ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ

ಈ ಬಗ್ಗೆ ಅಸಿಸ್ಟೆಂಟ್ ಸೆಕ್ಯುರಿಟಿ ಅಂಡ್ ವಿಜಿಲೆನ್ಸ್ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನಲ್ಲಿ, “ಒಂದು ಕಡತದಲ್ಲಿ ₹10 ಕೋಟಿ 50 ಲಕ್ಷ ಹಾಗೂ ಮತ್ತೊಂದು ಕಡತದಲ್ಲಿ ₹6 ಕೋಟಿ 91 ಲಕ್ಷ ಹಾಗೂ ₹21 ಲಕ್ಷದ 64 ಸಾವಿರ, ₹1 ಲಕ್ಷದ 5 ಸಾವಿರ ಒಟ್ಟು ಸುಮಾರು ₹17 ಕೋಟಿ 64 ಲಕ್ಷ ರೂಪಾಯಿ ಸಂಸ್ಥೆಗೆ ನಷ್ಟ ಉಂಟು ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...