ತಮಿಳುನಾಡು, ಕೇರಳದಿಂದ ಕನ್ನಡಿಗರು ಕನ್ನಡ ಭಾಷೆ ಸಾಹಿತ್ಯ ಸಂರಕ್ಷಣೆ ಕಲಿಯಬೇಕಿದೆ: ಪ್ರೊ. ಕೆ ಜಿ ನಾಗರಾಜಪ್ಪ

Date:

“ಕನ್ನಡ ಸಂಸ್ಕೃತಿ ಹಾಳಾಗುತ್ತಿದೆ. ಅದನ್ನು ಸರಿಪಡಿಸುವ ದಾರಿಗಳು ಯಾವುವು ಎನ್ನುವುದು ಸಮಕಾಲೀನ ಪ್ರಶ್ನೆಯಾಗಿದೆ. ಇದನ್ನು ಬಹುಸಂಸ್ಕೃತಿಯ ನೆಲೆಯಲ್ಲಿ ಚರ್ಚಿಸುವುದು, ವಿಶ್ಲೇಷಿಸುವುದು ನಿಜವಾದ ಸಾಹಿತ್ಯವಾಗಿದೆ‌. ತಮಿಳುನಾಡು, ಕೇರಳ ಮಹಾರಾಷ್ಟ್ರಗಳಿಂದ ಕನ್ನಡಿಗರು ಕನ್ನಡ ಭಾಷೆ ಸಾಹಿತ್ಯವನ್ನು ಹೇಗೆ ಸಂರಕ್ಷಿಸಬೇಕೆಂಬುದನ್ನು ಕಲಿಯಬೇಕಿದೆ” ಎಂದರು.

ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ‌ ವಿಭಾಗ, ಅಭಿನವ ಮತ್ತು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯದ ಕನ್ನಡ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಜತೆಗೂಡಿ ಆಯೋಜಿಸಿದ್ದ ‘ಆನು ಒಲಿದಂತೆ ಹಾಡುವೆ’ ಸರಣಿಯ ಕನ್ನಡ ಮನಸ್ಸಿನೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನು ಓದಿದ್ದೀರಾ? ಕಾಶ್ಮೀರದಿಂದ 178 ಕನ್ನಡಿಗರು ಇಂದು ರಾಜ್ಯಕ್ಕೆ ವಾಪಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಹಿತ್ಯ ಶ್ರೀಸಾಮಾನ್ಯನದು. ಆದರೆ ಮುಖ್ಯವಾಹಿನಿಯ ಸಾಹಿತ್ಯ ಚರಿತ್ರೆಯಲ್ಲಿ ಶ್ರೀಸಾಮಾನ್ಯನಿಗೆ ಸ್ಥಾನವಿಲ್ಲ ಮಹಿಳೆಗೆ ಪ್ರಾತಿನಿಧ್ಯವಿಲ್ಲ, ಮೂಕ ಸಮುದಾಯಗಳಿಲ್ಲ, ಶೋಷಿತ ಧ್ವನಿಗಳಿಲ್ಲ. ಮುಖ್ಯವಾಹಿನಿ ಸಾಹಿತ್ಯದೊಳಗೆ ತರುವ ಅಗತ್ಯವಿದೆ” ಎಂದು ಪ್ರೊ. ಕೆ.ಜಿ. ನಾಗರಾಜಪ್ಪ ಹೇಳಿದರು.

ಇನ್ನು ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ ಮಾತನಾಡಿದ ಕನ್ನಡ ವಿಶ್ವವಿದ್ಯಾಲಯ ಹಂಪಿಯ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ, “ಕೆ.ಜಿ.ಎನ್‌ರಂತಹ ವಿದ್ವಾಂಸರು ಹೊಸ ತಲೆಮಾರಿಗೆ ಒಂದು ಮಾದರಿ. ಅವರ ಸಂಸ್ಕೃತಿ ಚಿಂತನೆ ಮರುಚಿಂತನೆಯ ರೂಪದಲ್ಲಿ ವ್ಯಕ್ತಗೊಂಡಿದೆ” ಎಂದರು.

“ಕೆ.ಜಿ.ಎನ್. ಗುಪ್ತ ಸಮಾಜ, ಗುಪ್ತಭಕ್ತಿಯ ಧಾರೆಗಳನ್ನು ಕನ್ನಡಕ್ಕೆ ಪರಿಚಯಿಸಿದವರು‌. ನಿಜವಾದ ಸಾಹಿತ್ಯ ಇರುವುದು ತಂತ್ರ ಮತ್ತು ಯೋಗದಲ್ಲಿ. ಕನ್ನಡ ಸಾಹಿತ್ಯ ಅವುಗಳನ್ನು ಇದುವರೆಗೂ ಅಧ್ಯಯನ ಮಾಡಿಲ್ಲ. ಮಾಡುವ ಮಾದರಿಗಳನ್ನು ಕೆ.ಜಿ.ಎನ್. ನಮಗೆ ಕೊಟ್ಟಿದ್ದಾರೆ” ಎಂದು ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ‌ ವಿಭಾಗದ ಮುಖ್ಯಸ್ಥರಾದ ಡಾ. ವೆಂಕಟಗಿರಿ ದಳವಾಯಿ ನುಡಿದರು.

ಇದನ್ನು ಓದಿದ್ದೀರಾ? ಎಲ್ಲಾ ಉದ್ಯೋಗಗಳು ಪರರಾಜ್ಯದವರ ಪಾಲಾದರೆ ಕನ್ನಡಿಗರು ಏನು ಮಾಡಬೇಕು? Kannadiga | Jobs

“ಕನ್ನಡ ಸಂಸ್ಕೃತಿಯನ್ನು ಬೆಳೆಸುವಲ್ಲಿ ನಮ್ಮ ವಿಶ್ವವಿದ್ಯಾನಿಲಯವು ಅನೇಕ ಕನಸುಗಳನ್ನು ಕಂಡಿದೆ. ಕನ್ನಡ ಸಾಹಿತ್ಯವನ್ನು ಬೆಳೆಸುವಲ್ಲಿ ನಮ್ಮ ವಿಭಾಗವು ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಅದಕ್ಕಾಗಿ ನಾವು ಕನ್ನಡ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರವನ್ನು ಸ್ಥಾಪಿಸಿದ್ದೇವೆ” ಎಂದು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯದ ಕುಲಪತಿಗಳಾದ ರೆವರೆಂಡ್ ಡಾ. ವಿಕ್ಟರ್ ಲೋಬೊ‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆನಂದ ಪ್ರಾರ್ಥನಾ ಗೀತೆ ಹಾಡಿದರು. ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಚಾಲಕರಾದ ಡಾ. ಕುಮಾರಸ್ವಾಮಿ ಬೆಜ್ಜೆಹಳ್ಳಿ ವಂದಿಸಿ, ಅಕ್ಷತಾ ಟಿ. ನಿರೂಸಿದರು. ಹಿರಿಯ ವಿದ್ವಾಂಸರಾದ ಸಿ ವೀರಣ್ಣ, ಪತ್ರಕರ್ತೆ ಆರ್ ಪೂರ್ಣಿಮಾ ಇತಿಹಾಸ ಅಕಾಡೆಮಿ ಕಾರ್ಯದರ್ಶಿ ಕೆ ಎಲ್ ರಾಜಶೇಖರ ಲೇಖಕಿ ಪಿ ಚಂದ್ರಿಕ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸುಮಿತ್ರಾ ಮುಂತಾದವರು ಪಾಲ್ಗೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...