ಹಾಲಿ- ಹೊಸ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯವೇ? ಬೆಸ್ಕಾಂನಿಂದ ಮಹತ್ವದ ಮಾಹಿತಿ ಪ್ರಕಟ

Date:

ಬೆಸ್ಕಾಂ ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್‌ ಸ್ಥಾಪನಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್‌ ಮೀಟರ್ ದರ ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌.ಶಿವಶಂಕರ್‌ ಹೇಳಿದ್ದಾರೆ.

ರಾಜ್ಯದ ವಿದ್ಯುತ್‌ ಪರಿಸ್ಥಿತಿ ಹಾಗೂ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ ಅವರ ನೇತೃತ್ವದಲ್ಲಿ ಸೋಮವಾರ ಬೆಸ್ಕಾಂ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.

“ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗುವುದು. ಹಾಲಿ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಐಚ್ಛಿಕ. ಹೊಸ ಹಾಗೂ ತಾತ್ಕಾಲಿಕ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೈಜ ಸಮಯದ ವಿದ್ಯುತ್‌ ಬಳಕೆ ಮಾಹಿತಿ ಜತೆಗೆ ವಿದ್ಯುತ್ ಬಿಲ್ ಪಾವತಿಗೆ ಡಿಜಿಟಲ್ ಸ್ಪರ್ಶ ನೀಡಲು ಮುಂದಾಗಿರುವ ಇಂಧನ ಇಲಾಖೆಯು ಸ್ಮಾರ್ಟ್ ಮೀಟರ್ ಯೋಜನೆ ಜಾರಿಗೊಳಿಸಿದೆ. ಮೀಟರ್‌ ಹಾಗೂ ಬಿಲ್‌ ಲೋಪದೋಷಗಳನ್ನು ಸರಿಪಡಿಸಲು ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡುತ್ತಿದೆ. ಟಿಓಡಿ (Time of the day) ಸೌಲಭ್ಯ, ರಿಮೋಟ್‌ ರೀಡಿಂಗ್‌, ಆಟೋ ಕನೆಕ್ಷನ್‌ ಮತ್ತು ಆಟೋ ಡಿಸ್‌ಕನೆಕ್ಷನ್‌ ಇದರಿಂದ ಸಾಧ್ಯವಾಗಲಿದೆ. ವಿದ್ಯುತ್‌ ಕಡಿತವಾದಾಗ ವಿದ್ಯುತ್‌ ವಿತರಣಾ ಕಂಪನಿಗೆ ಕ್ಷಿಪ್ರ ಮಾಹಿತಿ ತಲುಪಿ, ವಿದ್ಯುತ್ ಮರು ಸ್ಥಾಪನೆ ಪ್ರಕ್ರಿಯೆ ಸುಲಭ ಮತ್ತು ತ್ವರಿತಗೊಳ್ಳುವುದು” ಎಂದು ಹೇಳಿದರು.

“ಕೇಂದ್ರ ಸರ್ಕಾರದ ಸಬ್ಸಿಡಿ ಸೇರಿ 10 ವರ್ಷಗಳ ಕಾಲ ಪ್ರತಿ ಸ್ಮಾರ್ಟ್ ಮೀಟರ್‌ಗೆ ಪ್ರತಿ ತಿಂಗಳು ತಗಲುವ ವೆಚ್ಚ -ಮಹಾರಾಷ್ಟ್ರದಲ್ಲಿ 120.34 ರೂ., ಪಶ್ಚಿಮ ಬಂಗಾಳದಲ್ಲಿ 117.81 ರೂ., ಸಿಕ್ಕಿಂ ರಾಜ್ಯದಲ್ಲಿ 148.88 ರೂ., ಮಣಿಪುರದಲ್ಲಿ 130.30 ರೂ., ಮಧ್ಯಪ್ರದೇಶದಲ್ಲಿ 115.84 ರೂ. ಆಗುತ್ತದೆ. ಇದನ್ನು ವಿದ್ಯುತ್‌ ಸರಬರಾಜು ಕಂಪನಿಗಳು ವಿದ್ಯುತ್‌ ಬಿಲ್‌ಗೆ ಹೊಂದಾಣಿಕೆ ಮಾಡಿ ಗ್ರಾಹಕರಿಂದ ಪಡೆಯುತ್ತವೆ. ಅಲ್ಲದೇ, ಈ ರಾಜ್ಯಗಳಲ್ಲಿ ಏಕಕಾಲದಲ್ಲಿ (Bulk replacement) ಎಲ್ಲಾ ಗ್ರಾಹಕರ ಸ್ಥಾಪನಗಳಿಗೂ ಸ್ಮಾರ್ಟ್ ಮೀಟರ್ ಅಳವಡಿಸುತ್ತಿವೆ” ಎಂದು ವಿವರಿಸಿದರು.

“2025ರ ಫೆಬ್ರವರಿ 15ರಿಂದ ನಗರ ಪ್ರದೇಶಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮುಂಬರುವ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಪ್ರಕ್ರಿಯೆ ಆರಂಭವಾಗಲಿದೆ. ಬೆಸ್ಕಾಂನಲ್ಲಿ ಸದ್ಯ, 30,600 ಸ್ಮಾರ್ಟ್‌ ಮೀಟರ್‌ಗಳ ದಾಸ್ತಾನು ಇದೆ” ಎಂದು ತಿಳಿಸಿದರು.

ನಿಯಮಾನುಸಾರ ಟೆಂಡರ್‌ ಪ್ರಕ್ರಿಯೆ

“ಕೇಂದ್ರ ವಿದ್ಯುತ್ ಸಚಿವಾಲಯ ನಿಗದಿಪಡಿಸಿರುವ ಸಾಮಾನ್ಯ ಬಿಡ್ಡಿಂಗ್ ದಾಖಲೆ (Standard Bidding Document)ಗಳ ಪ್ರಕಾರ ಹಾಗೂ ಕೆಟಿಪಿಪಿ ಕಾಯ್ದೆ ಅನುಸಾರ 2024ರ ಸೆ. 26ರಂದು ಟೆಂಡರ್ ಕರೆಯಲಾಗಿತ್ತು. ಬೆಸ್ಕಾಂ ನಿರ್ದೇಶಕರ ಮಂಡಳಿಯ ಅನುಮೋದನೆ ಮೇರೆಗೆ, ಕಡಿಮೆ ದರ ಬಿಡ್‌ ಮಾಡಿದ್ದ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಸಂಸ್ಥೆಗೆ 2024ರ ಡಿ.23ರಂದು ಗುತ್ತಿಗೆ ನೀಡಲಾಯಿತು”ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...