ವಿದ್ಯುತ್ ತಗುಲಿ ತಾಯಿ-ಮಗು ಸಾವು; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

Date:

ಬೆಂಗಳೂರಿನ ಕಾಡುಗೋಡಿ ಹೋಪ್‌ ಫಾರ್ಮ್‌ ಬಳಿ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವನ್ನಪ್ಪಿದ್ದ ಘಟನೆ ಸಂಬಂಧ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ನೇತೃತ್ವದಲ್ಲಿ ವಿಚಾರಣೆ ಆರಂಭವಾಗಿದೆ.

ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯುತ್ ಮಾರ್ಗಗಳ ನಿರ್ವಹಣೆಯ ಲೋಪದಿಂದಾಗಿ ದುರ್ಘಟನೆ ನಡೆದಿದೆಯೇ ಎಂಬ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

“ಬೆಸ್ಕಾಂನ ಕಚೇರಿ ಇರುವ ಸ್ಥಳದಿಂದ ಕೇವಲ 100 ಮೀಟರ್ ದೂರದಲ್ಲಿ ದುರ್ಘಟನೆ ನಡೆದಿದೆ. ಹಿಂದಿನ ದಿನವೇ ತಂತಿ ತುಂಡಾಗಿ ಬಿದ್ದಿದ್ದರೂ ಅದನ್ನು ಅಧಿಕಾರಿಗಳು ಗಮನಿಸಿಲ್ಲ. ನಿಯಮಿತವಾಗಿ ವಿದ್ಯುತ್‌ ಮಾರ್ಗಗಳನ್ನು ಪರಿಶೀಲಿಸುವುದು, ಸಮಸ್ಯೆಯಿದ್ದಲ್ಲಿ ರಿಪೇರಿ ಮಾಡಿಸುವುದು ಬೆಸ್ಕಾಂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆದರೆ, ಅಧಿಕಾರಿಗಳು ತಮ್ಮ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿಲ್ಲ” ಎಂದು ಲೋಕಾಯುಕ್ತರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಬೆಸ್ಕಾಂನ ಮುಖ್ಯ ಎಂಜಿನಿಯರ್‌, ಪೂರ್ವ ವೃತ್ತದ ಸೂಪರಿಂಟೆಂಡಿಂಗ್ ಎಂಜಿನಿಯರ್‌, ವೈಟ್‌ಫೀಲ್ಡ್‌ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌, ಇ–4 ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸೇರಿದಂತೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...