ರದ್ದಾಗಿರುವ ಹುದ್ದೆಗಳಿಗೆ ಬಡ್ತಿ ಅಕ್ರಮದಲ್ಲಿ ಸಚಿವರ ಪಾಲೆಷ್ಟು?: ಮುಖ್ಯಮಂತ್ರಿ ಚಂದ್ರು

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಾಲ್ಕು ವರ್ಷಗಳ ಹಿಂದೆಯೇ ರದ್ದುಗೊಂಡಿದ್ದ ಹಾಸ್ಟೆಲ್‌ ವಾರ್ಡನ್‌ ಹುದ್ದೆಗಳನ್ನು ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆಯದೆ ಮರು ಸೃಜಿಸಿ ತರಾತುರಿಯಲ್ಲಿ 312 ಹಾಸ್ಟೆಲ್ ವಾರ್ಡ್‌ನರಿಗೆ ಬಡ್ತಿ ನೀಡಲಾಗಿದೆ ಎಂದರೆ ಏನರ್ಥ? ಸಚಿವರಿಗೆ ಒಂದೊಂದು ಹುದ್ದೆಯಿಂದ ಎಷ್ಟು ಕಮಿಷನ್ ಸಂದಾಯವಾಗಿದೆ? ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಹಾಸ್ಟೆಲ್ ವಾರ್ಡ್‌ನರ ಬಡ್ತಿ ವಿಚಾರದ ಬಗ್ಗೆ ಮನವಿ ಸಲ್ಲಿಸಿದ ಸಂದರ್ಭದಲ್ಲೆಲ್ಲ, ಅಧಿಸೂಚನೆಯಲ್ಲಿದ್ದ ನಿರ್ಬಂಧವನ್ನು ಉಲ್ಲೇಖಿಸುತ್ತಾ ಬಂದಿದ್ದ ಇಲಾಖೆಯು ದಿಢೀರ್‌ ನಿಲುವು ಬದಲಿಸಿದ್ದು ಯಾಕೆ? ಯಾರ ಸೂಚನೆಯ ಮೇರೆಗೆ ಈ ಬದಲಾವಣೆಯನ್ನು ಮಾಡಲಾಗಿದೆ? 312 ಮಂದಿಗೆ ಬಡ್ತಿ ನೀಡಿದ್ದರೂ, ಹುದ್ದೆಗಳ ಮಂಜೂರಾತಿಯೇ ಇಲ್ಲದಿರುವುದರಿಂದ ಅವರು ಹಾಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳಲ್ಲೇ ಮುಂದುವರಿಸಿ ಆದೇಶ ನೀಡಲಾಗಿದೆ. ಪ್ರಭಾವಿ ವ್ಯಕ್ತಿಯೊಬ್ಬರ ಕೈವಾಡವಿಲ್ಲದೆ ಇದು ಸಾಧ್ಯವೇ?” ಎಂದು ಪ್ರಶ್ನಿಸಿದರು.

₹11,495 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಎಎಪಿ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“15ನೇ ಹಣಕಾಸು ಆಯೋಗವು 2020-21ನೇ ಸಾಲಿನ ವರದಿಯಲ್ಲಿ ಶಿಫಾರಸ್ಸು ಮಾಡಿರುವಂತೆ ಕರ್ನಾಟಕಕ್ಕೆ ₹5,495 ಕೋಟಿ ವಿಶೇಷ ಅನುದಾನವನ್ನು ಹಾಗೂ ಬೆಂಗಳೂರು ಅಭಿವೃದ್ಧಿಗೆ ₹6000 ಕೋಟಿ ಸೇರಿಸಿದಂತೆ ಒಟ್ಟು ₹11495 ಕೋಟಿ ತಕ್ಷಣ ಬಿಡುಗಡೆ ಮಾಡಬೇಕು” ಎಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

“2011-12ರಲ್ಲಿ ಎಲ್ಲ ರಾಜ್ಯಗಳ ಜಿಎಸ್‍ಡಿಪಿ ಸರಾಸರಿ ಶೇ.9ಕ್ಕಿಂತ ಕಡಿಮೆ ಇದ್ದರೆ, ನಮ್ಮ ರಾಜ್ಯದ ಜಿಎಸ್‍ಡಿಪಿಯನ್ನು ಶೇ.30ರಷ್ಟು ಹೆಚ್ಚಿಸಲಾಗಿದೆ. ಹೀಗಿರುವಾಗ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಮೇಲಿನ ಮಲತಾಯಿ ಧೋರಣೆಯನ್ನು ತಕ್ಷಣ ಕೈಬಿಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಸಣ್ಣ ಗುತ್ತಿಗೆದಾರರಿಗೆ ಮೊದಲ ಹಂತದ ಹಣ ಬಿಡುಗಡೆ ಮಾಡಿದ ಬಿಬಿಎಂಪಿ

“ಭ್ರಷ್ಟಾಚಾರದ ವಿಚಾರ ಬಂದಾಗೆಲ್ಲ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ಮುಂತಾದವರು ಬಿಜೆಪಿ ಕರ್ಮಕಾಂಡಗಳತ್ತಲೇ ಕೈತೋರಿಸುತ್ತಿದ್ದರು. ಆದರೆ, ತಮ್ಮದೇ ಸರ್ಕಾರದ ಇಲಾಖೆಗಳಲ್ಲಿ ಅಕ್ರಮಗಳ ಬಗ್ಗೆ ಏನೂ ಗೊತ್ತಿಲ್ಲದಂತೆ ಕುಳಿತಿದ್ದಾರೆ. ಬಾಯಿ ಬಿಟ್ಟರೆ ತಾವು ಸತ್ಯ ಹರಿಶ್ಚಂದ್ರನ ತುಂಡು ಎಂಬಂತೆ ಆಡುತ್ತಾರೆ. ಭ್ರಷ್ಟಾಚಾರದ ವಾಸನೆ ಕಂಡರೆ ಆಗದಂತೆ ವರ್ತಿಸುತ್ತಾರೆ. ಅದೆಲ್ಲವೂ ಬೂಟಾಟಿಕೆ ಎಂಬುದು ಬಹಿರಂಗವಾಗುತ್ತಿದೆ. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳುತ್ತಿದ್ದಾರೆ. ಅಧಿಕೃತವಾಗಿ ರದ್ದುಗೊಂಡ ನೂರಾರು ಹುದ್ದೆಗಳಿಗೆ ಬಡ್ತಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಸರ್ಕಾರ ಬದಲಾಗಿದೆ. ಆದರೆ ಭ್ರಷ್ಟಾಚಾರ ಎಂದಿನಂತೆ ಎಗ್ಗಿಲ್ಲದೆ ಸಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...