ಕನ್ನಡ ನಾಮಫಲಕ | ಕರವೇ ವಿರುದ್ದ ಮತ್ತೆ ಮೂರು ಪ್ರಕರಣ ದಾಖಲು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವಿರುದ್ದ ಮತ್ತೆ ಮೂರು ಪ್ರಕರಣ ದಾಖಲಾಗಿವೆ.

ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳ ಮುಂದಿನ ಬೋರ್ಡ್ ಒಡೆದು ಹಾಕಿದ್ದಕ್ಕೆ ಸಾದಹಳ್ಳಿಯ ಬ್ಲೂಂ ಹೋಟೆಲ್ ಸೇರಿದಂತೆ ಶೋರೂಂ ಮಾಲೀಕರು ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಮತ್ತು ವಿಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕಗಳು ಶೇ.60 ರಷ್ಟು ಇರಬೇಕೆಂದು ಡಿ.27ರಂದು ಕರವೇ ಆಗ್ರಹಿಸಿ ಪ್ರತಿಭಟನೆ ನಡೆಸಿತ್ತು. ಈ ವೇಳೆ, ಹಲವು ಅಂಗಡಿ-ಮುಂಗಟ್ಟುಗಳ ಬೋರ್ಡ್‌ ಒಡೆದು ಹಾಕಲಾಗಿತ್ತು. ಅಲ್ಲದೇ, ಹೂ ಕುಂಡ ಸೇರಿದಂತೆ ಶೋ ರೂಂ ಗಾಜುಗಳು ಪುಡಿಪುಡಿಯಾಗಿದ್ದವು. ಈ ಘಟನೆಗೆ ಸಂಬಂಧಿಸಿದಂತೆ, ಈಗಾಗಲೇ, 10 ಎಫ್​ಐಆರ್​ ದಾಖಲಾಗಿದ್ದು, ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ 53 ಜನರನ್ನ ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಕೆಲವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ಕರವೇ ಕಾರ್ಯಕರ್ತರನ್ನು ಬಂಧನ ಮಾಡಿದಕ್ಕೆ ಕನ್ನಡಪರ ಸಂಘಟನೆಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿವೆ. ಸರ್ಕಾರದ ನಡೆಗೆ ಕಿಡಿಕಾರಿವೆ.

ಈ ಸುದ್ದಿ ಓದಿದ್ದೀರಾ? ‘ಶಾಲೆಗೆ ಬನ್ನಿ ಶನಿವಾರ, ಸ್ವಚ್ಛಗೊಳಿಸೋಣ ಸರಸರ’ ಆಂದೋಲನ ಪ್ರಾರಂಭಿಸಲು ಸಕಾಲ: ನಿರಂಜನಾರಾಧ್ಯ ವಿ.ಪಿ.

“ಬಂಧನದಲ್ಲಿರುವ ಎಲ್ಲರನ್ನು ಬಿಡುಗಡೆ ಮಾಡಬೇಕು. ಜತೆಗೆ, ಹೋರಾಟಗಾರರ ಮೇಲೆ ಹಾಕಲಾಗಿರುವ ಕೇಸ್​ ಹಿಂಪಡೆಯಬೇಕು. ಒಂದು ವೇಳೆ ಬಿಡುಗಡೆ ಮಾಡದಿದ್ದರೆ, ಬೆಂಗಳೂರು ನಗರ ಬಂದ್​ ಕರೆಗೆ ಮತ್ತೊಂದು ಸುತ್ತಿನ ಸಭೆ ಮಾಡಲಾಗುವುದು. ಇನ್ನು ಫೆ.28ಕ್ಕೆ ವಾಣಿಜ್ಯ ಅಂಗಡಿಗಳ ನಾಮಫಲಕ ಕನ್ನಡದಲ್ಲಿರಬೇಕು. ಇಲ್ಲದಿದ್ರೆ ಮತ್ತೆ ನಾಮಫಲಕಗಳ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...