ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಕೆ

Date:

  • ಅತಿ ವೇಗದ ವಾಹನ ಚಾಲನೆ ಅಪಾಯಕಾರಿ
  • ಕಳೆದ 9 ತಿಂಗಳಿನಲ್ಲಿ 595 ಅಪಘಾತ ಸಂಭವ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತದಿಂದ ಉಂಟಾಗುವ ಸಾವು-ನೋವು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ (ಎಎನ್​​ಪಿಆರ್) ಅಳವಡಿಕೆ ಮಾಡಲಾಗಿದೆ ಎಂದು ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದನ್ನು ಅಳವಡಿಕೆ ಮಾಡುವುದರಿಂದ ಅಪಘಾತ ಮತ್ತು ಸಾವು-ನೋವು ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ ಎಂದು ಭಾವಿಸುತ್ತೇನೆ. ಭಾರತೀಯ ರಸ್ತೆಗಳಲ್ಲಿ ಅತಿ ವೇಗದ ಚಾಲನೆಯೂ ಪ್ರಮುಖ ಕೊಲೆಗಾರ” ಎಂದಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ​​ವೇಯಲ್ಲಿ ಅಪಘಾತ ಹೆಚ್ಚಾದ ಹಿನ್ನೆಲೆ, ಅಪಘಾತ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್​ ಕುಮಾರ್ ಈ ಹಿಂದೆ ತಿಳಿಸಿದ್ದರು. ಕಳೆದ ಕೆಲವು ದಿನಗಳ ಹಿಂದೆ ಎಕ್ಸ್‌ಪ್ರೆಸ್‌ ವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಗದಿತ ಮಿತಿಗಿಂತ ಅತಿ ವೇಗವಾಗಿ ವಾಹನ ಚಾಲನೆ ಹಾಗೂ ಒನ್‌ ವೇನಲ್ಲಿ ವಾಹನ ಚಲಾವಣೆ ಮಾಡಿದ ವಾಹನ ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸರು ದಂಡ ಹಾಕಲಾಯಿತು.

ಹಾಗೆಯೇ, ರಾಮನಗರ ಪೊಲೀಸರು ವಾಹನದ ವೇಗ ಕಂಡು ಹಿಡಿಯುವ ಇಂಟರ್ ಸೆಪ್ಟರ್ (ಸ್ಪೀಡ್​ ರಾಡರ್ ಗನ್) ಅನ್ನು ಎಕ್ಸ್‌ಪ್ರೆಸ್ ವೇನಲ್ಲಿ ಬಳಸಲು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಂಕಿತ ಉಗ್ರರಿಗೆ ವಿದೇಶದಿಂದ ಬಂದ ಗ್ರೆನೇಡ್ ; ಸಿಸಿಬಿ ತನಿಖೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅಪಘಾತಗಳು

ರಾಮನಗರ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಈ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 2022 ರ ಸೆಪ್ಟೆಂಬರ್‌ನಿಂದ 2023ರ ಜೂನ್ ವರೆಗೆ ಅಂದರೆ ಕಳೆದ 9 ತಿಂಗಳಿನಲ್ಲಿ ಒಟ್ಟು 595 ಅಪಘಾತಗಳು ಸಂಭವಿಸಿವೆ.

595 ಅಪಘಾತಗಳಲ್ಲಿ 158 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 55 ಕಿ.ಮೀ, ಮಂಡ್ಯದಲ್ಲಿ 58 ಕಿ.ಮೀ ಹಾಗೂ ಮೈಸೂರಿನಲ್ಲಿ 5 ಕಿ.ಮೀ ಸೇರಿ ಒಟ್ಟು 118 ಕಿ.ಮೀ ದೂರದ ಎಕ್ಸ್‌ಪ್ರೆಸ್‌ ವೇ ಇದಾಗಿದೆ.

ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 55 ಮಂದಿ ಸಾವನ್ನಪ್ಪಿದ್ದು,‌ 52 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇದೇ ಅವಧಿಯಲ್ಲಿ ‌ಹೊಸ ಬೈಪಾಸ್‌ನಲ್ಲಿ 269 ಅಪಘಾತಗಳು ಸಂಭವಿಸಿ 92 ಜನ ಪ್ರಾಣ ಕಳೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...