ಕನಕಪುರ | 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಡಿ.ಕೆ ಶಿವಕುಮಾರ್

Date:

  • ಆರ್ ಅಶೋಕ್ ವಿರುದ್ಧ ಗೆದ್ದು ಬೀಗಿದ ಡಿ.ಕೆ ಶಿವಕುಮಾರ್
  • ಸತತ ನಾಲ್ಕು ಬಾರಿ ಕನಕಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ನಾಲ್ಕು ಬಾರಿ ಡಿ.ಕೆ ಶಿವಕುಮಾರ್ ಗೆಲವು ಸಾಧಿಸಿದ್ದಾರೆ. ಈ ಬಾರಿ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಆರ್ ಅಶೋಕ್ ಅವರನ್ನು ಮುಂದಿಟ್ಟುಕೊಂಡು ಕನಕಪುರ ಗೆಲ್ಲಲು ಬಲೆ ಬೀಸಿತ್ತು. ಆದರೆ, ಈಗ ಜನಭಿಪ್ರಾಯ ಹೊರಬಿದ್ದಿದ್ದು, ಬರೋಬ್ಬರಿ 1ಲಕ್ಷಕ್ಕೂ ಅಧಿಕ ಮತಗಳಿಂದ ಡಿ.ಕೆ ಶಿವಕುಮಾರ್ ಜಯ ಸಾಧಿಸಿದ್ದಾರೆ.

ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್‌ ಅವರು ಸತತ ನಾಲ್ಕು ಬಾರಿ ಗೆಲುವು ದಾಖಲಿಸಿದ್ದರು. ಕನಕಪುರ ಲೋಕಸಭಾ ಕ್ಷೇತ್ರದಲ್ಲಿದ್ದ ಸಾತನೂರು ವಿಧಾನಸಭಾ ಕ್ಷೇತ್ರ 2008ರ ಕ್ಷೇತ್ರ ವಿಂಗಡಣೆ ವೇಳೆ ಸಾತನೂರು ಕ್ಷೇತ್ರವು ಕನಕಪುರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳೊಂದಿಗೆ ವಿಲೀನವಾಯಿತು. ಈ ವೇಳೆ, ಕನಕಪುರಕ್ಕೆ ಬಂದ ಡಿ.ಕೆ ಶಿವಕುಮಾರ್ ಪಿಜಿಆರ್ ಸಿಂಧಿಯಾ ಅವರ ಭದ್ರ ಕೋಟೆಯನ್ನು ತಮ್ಮದಾಗಿಸಿಕೊಂಡರು.ಬಳಿಕ ಸತತವಾಗಿ ನಾಲ್ಕು ಬಾರಿ ಕನಕಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮತ ಎಣಿಕೆ ಆರಂಭ: ಇಂದು 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ಮತದಾನವಾಗಿತ್ತು. 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆರ್.ಅಶೋಕ್ ವಿರುದ್ಧ ಡಿ.ಕೆ.ಶಿವಕುಮಾರ್ ಗೆದ್ದು ಬೀಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...