ಕೃಷ್ಣ ಜನ್ಮಾಷ್ಟಮಿ | ಸೆ. 6 ಮತ್ತು 7ರಂದು ಬೆಂಗಳೂರಿನ ಕೆಲವೆಡೆ ಸಂಚಾರ ಬದಲಾವಣೆ; ಇಲ್ಲಿದೆ ನೋಡಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟುತ್ತಿದೆ. ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲು ಕೃಷ್ಣನ ಭಕ್ತರು ಸಿದ್ಧತೆ ನಡೆಸಿದ್ದಾರೆ. ಮುಖ್ಯವಾಗಿ ನಗರದ ವೆಸ್ಟ್‌ ಆಫ್ ಕಾರ್ಡ್‌ ರಸ್ತೆಯಲ್ಲಿರುವ ಇಸ್ಕಾನ್ ದೇಗುಲಕ್ಕೆ ಬುಧವಾರ ಸಾವಿರಾರು ಜನ ಬರುವ ನಿರೀಕ್ಷೆಯಿದೆ. ಹಾಗಾಗಿ, ಬೆಂಗಳೂರು ಸಂಚಾರ ಪೊಲೀಸ್‌ ನಗರದ ಕೆಲವೆಡೆ ಸಂಚಾರ ನಿರ್ಬಂಧ ಮಾಡಿದೆ.

ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಲ್ಲೇಶ್ವರಂ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು, ಗಣ್ಯ ವ್ಯಕ್ತಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ಸೆ. 6 ಮತ್ತು 7ರಂದು ಡಾ.ರಾಜ್‌ ಕುಮಾರ್ ರಸ್ತೆ ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರವನ್ನು ನಿರ್ಬಂಧಿಸಿದೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಸಂಚಾರ ಪೊಲೀಸ್, “ಯಶವಂತಪುರ ಕಡೆಯಿಂದ – ಓರಾಯನ್ ಮಾಲ್- ಡಾ.ರಾಜ್ ಕುಮಾರ್ ರಸ್ತೆಯ ಮಾರ್ಗವಾಗಿ ಮೆಜೆಸ್ಟಿಕ್‌ ಕಡೆಗೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳು ಮಾರಪ್ಪನಪಾಳ್ಯ – ಯಶವಂತಪುರ ಫ್ಲೈಓವರ್ ಮಾರ್ಗವಾಗಿ – ಬಿ.ಹೆಚ್.ಇ.ಎಲ್ (ಕೆ-08) ಅಂಡ‌ರ್ ಪಾಸ್ ಮೂಲಕ – ಸರ್ಕಲ್ ಮಾರಮ್ಮ ಬಳಿ ಬಲ ತಿರುವು ಪಡೆದು – ಮಾರ್ಗೋಸ ರಸ್ತೆ ಮಲ್ಲೇಶ್ವರಂ ಮಾರ್ಗವಾಗಿ – ಕೆ.ಸಿ. ಜನರಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು – ಮಲ್ಲೇಶ್ವರಂ ಬ್ರಿಡ್ಜ್ ಅಂಡರ್ ಪಾಸ್ ಮೂಲಕ – ಲಿಂಕ್ ರಸ್ತೆಯಲ್ಲಿ ಸಂಚರಿಸಿ – ಶೇಷಾದ್ರಿಪುರಂ ಮಾರ್ಗವಾಗಿ ಕೆಂಪೆಗೌಡ ಬಸ್‌ ನಿಲ್ದಾಣ (ಮೆಜೆಸ್ಟಿಕ್) ಕಡೆ ಸಂಚರಿಸಬೇಕು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಶವಂತಪುರ ಕಡೆಯಿಂದ ಬಂದ ಬಿಎಂಟಿಸಿ ಬಸ್‌ಗಳು ಮತ್ತು ವಾಹನ ಸವಾರರು – ಜಿ.ಎಸ್.ಎಫ್ ಸರ್ಕಲ್- ಓರಾಯನ್ ಮಾಲ್ ಮುಂಭಾಗ ಡಾ.ರಾಜ್ ಕುಮಾರ್ ರಸ್ತೆಯ ಮೂಲಕ – ಡಾ.ರಾಜ್ ಕುಮಾರ್ ರಸ್ತೆ 10ನೇ ಕ್ರಾಸ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು – ಡಯಕಾನ್ ಜಂಕ್ಷನ್ ಮಾರ್ಗವಾಗಿ – ರಾಜಾಜಿನಗರ 1ನೇ ಬ್ಲಾಕ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು – ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಂಚರಿಸಿ ಮಾಗಡಿ ರಸ್ತೆ, ವಿಜಯನಗರ ಕಡೆಗೆ ಸಂಚರಿಸಬೇಕು ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಬ್ಬೆದ್ದು ನಾರುತ್ತಿರುವ ಪಾರಂಪರಿಕ ರಸೆಲ್ ಮಾರುಕಟ್ಟೆ: ಕ್ರಮ ಕೈಗೊಳ್ಳದ ಬಿಬಿಎಂಪಿ

ಸುಗಮ ಸಂಚಾರಕ್ಕಾಗಿ ಮಾಡಲಾದ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...