ಭಾರತ-ಆಸ್ಟ್ರೇಲಿಯಾ ಟಿ-20 | ಡಿ. 3ರಂದು ನಮ್ಮ ಮೆಟ್ರೋ ಸಂಚಾರ ಸಮಯ ವಿಸ್ತರಣೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿಸೆಂಬರ್‌ 3ರಂದು ಭಾರತಆಸ್ಟ್ರೇಲಿಯಾ ನಡುವೆ ಟಿ-20 ಪಂದ್ಯಾವಳಿಯ 5ನೇ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದೆ.

“ಡಿ. 3ರಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿರುವ ನಾಲ್ಕು ಟರ್ಮಿನಲ್‌ ಮೆಟ್ರೋ ನಿಲ್ದಾಣಗಳಿಂದ ಹೊರಡುವ ರೈಲು ಸೇವೆಗಳನ್ನು ರಾತ್ರಿ 11.45 ರವರೆಗೆ ವಿಸ್ತರಿಸಲಾಗಿದೆ” ಎಂದು ಹೇಳಿದೆ.

“ಜತೆಗೆ, ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಡಿ. 3ರಂದು ಮಧ್ಯಾಹ್ನ 2 ಗಂಟೆಯಿಂದ ಮಾರಾಟಕ್ಕೆ ಲಭ್ಯವಿದೆ. ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತೃತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತವಾಗಿರುತ್ತದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೇಪರ್ ಟಿಕೆಟ್ ದರ 50 ಇರಲಿದೆ. ಜೊತೆಗೆ, ಕ್ಯೂಆರ್ ಕೋಡ್ ಟಿಕೆಟ್‌ಗಳು ಸಾಮಾನ್ಯ ದರದ ಶೇ.5 ರಿಯಾಯಿತಿಯೊಂದಿಗೆ ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ. ಅನುಕೂಲಕರ ಪ್ರಯಾಣಕ್ಕೆ, ಕ್ರಿಕೆಟ್ ಪಂದ್ಯದ ಪ್ರಾರಂಭದ ಮೊದಲು ವಾಟ್ಸ್‌ ಆಪ್, ನಮ್ಮ ಮೆಟ್ರೋ ಆಪ್ ಅಥವಾ ಪೇಟಿಎಂ ಆಪ್‌ನಲ್ಲಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಲು ಪ್ರಯಾಣಿಕರಿಗೆ ಸೂಚಿಸಲಾಗಿದೆ. ಸ್ಮಾರ್ಟ್ ಕಾರ್ಡ್ ಮತ್ತು ಎನ್‌ಸಿಎಮ್‌ಸಿ ಕಾರ್ಡ್‌ಗಳನ್ನು ಸಹ ಎಂದಿನಂತೆ ಬಳಸಬಹುದು” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಮತದಾರ ಪಟ್ಟಿಗೆ ಸೇರ್ಪಡೆ; ಬಿಬಿಎಂಪಿ ವಿಶೇಷ ನೋಂದಣಿ ಅಭಿಯಾನ

ವಿಸ್ತೃತ ಸಮಯದಲ್ಲಿ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಪೇಪರ್ ಟಿಕೆಟ್‌ಗಳನ್ನು ಮಾತ್ರ ಅನುಮತಿಸಲಾಗಿದೆ ಎಂದು ತಿಳಿಸಿದೆ.

ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಖರೀದಿ ಜನಸಂದಣಿಯನ್ನು ತಪ್ಪಿಸಲು, ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...