ಇಂದಿರಾ ಕ್ಯಾಂಟೀನ್, ಶಾಲಾ ಬಿಸಿ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿದ್ದರಾಮಯ್ಯ ಮಹತ್ವದ ಘೋಷಣೆ

Date:

ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

“ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಢವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ” ಎಂದು ಭರವಸೆ ನೀಡಿದರು.

“ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ನೈಸ್ ಯೋಜನೆ | ಬಡವರ ಜಮೀನು ಉಳಿಸಿಕೊಟ್ಟರೆ, ಸಿದ್ದರಾಮಯ್ಯಗೆ ಆಭಾರಿಯಾಗಿರುತ್ತೇನೆ: ದೇವೇಗೌಡ

“ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ” ಎಂದು ಹೇಳಿದರು.

“2004ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ” ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...