ಜಲಸುರಕ್ಷಾ ಬೆಂಗಳೂರು | ಅಂತರ್ಜಲ ಮಟ್ಟ ಹೆಚ್ಚಿಸಿ ನೀರಿನ ಸಮಸ್ಯೆ ನಿವಾರಣೆ

Date:

ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಮೂಲಕ ನೀರಿನ‌ ಸಮಸ್ಯೆಯನ್ನು ಕಡಿಮೆ ಮಾಡಲು ಸೂಕ್ತ ಯೋಜನೆ ರೂಪಿಸಬೇಕಿದೆ ಎಂದು ಜಲಸುರಕ್ಷಾ ಬೆಂಗಳೂರಿನ ನೋಡಲ್ ಅಧಿಕಾರಿ ಕೆ.ಎನ್ ರಾಜೀವ್ ತಿಳಿಸಿದರು.

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ‘ಜಲಸುರಕ್ಷಾ/ತೃಪ್ತಿಕರ ಬೆಂಗಳೂರು’ ವಿಷಯಕ್ಕೆ ಸಂಬಂಧಿಸಿದಂತೆ ದಯಾನಂದ ಸಾಗರ್ ತಾಂತ್ರಿಕ ಮಹಾವಿದ್ಯಾಲಯದ ಕಾನ್ಫರೆನ್ಸ್ ಹಾಲ್‌ನಲ್ಲಿ ಗುರುವಾರ ವಿಚಾರ ಸಂಕಿರಣ ನಡೆಯಿತು.

ಈ ವೇಳೆ ಮಾತನಾಡಿದ ಅವರು, “ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ 7 ವಿವಿಧ ವಿಷಯಗಳಲ್ಲಿ ಬರುವ ಜಲಸುರಕ್ಷಾ ಬೆಂಗಳೂರು ವಿಷಯಕ್ಕೆ ನಾಗರಿಕರಿಂದ 9,000ಕ್ಕೂ ಹೆಚ್ಚು ಸಲಹೆಗಳು ಬಂದಿವೆ. ಇಂದಿನ ವಿಚಾರ  ಸಂಕಿರಣದಲ್ಲಿ ಬಂದ ಸಲಹೆ ಸೇರಿದಂತೆ ಎಲ್ಲವನ್ನು ಒಟ್ಟುಗೂಡಿಸಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಾದ್ಯಂತ ಜಲಮಂಡಳಿ ವತಿಯಿಂದ ನೀರಿನ ಸರಬರಾಜು ಮಾಡಲಾಗುತ್ತಿದೆ. ಅದರ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ಜಲಮಂಡಳಿಯು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.‌ ಬೆಂಗಳೂರು ಜನರಿಗೆ ನೀರಿನ ವ್ಯವಸ್ಥೆ ಮಾಡುವ ಸಲುವಾಗಿ ದಿನದ 24 ಗಂಟೆಯೂ ಜಲಮಂಡಳಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ತಿಳಿಸಿದರು.

“ನಗರದಲ್ಲಿ ಹೆಚ್ಚಾಗಿ ಕಾವೇರಿ ನೀರಿನ ಮೆಲೆ ಅವಲಂಬಿತವಾಗಿದ್ದು, ಪರ್ಯಾಯ ವ್ಯವಸ್ಥೆಗಳಿಗೆ ಮುಂದಾಗಬೇಕಿದೆ. ಜನರಿಗೆ ಗುಣಮಟ್ಟದ ನೀರನ್ನು ನೀಡುವ ಸಲುವಾಗಿ ರಿಯಲ್ ಟೈಮ್ ಆನ್‌ಲೈನ್ ನೀರಿನ ಗುಣಮಟ್ಟ ಮಾನಿಟರಿಂಗ್ ಸ್ಟೇಷನ್‌ಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಚಾಲಕ

ಸಲಹೆಗಳು

• ಕೊಳಚೆ ನೀರುನ್ನು ರಾಜಕಾಲುವೆ ಹಾಗೂ ಕೆರೆಗಳಿಗೆ ಹರಿಯಲು ಬಿಡದೆ, ಒಳ ಚರಂಡಿಗಳಿಂದಲೇ ಕೊಳಚೆ ನೀರು ಹರಿಯುವಂತೆ ಮಾಡುವ ಜೊತೆಗೆ ಕೊಳಚೆ ನೀರನ್ನು ಸಂಪೂರ್ಣವಾಗಿ ಶುದ್ಧೀಕರಿಸಿ ಕೆರೆಗಳಿಗೆ ಬಿಡಬೇಕು.

• ಭೂಮಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಇಂಗು ಗುಂಡಿಗಳ ನಿರ್ಮಾಣ ಮಾಡುವುದು.

• ಶುದ್ಧ/ಹೊಸ ನೀರನ್ನು ಉಳಿಸಲು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಮರುಬಳಕೆ ಮಾಡುವ ವಿಧಾನಗಳನ್ನು ಅನುಷ್ಠಾನಕ್ಕೆ ತರುವುದು.

• ಅಂತರ್ಜಲದ ವಿವೇಚನಾರಹಿತ/ಯಥೇಚ್ಛ ಬಳಕೆಯನ್ನು ನಿಯಂತ್ರಿಸುವುದು ಹಾಗೂ ನೀರಿನ ಮಿತ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು.

• ನೀರು ಪೂರೈಕೆಯ ಮೂಲವಾಗಿ ನಗರದ ಕೆರೆಗಳನ್ನು ಬಳಸುವುದು.

• ಅನಧಿಕೃತವಾಗಿ ಬೋರ್‌ವೆಲ್‌ಗಳು ಕೊರೆಯುವುದನ್ನು ತಡೆಯುವ ಜತೆಗೆ ಅಂತಹವರ ಮೇಲೆ ದುಪ್ಪಟ್ಟು ದಂಡವನ್ನು ವಿಧಿಸುವುದು.

• ಸೋರಿಕೆಯಾಗುವ ನೀರನ್ನು ತಡೆಯಲು ಸೂಕ್ತ ಕ್ರಮವಹಿಸುವುದು.

• ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್.ಟಿ.ಪಿ ನಿರ್ಮಿಸುವುದನ್ನು‌ ಕಡ್ಡಾಯಗೊಳಿಸುವುದು.

• ವಿಕೇಂದ್ರೀಕೃತ ಪದ್ದತಿಯಲ್ಲಿ ಎಸ್.ಟಿ.ಪಿಗಳನ್ನು ನಿರ್ಮಿಸಲು ಕ್ರಮವಹಿಸುವುದು.

• ಕಲುಷಿತ ನೀರು ಶುದ್ಧೀಕರಿಸಿ ಸಂಸ್ಕರಿಸಿದ ನೀರನ್ನು ಮರು ಬಳಕೆ ಮಾಡಲು ನಾಗರಿಕರಲ್ಲಿ ಜಾಗೃತಿ ಮೂಡಿಸುವುದು.

• ಒಳ ಚರಂಡಿಗಳ ವ್ಯವಸ್ಥೆ ಸರಿಯಾಗಿರುವಂತೆ ನೋಡಿಕೊಳ್ಳುವುದು.

ಈ ವೇಳೆ ದಯಾನಂದ ಸಾಗರ್ ತಾಂತ್ರಿಕ ಮಹಾವಿದ್ಯಾಲಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ರಾಮರಾಜು, ಜಲಮಂಡಳಿಯ ಮುಖ್ಯ ಅಭಿಯಂತರರಾದ ವೆಂಕಟೇಶ್, ಸುರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...