ಕೆಐಎ ಟರ್ಮಿನಲ್ 2 | ತಪಾಸಣೆ ವೇಳೆ ಸಿಬ್ಬಂದಿ ಮೇಲೆ ಹಲ್ಲೆ; ಮಹಿಳಾ ಪ್ರಯಾಣಕಿ ಬಂಧನ

Date:

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿಮಾನ ಹತ್ತುವ ಮೊದಲು ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ, ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 31 ವರ್ಷದ ಮಹಿಳಾ ಪ್ರಯಾಣಕಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ನೇಹಾ ಗುಪ್ತಾ ಎಂಬ ಪ್ರಯಾಣಕಿ ವಿರುದ್ಧ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಸುಶೀಲಾ ನೀಡಿದ ದೂರಿನ ಮೇರೆಗೆ ಪೊಲೀಸರು ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನೇಹಾ ವಿರುದ್ಧ ಐಪಿಸಿಯ ಸೆಕ್ಷನ್ 353 ಮತ್ತು ಸೆಕ್ಷನ್ 323 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ನೇಹಾ ಪಶ್ಚಿಮ ಬಂಗಾಳದ ಬಾಗ್ಡೋಗ್ರಾಕ್ಕೆ ಏರ್ ಏಷ್ಯಾ ವಿಮಾನದಲ್ಲಿ ಪ್ರಯಾಣ ಬೆಳೆಸಬೇಕಿತ್ತು. ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದರು. ತಮ್ಮ ಲಗೇಜ್ ಅನ್ನು ತಪಾಸಣೆಗಾಗಿ ಬ್ಯಾಗೇಜ್ ಸ್ಕ್ಯಾನರ್‌ನಲ್ಲಿ ಇರಿಸಿದ್ದರು. ದೈಹಿಕ ತಪಾಸಣೆಗಾಗಿ ಲೇಡೀಸ್ ಫ್ರಿಸ್ಕಿಂಗ್ ಬೂತ್ (ನಂ. 2)ಗೆ ತೆರಳಲು ಸಿಬ್ಬಂದಿ ಮಾರ್ಗದರ್ಶನ ನೀಡಿದರು. ದೈಹಿಕ ಪರೀಕ್ಷೆಗೆ ಸಹಕರಿಸಲು ನಿರಾಕರಿಸಿದಾಗ ಆಕೆಯನ್ನು ಬೂತ್ ನಂ.1ಕ್ಕೆ ತಪಾಸಣೆಗಾಗಿ ಕರೆದೊಯ್ದರು. ಅಲ್ಲಿಯೂ ಮತ್ತೆ ಸಹಕರಿಸಲು ನಿರಾಕರಿಸಿ ಸಿಐಎಸ್‌ಎಫ್ ಸಿಬ್ಬಂದಿ ಸುಶೀಲಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಶೇ.14 ರಷ್ಟು ಮಳೆ ಕೊರತೆ; ಸೆ.1ರಿಂದ ಸಾಧಾರಣ ಮಳೆ ಸಾಧ್ಯತೆ

ಭದ್ರತಾ ಸಿಬ್ಬಂದಿಯೊಂದಿಗೆ ಪ್ರಯಾಣಕಿ ನೇಹಾ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸಿಐಎಸ್ಎಫ್ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...