ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

Date:

ಜಯಪ್ರಕಾಶ್ ಹೆಗ್ಡೆ ಅವರನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಶುಕ್ರವಾರ ರಾಜ್ಯ ಸರ್ಕಾರ ಮರುನೇಮಕ ಮಾಡಿ ಆದೇಶ ಹೊರಡಿಸಿದೆ.

.26ಕ್ಕೆ ಹೆಗ್ಡೆ ಅವರ ಅವಧಿ ಅಂತ್ಯವಾಗಲಿದೆ. ಅಧ್ಯಕ್ಷರ ಅವಧಿ ವಿಸ್ತರಣೆಗೆ ಅವಕಾಶವಿಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ ಎರಡು ತಿಂಗಳ ಅವಧಿಗೆ ಅಂದರೆ 2024 ಜನವರಿ 31ರವರೆಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ಮರುನೇಮಕಗೊಳಿಸಿದೆ.

ಶಿವಮೊಗ್ಗ ಜಿಲ್ಲೆಯ ಕಲ್ಯಾಣಕುಮಾರ್ ಎಚ್.ಎಸ್., ಬೆಂಗಳೂರಿನ ವಕೀಲ ಬಿ.ಎಸ್.ರಾಜಶೇಖರ್, ಉಡುಪಿಯ ಅರುಣ್ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೆ.ಟಿ.ಸುವರ್ಣ, ಬೆಂಗಳೂರಿನ ಶಾರದಾ ನಾಯ್ಕ್ ಅವರುಗಳನ್ನು ಸದಸ್ಯರನ್ನಾಗಿ ನೇಮಿಸಿ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

F tkaf1W8AAEwar

ಈ ಹಿಂದೆ, ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ ಅವರು ಜಾತಿ ಗಣತಿ ವರದಿ ಸಿದ್ಧಪಡಿಸಿದ್ದರು. ಆದರೆ, ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಮಾಡಿರಲಿಲ್ಲ. ಹೀಗಾಗಿ ವರದಿಗೆ ಆಧಾರವಾದ ದತ್ತಾಂಶ ಆಧರಿಸಿ ಆಯೋಗವು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಉದ್ದೇಶಿಸಿದೆ. ಡಿಸೆಂಬರ್‌ನಲ್ಲಿ ವರದಿ ಸಲ್ಲಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ಜಾತಿ ಗಣತಿ ವರದಿ ಚರ್ಚೆ ಬೆನ್ನಲ್ಲೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರುನೇಮಕಾತಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಂಬಳ | ನವೆಂಬರ್‌ 25, 26 ರಂದು ಸಂಚಾರ ಮಾರ್ಗ ಬದಲಾವಣೆ; ಇಲ್ಲಿದೆ ಮಾಹಿತಿ

ಸಿಎಂಗೆ ಪತ್ರ ಬರೆದಿದ್ದ ಹೆಗ್ಡೆ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿಯು 2023ರ ನವೆಂಬರ್‌ 26ರಂದು ಮುಕ್ತಾಯಗೊಳ್ಳಲಿದೆ. ಪ್ರಸ್ತುತ ಆಯೋಗವು 2015ರ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ತಯಾರಿಸುವ ಪ್ರಕ್ರಿಯೆಯಲ್ಲಿದೆ. ಈ ವರದಿಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ಸಲ್ಲಿಸಲು ಕಾಲಾವಕಾಶ ಬೇಕಿದ್ದು, ಪ್ರಸ್ತುತ ಆಯೋಗವನ್ನು ಮುಂದುವರಿಸಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ನ.22ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...