ಐಟಿ ದಾಳಿ | ಜುವೆಲ್ಲರಿ ಶಾಪ್ ಮಾಲೀಕರ ಮನೆಯಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆ

Date:

ಕಳೆದ ಹಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 9 ಚಿನ್ನಾಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಓರ್ವ ಚಿನ್ನದ ವ್ಯಾಪಾರಿ ಮನೆಯಲ್ಲಿ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಪತ್ತೆಯಾಗಿದ್ದು, ಪೊಲೀಸರು ರಕ್ಷಣೆ ಮಾಡಿದ್ದಾರೆ.

ಹೌದು, ಯಡಿಯೂರಿನ ಸಾಕಮ್ಮ ಗಾರ್ಡನ್‌ನಲ್ಲಿರುವ ಗೌರವ್ ಚೋರ್ಡಿಯಾ ಎಂಬ ಚಿನ್ನದ ಅಂಗಡಿ ಮಾಲೀಕನ ಮನೆಯಲ್ಲಿ ಬಿಹಾರದ ಗಯಾ ಜಿಲ್ಲೆಯ 10 ಮತ್ತು 8 ವರ್ಷದ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆಯಾಗಿದ್ದಾರೆ.

ಮನೆಯ ಮಾಲಕಿ ಪಿಂಕಿ ಜೈನ್‌ ಅವರ ಆರೈಕೆಗಾಗಿ ಈ ಮಕ್ಕಳನ್ನು ಬಿಹಾರದಿಂದ ಕರೆ ತರಲಾಗಿತ್ತು ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆ, ಐಟಿ ಅಧಿಕಾರಿಗಳು ಅಪ್ರಾಪ್ತ ಹೆಣ್ಣು ಮಕ್ಕಳನ್ನು ರಕ್ಷಿಸಿ ಹಿರಿಯ ಪೊಲೀಸ್ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಅಪ್ರಾಪ್ತ ಮಕ್ಕಳನ್ನು ಸಿದ್ದಾಪುರದ ಬಾಲ ರಕ್ಷಣಾ ಕೇಂದ್ರದಲ್ಲಿ ವಾಸ್ತವ್ಯಕ್ಕಾಗಿ ಇರಿಸಲಾಗಿದೆ. ಜಯನಗರ ಪೊಲೀಸರು ಆರೋಪಿಗಳ ವಿರುದ್ಧ ಸುಮೋಟೊ ಕೇಸ್ ದಾಖಲಿಸಿದ್ದಾರೆ. ತನಿಖೆ ಮುಂದುವರೆದಿದೆ.

ಕಾನೂನು ಬಾಹಿರವಾಗಿ ಮಕ್ಕಳ ಬಳಕೆ ವಿಚಾರವಾಗಿ ಆಭೂಷನ್ ಕುಟುಂಬದ ಅಶೋಕ್ ಕುಮಾರ್, ಶ್ರೇಯಸ್ ಚೌಡರೆ ಹಾಗೂ ಗೌರವ್ ಎಂಬುವವರ ಮೇಲೆ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌​ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಣ್ಮನ ಸೆಳೆಯುವ ಕೇಕ್‌ ಶೋ ಆರಂಭ: ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಚರ್ಚ್‌ಗಳು

ಐಟಿ ದಾಳಿ

ಆದಾಯ ವಂಚಕರಿಗೆ ಬಿಸಿ ಮುಟ್ಟಿಸಲು ಐಟಿ ಅಧಿಕಾರಿಗಳು ಕಳೆದ ಹಲವು ದಿನಗಳಿಂದ ಬೆಂಗಳೂರಿನಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಕೋಟ್ಯಂತರ ರೂಪಾಯಿ ತೆರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ತೆರಿಗೆ ವಂಚಕರು ತಂತ್ರಜ್ಞಾನ ಬಳಸಿ ವಂಚನೆ ಎಸಗುತ್ತಿದ್ದರು. 3 ಸಾವಿರ ಕೆಜಿ‌ ಚಿನ್ನ ಮತ್ತು ವಜ್ರವನ್ನ ಹಣದ ರೂಪದಲ್ಲಿ ಮಾರಾಟ ಮಾಡಿದ್ದ ವಂಚಕನನ್ನ ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಜುವೆಲ್ಲರಿ ಶಾಪ್​ ಮಾಲೀಕರು ಸಾಫ್ಟ್‌ವೇರ್ ಹಾಗೂ ಪೆನ್ ಡ್ರೈವ್ ಬಳಸಿ ಅಕ್ರಮ ಎಸಗುತ್ತಿದ್ದರು. ಪೆನ್ ಡ್ರೈವ್ ಹಾಗೂ ಸಿಸ್ಟಂ ಬಳಸಿದ ವಂಚನೆಯನ್ನ ಐಟಿ ಪರಿಣಿತರ ತಂಡ ಪತ್ತೆ ಮಾಡಿದೆ.

ಕಳೆದ ಹಲವು ದಿನಗಳಿಂದ ಜಯನಗರದ 9 ಜುವೆಲ್ಲರಿ ಶಾಪ್​ಗಳಿಗೆ ಸೇರಿದ 15ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಐಟಿ ದಾಳಿ ನಡೆದಿತ್ತು. ಅಂಗಡಿ ಮಾಲೀಕರ ಮನೆ, ಸಂಬಂಧಿ ಮನೆ, ಆಪ್ತರ ಮನೆ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ನಡೆಸಿ, ಪರಿಶೀಲನೆ ನಡೆಸಿದ್ದರು.

ಆಭೂಷನ್ ಆ್ಯಂಡ್ ಗ್ರೂಪ್, ಮಾಲೀಕ ಮಹಾವೀರ್ ಬೋರಾ, ವಿಶಾಲ್ ಬೋರಾ ಫ್ಯಾಮಿಲಿ, ಎಂ ಆರ್ ಜ್ಯೂವೆಲ್ಸ್ ಗ್ರೂಪ್, ಮಂಗಳಂ, ಪೊಲಿಸ್ಕ್, ರಿದ್ದಿ ಸೇರಿ 9ಕ್ಕೂ ಹೆಚ್ಚು ಆಭರಣ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಕಳೆದ 5 ದಿನ 60ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ನಿರಂತರ ಶೋಧ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...