ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾ ಗಾಂಧಿ ಜೈವಿಕ ಉದ್ಯಾನ: ಸಚಿವ ಈಶ್ವರ ಖಂಡ್ರೆ

Date:

  • ಜೈವಿಕ ಉದ್ಯಾನದಲ್ಲಿ ಬಸವಣ್ಣ ದಿವ್ಯೌಷಧ ಸಸ್ಯವನ, ಅಂಬೇಡ್ಕರ್ ಪಕ್ಷಿಲೋಕ
  • ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ, ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ

ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವ್ಯೌಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ ಹಾಗೂ ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಸೋಮವಾರ ಮಾದಪ್ಪನಹಳ್ಳಿ ನೆಡುತೋಪಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಸಚಿವರು, “ಬೆಂಗಳೂರು ಉತ್ತರ ಭಾಗದಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಯಾವುದೇ ಸಸ್ಯೋದ್ಯಾನವಿಲ್ಲ. ಹೀಗಾಗಿ ಇಲ್ಲಿ ಅರಣ್ಯ ಭೂಮಿಯಲ್ಲಿ ಇಂದಿರಾಗಾಂಧಿ ಜೈವಿಕ ಉದ್ಯಾನ, ವಿಶ್ವಗುರು ಬಸವಣ್ಣ ದಿವ್ಯೌಷಧೀಯ ಸಸ್ಯ ವನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪಕ್ಷಿ ಲೋಕ, ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ ಹಾಗೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣ ಮಾಡಲು ಚಿಂತಿಸಲಾಗಿದೆ” ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

“ಈ ಪ್ರದೇಶದಲ್ಲಿ ನೆಡಲಾಗಿರುವ ನೀಲಗಿರಿ ಮರಗಳನ್ನು ತೆಗೆದು ಅಲ್ಲಿ ಸ್ಥಳೀಯ ಜಾತಿಯ ನಂದಿ, ಹೊನ್ನೆ, ಬಿಲ್ವ, ಮಹಾಬಿಲ್ವವೇ ಮೊದಲಾದ ನೂರಾರು ಪ್ರಭೇದದ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಹೀಗೆ ಬೆಳೆಸುವ ಎಲ್ಲ ಮರಗಳ ಬಳಿ ವೃಕ್ಷದ ಹೆಸರು, ಪ್ರಭೇದ ಇತ್ಯಾದಿ ವೈಜ್ಞಾನಿಕ ವಿವರದ ಫಲಕ ಹಾಕುವ ಮೂಲಕ ಮುಂದಿನ ಪೀಳಿಗೆ ಕನಿಷ್ಠ 50 ಮರಗಳನ್ನು ಗುರುತಿಸುವಂತೆ ಜ್ಞಾನ ಸಿಂಚನ ಮಾಡಲು ಕ್ರಮ ವಹಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಗತ್ಯವಾದ ಶ್ವಾಸ ತಾಣ

“ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ ಮತ್ತು ಬೆಳೆಯುತ್ತಿದೆ. ಆದರೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ನಂತಹ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ನಿರ್ಮಾಣವೇ ಆಗಲಿಲ್ಲ. ಹೀಗಾಗಿ ಉದ್ಯಾನ ನಗರಿ ಬೆಂಗಳೂರಿನ ಖ್ಯಾತಿಯನ್ನು ಉಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.

“ಯಲಹಂಕ ಸುತ್ತಮುತ್ತ ನೂರಾರು ವಸತಿ ಬಡಾವಣೆಗಳಿದ್ದು, ಬಿಡಿಎ ಸಹ 25 ಸಾವಿರ ನಿವೇಶನಗಳ ಡಾ.ಶಿವರಾಮಕಾರಂತ ಬಡಾವಣೆ ಅಭಿವೃದ್ಧಿ ಪಡಿಸುತ್ತಿದೆ. ಜೊತೆಗೆ ಇಲ್ಲಿ 5-6 ಸಾವಿರ ಮನೆಗಳು ಈಗಾಗಲೇ ಇವೆ. ಭವಿಷ್ಯದಲ್ಲಿ 2 ಲಕ್ಷ ಜನರು ವಾಸಿಸುವ ಈ ಪ್ರದೇಶದಲ್ಲಿ ಇಂದಿರಾಗಾಂಧಿ ಜೈವಿಕ ಉದ್ಯಾನ, ಗಿಡಮೂಲಿಕೆಗಳ ದಿವ್ಯೌಷಧ ವನ, ವೃಕ್ಷೋಧ್ಯಾನ ಮತ್ತು ಕಿರು ಮೃಗಾಲಯ ಸ್ಥಾಪಿಸುವುದರಿಂದ ಜನಾಕರ್ಷಣೆಯ ಕೇಂದ್ರವೂ ಆಗುತ್ತದೆ. ಜೊತೆಗೆ ಬೆಂಗಳೂರಿನ ಈ ಭಾಗದ ಜನರಿಗೆ ಅತ್ಯುತ್ತಮ ಶ್ವಾಸತಾಣ (ಲಂಗ್ಸ್ ಸ್ಪೇಸ್) ಲಭಿಸಿದಂತಾಗುತ್ತದೆ” ಎಂದು ವಿವರಿಸಿದರು.

ನವೆಂಬರ್ ಅಂತ್ಯಕ್ಕೆ ಶಂಕುಸ್ಥಾಪನೆ

“ಅರಣ್ಯ ಇಲಾಖೆಯಿಂದ ನೆಡುತೋಪಿಗಾಗಿ ಕರ್ನಾಟಕ ಅರಣ್ಯ ನಿಗಮ ನಿಯಮಿತಕ್ಕೆ ನೀಡಲಾಗಿರುವ ಈ 153 ಎಕರೆ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯುವ ಪ್ರಕ್ರಿಯೆಯನ್ನೂ ಈಗಾಗಲೇ ಆರಂಭಿಸಲಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ಈ ಬೃಹತ್ ಉದ್ಯಾನದ ಶಂಕುಸ್ಥಾಪನೆ ನೆರವೇರಿಸಲಾಗುವುದು” ಎಂದು ಈಶ್ವರ ಖಂಡ್ರೆ ತಿಳಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ರಾಧಾ ದೇವಿ, ಶಿವಶಂಕರ್, ರವೀಂದ್ರ ಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...