ಕೆಎಸ್‌ಆರ್‌ಟಿಸಿ | ಟಿಕೆಟ್‌ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್‌ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎಂದು ನಿಗಮ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “2023ರ ಆಗಸ್ಟ್‌ನಲ್ಲಿ ನಿಗಮದ ತನಿಖಾ ತಂಡಗಳಿಂದ ತಪಾಸಣಾ ಕಾರ್ಯ ನಡೆಸಲಾಗಿದೆ. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,416 ವಾಹನಗಳನ್ನು ತನಿಖೆಗೊಳಪಡಿಸಲಾಗಿದೆ. 3020 ಪ್ರಕರಣಗಳನ್ನು ಪತ್ತೆಹಚ್ಚಿ, 3208 ಟಿಕೆಟ್ ರಹಿತ ಪ್ರಯಾಣಿಕರಿಂದ ₹4,70,801 ದಂಡ ಹಾಕಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ₹69,336 ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ” ಎಂದು ಹೇಳಿದೆ.

ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗಿದೆ. ಹಾಗಾಗಿ, ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...