ಕರ್ನಾಟಕ ಚುನಾವಣೆ ಅಸಲಿ ಮತ್ತು ನಕಲಿಗಳ ನಡುವಿನ ಹೋರಾಟ: ಪೃಥ್ವಿ ರೆಡ್ಡಿ

Date:

  • ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತದ ಸಲುವಾಗಿ ಅಕ್ರಮಗಳಿಗೆ ಕಡಿವಾಣ ಹಾಕಿ
  • ಜನಸಾಮಾನ್ಯರು ಚುನಾವಣೆಗೆ ಸ್ಪರ್ಧಿಸುವುದಷ್ಟೇ ಅಲ್ಲ, ಗೆಲ್ಲಲು ಕೂಡ ಸಾಧ್ಯವಿದೆ

ಆಮ್‌ ಆದ್ಮಿ ಪಕ್ಷವು (ಎಎಪಿ) ದೆಹಲಿ ಹಾಗೂ ಪಂಜಾಬ್‌ನಲ್ಲಿ ಜಾರಿಗೆ ತಂದಿರುವ ಯೋಜನೆಗಳನ್ನು ಬೇರೆ ಪಕ್ಷಗಳು ನಕಲು ಮಾಡಿ ಕರ್ನಾಟಕದಲ್ಲಿ ಆಶ್ವಾಸನೆ ನೀಡುತ್ತಿವೆ. ಈ ಚುನಾವಣೆಯು ಅಸಲಿ ಮತ್ತು ನಕಲಿಗಳ ನಡುವಿನ ಹೋರಾಟವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನವರು ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಮಾಧ್ಯಮಗಳ ಜೊತೆ ಸಂವಾದ ನಡೆಸುವುದು ಒಳ್ಳೆಯ ಬೆಳವಣಿಗೆ. ಆಮ್‌ ಆದ್ಮಿ ಪಕ್ಷವು ಇಡೀ ದೇಶದ ರಾಜಕೀಯದಲ್ಲಿ ಬದಲಾವಣೆ ತಂದಿದೆ. ಜನಪರ ಆಡಳಿತವನ್ನು ಜನರು ಬಯಸಲು ಶುರು ಮಾಡಿದ್ದು, ಚುನಾವಣೆಯಲ್ಲಿ ʻಮತದಾನ ಮಾಡುವುದರಿಂದ ನಮಗೇನು ಲಾಭವಾಗುತ್ತದೆ?ʼ ಎಂದು ಯೋಚಿಸಲು ಆರಂಭಿಸಿದ್ದಾರೆ” ಎಂದು ಹೇಳಿದರು.

“ಎಎಪಿ ಕೇವಲ ಹತ್ತು ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಧಿಕಾರ ಹೊಂದಿರುವ ಕೇವಲ ಮೂರು ಪಕ್ಷಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಕೂಡ ಒಂದು. ಜನಸಾಮಾನ್ಯರು ಚುನಾವಣೆಗೆ ಸ್ಪರ್ಧಿಸುವುದಷ್ಟೇ ಅಲ್ಲ, ಗೆಲ್ಲಲು ಕೂಡ ಸಾಧ್ಯವಿದೆ ಎಂಬುದನ್ನು ಆಮ್‌ ಆದ್ಮಿ ಪಾರ್ಟಿ ಸಾಬೀತು ಪಡಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೆದ್ದರೆ ಕಟಿಂಗ್‌ ಫ್ರೀ ಎಂದ ರಾಜಾಜಿನಗರದ ಪಕ್ಷೇತರ ಅಭ್ಯರ್ಥಿ

“ಜನರ ತೆರಿಗೆ ಹಣವು ಉದ್ಯಮಿಗಳ ಸಾಲ ಮನ್ನಾ ಮಾಡಲು ಬಳಕೆಯಾಗುತ್ತಿರುವುದು ದುರದೃಷ್ಟಕರ. ಕಮಿಷನ್‌ ದಂಧೆಯಿಂದಾಗಿ ಸರ್ಕಾರಗಳಿಗೆ ಯಾವುದಕ್ಕೂ ಹಣ ಸಾಕಾಗುತ್ತಿಲ್ಲ. ಹೀಗಿರುವಾಗ ಇವರುಗಳು ನೀಡಿರುವ ಗ್ಯಾರಂಟಿ, ಭರವಸೆಗಳು ಎಷ್ಟರಮಟ್ಟಿಗೆ ಈಡೇರುತ್ತವೆ ಎಂಬುದು ಮತದಾರರುಗಳಲ್ಲಿ ಯಕ್ಷ ಪ್ರಶ್ನೆಯಾಗಿದೆ. ಅಕ್ರಮಗಳಿಗೆ ಕಡಿವಾಣ ಹಾಕಿ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತವನ್ನು ನೀಡಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ  ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿದಂತೆ ಅನೇಕ ಪದಾಧಿಕಾರಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...