ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

Date:

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ 13ರ ಬಾಲಕನ್ನು ಬಳಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕೆಲಸದ ನಿಮಿತ್ತ ದುಬೈಗೆ ತೆರಳಿದ್ದ ಬಾಲಕನ ಪೋಷಕರು ಬಾಲಕ ಸದಾ ಮಂಕಾಗಿರುವುದನ್ನು ಕಂಡು ಮನೋವೈದ್ಯರ ಬಳಿ ಕರೆದುಕೊಂಡು ಹೊಗಿದ್ದಾರೆ. ಆಗ ತನ್ನನ್ನು ನೆರೆಮನೆಯ ಮಹಿಳೆ ಬೆದರಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿರುವುದನ್ನು ಬಾಲಕನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ.

ಮಹಿಳೆಯು ತನ್ನ ಮನೆಯಲ್ಲಿ ಬೆಳೆದಿರುವ ನುಗ್ಗೇಕಾಯಿ ಕೊಡುತ್ತೇನೆಂದು ಬಾಲಕನನ್ನು ಪದೇ ಪದೇ ಕರೆಸಿಕೊಂಡು ಅವನನ್ನು ಬಲವಂತವಾಗಿ ತನ್ನ ತೃಷೆಗೆ ಬಳಸಿಕೊಂಡಿದ್ದಾಳೆ ಎಂದು ಬಾಲಕ ಹೇಳಿಕೊಂಡಿದ್ದಾನೆ. ಇದನ್ನು ತಿಳಿದ ಬಾಲಕನ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ? ಬಾಲಕನ ಮೇಲೆ 13 ಮಂದಿಯಿಂದ ಲೈಂಗಿಕ ದೌರ್ಜನ್ಯ: 24 ಬಾರಿ ಚಾಕುವಿನಿಂದ ಇರಿದು ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಆರೋಪಿತ ಮಹಿಳೆಯು, “ನನ್ನ ವಿರುದ್ದ ಬೆಂಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಮಾಡಬೇಕು” ಎಂದು ಕೋರಿ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದಳು.

ಮಹಿಳೆ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕಟಿಸಿದ್ದು, “ಪೋಕ್ಸೋ ಕಾಯ್ದೆಗೆ ಯಾವುದೇ ಲಿಂಗ ಬೇಧವಿಲ್ಲ. ಅಪ್ರಾಪ್ತ ವಯೋಮನದ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯಲು ರೂಪಿಸಿರುವ ಕಠಿಣ ಕಾನೂನು ಶಾಸನವಾಗಿದೆ” ಎಂದು ಮಹಿಳೆಯ ವಿರುದ್ದದ ಲೈಂಗಿಕ ಆರೋಪವನ್ನು ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

“ಕಾನೂನಿನ ಅಡಿಯಲ್ಲಿ ಪುರುಷ ಮತ್ತು ಮಹಿಳೆಗೆ ಸಮಾನ ಸ್ಥಾನವಿದೆ. 18 ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ಪೋಕ್ಸೊ ಕಾಯ್ದೆಯಡಿಲ್ಲಿ ಸೂಕ್ತ ರಕ್ಷಣೆ ದೊರೆಯಬೇಕು” ಎಂದು ನ್ಯಾಯಾಲಯವು ಸಮರ್ಪಕ ರೀತಿಯಲ್ಲಿ ವ್ಯಾಖ್ಯಾನ ನೀಡಿದೆ.

“ಅಮಾಯಕ ಜೀವಗಳ ಮೇಲೆ ಕಾಮಾಂಧರು ಎಸಗುವ ಪೈಶಾಚಿಕ ಕೃತ್ಯಗಳನ್ನು ನಿರ್ದಾಕ್ಷಿಣ್ಯವಾಗಿ ತಡೆಗಟ್ಟುವುದಕ್ಕಾಗಿಯೇ ನಮ್ಮ ಶಾಸಕಾಂಗ ಪೋಕ್ಸೋದಂತಹ ಮಹತ್ತರ ಕಾಯ್ದೆಯನ್ನು ವಿನ್ಯಾಸಗೊಳಿಸಿದೆ ಎಂಬುದನ್ನು ಯಾರೂ ಮರೆಯಬಾರದು” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...