ಕೋಗಿಲು ಕಾಲೋನಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಬೇಕು – ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯ

Date:

ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿಯಲ್ಲಿ ನೂರಾರು ಮನೆಗಳನ್ನು ಧ್ವಂಸಗೊಳಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ ಹಮೀದ್ ವಾಣಿಯಂಬಲಂ ಮತ್ತು ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್ ಅವರ ನೇತೃತ್ವದ ನಿಯೋಗವು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ನೀಡಿತು.

ನಿಯೋಗವು ಇಂದು ಬೆಂಗಳೂರು ಯಲಹಂಕ ವಿಧಾನಸಭಾ ಕ್ಷೇತ್ರದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿಗೆ ಭೇಟಿ ನೀಡಿ, ಸ್ಥಳದಲ್ಲೇ ಸಂತ್ರಸ್ತ ನಿವಾಸಿಗಳೊಂದಿಗೆ ಸಂವಾದ ನಡೆಸಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿತು. ಕಳೆದ ಆರು ವರ್ಷಗಳಿಂದ ಈ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆದ ಚರ್ಚೆಯಲ್ಲಿ ಹಲವು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ.

ಈ ಪ್ರದೇಶದಲ್ಲಿ ಫಕೀರ್ ಕಾಲೋನಿ, ಫಕೀರ್ ಕಾಲೋನಿ (ನ್ಯೂ) ಹಾಗೂ ವಸೀಮ್ ಲೇಔಟ್ ಎಂಬ ಮೂರು ವಸತಿ ಪ್ರದೇಶಗಳಿದ್ದು, ಒಟ್ಟು 167 ಮನೆಗಳು ಧ್ವಂಸಗೊಂಡಿವೆ. ಈ ಕಾರ್ಯಾಚರಣೆಯಿಂದ 394 ಮಕ್ಕಳು ಸೇರಿ ಒಟ್ಟು 1,007 ಜನರು ಬಾಧಿತರಾಗಿದ್ದಾರೆ. ಫಕೀರ್ ಕಾಲೋನಿ ಕಳೆದ 30 ವರ್ಷಗಳಿಂದ ಅಸ್ತಿತ್ವದಲ್ಲಿರುವ ಅತ್ಯಂತ ಹಳೆಯ ವಸತಿ ಪ್ರದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನೇಕ ನಿವಾಸಿಗಳು ಸ್ಥಳೀಯ ರಾಜಕೀಯ ಮಧ್ಯವರ್ತಿಗಳಿಂದ ರೂ.1–2 ಲಕ್ಷ ಪಾವತಿಸಿ ಜಮೀನು ಖರೀದಿಸಿದ್ದು, ಮನೆ ನಿರ್ಮಾಣಕ್ಕೆ ರೂ.2–3 ಲಕ್ಷ ಹೂಡಿಕೆ ಮಾಡಿದ್ದಾರೆ. ಹಲವು ಕುಟುಂಬಗಳಿಗೆ ಸರ್ಕಾರದಿಂದಲೇ “ಪ್ರೊವಿಷನಲ್ ಅಲಾಟ್‌ಮೆಂಟ್ ಲೆಟರ್ ಫಾರ್ ಸೈಟ್” ನೀಡಲಾಗಿದ್ದು, ಅದೇ ವಿಳಾಸದಲ್ಲಿ ವಿದ್ಯುತ್ ಸಂಪರ್ಕ, ಆಧಾರ್ ಕಾರ್ಡ್ ಸೇರಿದಂತೆ ಇತರೆ ಅಧಿಕೃತ ದಾಖಲೆಗಳು ಒದಗಿಸಲಾಗಿದೆ.

ಸರ್ಕಾರ ಹೇಳುವಂತೆ ಇದು ಕಸದ ತ್ಯಾಜ್ಯ ಪ್ರದೇಶವಲ್ಲ ಎಂಬುದು ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ. ಧ್ವಂಸಕ್ಕೆ ಮೊದಲು ನಿವಾಸಿಗಳಿಗೆ ಯಾವುದೇ ಮುನ್ನೋಟಿಸ್ ನೀಡಿಲ್ಲ. ಮನೆಗಳನ್ನು ಒಳಗಿನ ವಸ್ತುಗಳೊಡನೆ ಧ್ವಂಸಗೊಳಿಸಿರುವುದರಿಂದ ಭಾರೀ ನಷ್ಟ ಸಂಭವಿಸಿದೆ. ಧ್ವಂಸ ನಂತರವೂ ಸರ್ಕಾರದಿಂದ ಯಾವುದೇ ಪರ್ಯಾಯ ವ್ಯವಸ್ಥೆ ಅಥವಾ ಪುನರ್ವಸತಿ ಕ್ರಮ ಕೈಗೊಳ್ಳಲಾಗಿಲ್ಲ. ಕೆಲ ಸ್ಥಳೀಯ ರಾಜಕೀಯ ಮುಖಂಡರು ಜನರನ್ನು ತಪ್ಪು ದಾರಿಗೆಳೆದು ಮೋಸಗೊಳಿಸಿರುವುದು ಕಂಡುಬಂದಿದೆ. ಹರಡಲಾಗಿರುವ ವದಂತಿಗಳಿಗೆ ವಿರುದ್ಧವಾಗಿ, ಈ ಪ್ರದೇಶದಲ್ಲಿ ಒಬ್ಬರೂ ಅಕ್ರಮ ವಲಸಿಗರು ಇಲ್ಲ ಎಂಬುದು ನಿಯೋಗದ ಪರಿಶೀಲನೆಯಲ್ಲಿ ದೃಢಪಟ್ಟಿದೆ.

ಭೂಮಿ ಸರ್ಕಾರಿ ಅಥವಾ ಅಕ್ರಮ ಆಕ್ರಮಣ ಎಂಬ ಕಾನೂನು ಪ್ರಶ್ನೆ ದ್ವಿತೀಯವಾಗಿದೆ. ವರ್ಷಗಳ ಕಾಲ ಸರ್ಕಾರ ಮೌನ ವೀಕ್ಷಕರಾಗಿ ಉಳಿದು, ಅದೇ ವಿಳಾಸಕ್ಕೆ ಅಧಿಕೃತ ದಾಖಲೆಗಳನ್ನು ನೀಡಿರುವುದು ಸರ್ಕಾರದ ದೊಡ್ಡ ವೈಫಲ್ಯವನ್ನು ತೋರಿಸುತ್ತದೆ ಎಂದು ನಿಯೋಗವು ತಿಳಿಸಿದೆ. ಆಶ್ರಯವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು; ಅದನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ಮಾನವೀಯ ದೃಷ್ಟಿಯಿಂದ ತಕ್ಷಣ ಮಧ್ಯಪ್ರವೇಶಿಸಿ ಸಂತ್ರಸ್ತರಿಗೆ ಸೂರು ಒದಗಿಸಬೇಕು; ಉಂಟಾದ ನಷ್ಟಕ್ಕೆ ತಕ್ಕ ಪರಿಹಾರ ನೀಡಬೇಕು; ದಾಖಲೆಗಳನ್ನು ಹೊಂದಿರುವವರಿಗೆ ಶಾಶ್ವತ ಮನೆಗಳನ್ನು ನಿರ್ಮಿಸಿ ಒದಗಿಸಬೇಕು; ಸಂತ್ರಸ್ತ ಕುಟುಂಬಗಳ ತ್ವರಿತ ಪುನರ್ವಸತಿಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

ಈ ನಿಯೋಗದಲ್ಲಿ ರಿಯಾಜ್ ಅಹ್ಮದ್ (ರಾಜ್ಯ ಪ್ರಧಾನ ಕಾರ್ಯದರ್ಶಿ), ತಲತ್ ಯಾಸ್ಮೀನ್ (ರಾಜ್ಯ ಕಾರ್ಯದರ್ಶಿ), ಅನ್ವಿ ಪ್ರಭಾಕರ್ (ಎಸ್‌ಡಬ್ಲ್ಯುಸಿ ಸದಸ್ಯರು), ಇಮ್ತಿಯಾಜ್ ಅಹ್ಮದ್ (ಬೆಂಗಳೂರು ದಕ್ಷಿಣ ಅಧ್ಯಕ್ಷರು), ಅಬ್ದುಸ್ ಸಮದ್ (ಬೆಂಗಳೂರು ಉತ್ತರ ಉಪಾಧ್ಯಕ್ಷರು), ದಾವೂದ್ ಅಂಬರ್ (ಬೆಂಗಳೂರು ದಕ್ಷಿಣ ಪ್ರಧಾನ ಕಾರ್ಯದರ್ಶಿ), ಹುಸೇನ್ ಸಾಹೇಬ್, ಪರ್ವೀನ್ ಶೈಖ್ ಸೇರಿದಂತೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...